ಲಖನೌ, ಜು. 21: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನಗಳ ಸ್ನಾತಕೋತ್ತರ ಸಂಸ್ಥೆಯು ತಿಳಿಸಿದೆ.
ಕಲ್ಯಾಣ ಸಿಂಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಮಂಗಳವಾರ ಸಂಜೆಯಿಂದ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಲಾಗಿದೆ.
ಸಿಸಿಎಂ, ಹೃದ್ರೋಗ, ನರರೋಗ, ನೆಪ್ರೊಲಜಿ ಸೇರಿದಂತೆ ವಿವಿಧ ವಿಭಾಗಗಳ ತಜ್ಞರು ಅವರ ಆರೋಗ್ಯದ ಎಲ್ಲಾ ಅಂಶಗಳನ್ನು ನಿಕಟವಾಗಿ ಗಮನಿಸುತ್ತಿದ್ದಾರೆ. ಆಸ್ಪತ್ರೆ ನಿರ್ದೇಶಕರಾದ ಆರ್.ಕೆ ಧಿಮನ್ ಅವರು ಕಲ್ಯಾಣ್ ಸಿಂಗ್ ಅವರಿಗೆ ನೀಡುತ್ತಿರುವ ಚಿಕಿತ್ಸೆ ಮೇಲೆ ನಿಗಾ ಇಟ್ಟಿದ್ದಾರೆಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಾಜಸ್ಥಾನದ ಮಾಜಿ ರಾಜ್ಯಪಾಲರೂ ಆಗಿರುವ ಕಲ್ಯಾಣ್ ಸಿಂಗ್ ಅವರು ಸೋಂಕು ಮತ್ತಿತರ ಆರೋಗ್ಯ ಸಮಸ್ಯೆಯಿಂದಾಗಿ ಜುಲೈ 4 ರಂದು ಆಸ್ಪತ್ರೆಗೆ ದಾಖಲಾಗಿದ್ದರು.