ನಗೋದನ್ನೇ ಬ್ಯಾನ್‌ ಮಾಡಿದ ಉತ್ತರ ಕೊರಿಯಾ ಸರ್ಕಾರ

ಪ್ಯೊನ್ಗ್‌ಯಾಂಗ್ ಡಿ 17 :  ಕೆಲವು ಸರ್ಕಾರಗಳು ಎಂತೆಂತಾ ವಿಚಿತ್ರ ನಿಯಮಗಳನ್ನು ತರುತ್ತವೆ ಅಂದ್ರೆ ಉತ್ತರ ಕೊರಿಯಾದ ಮಾಜಿ ನಾಯಕ ಕಿಮ್ ಜಾಂಗ್ ಇಲ್ 10ನೇ ವರ್ಷದ ಪುಣ್ಯತಿಥಿಯ ಅಂಗವಾಗಿ ಉತ್ತರ ಕೊರಿಯಾದಲ್ಲಿ 11 ದಿನಗಳ ಕಾಲ ನಗುವುದನ್ನು ನಿಷೇಧಿಸಲಾಗಿದೆ, ಶೋಕಾಚರಣೆ ನಡೆಸುವಂತೆ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸುಗ್ರೀವಾಜ್ಞೆ ಹೊರಡಿಸಿದ್ದಾರೆ.

ಈ ಕುರಿತಂತೆ ಈಶಾನ್ಯ ಗಡಿ ನಗರವಾದ ಸಿನುಯಿಜುವಿನ ನಾಗರಿಕರೊಬ್ಬರು ರೇಡಿಯೋ ಫ್ರೀ ಏಷ್ಯಾಗೆ ಪ್ರತಿಕ್ರಿಯಿಸಿದ್ದು, ಪ್ರಜೆಗಳು ಮದ್ಯಪಾನ, ದಿನಸಿ, ಶಾಪಿಂಗ್ ಮಾಡಬಾರದು ಮತ್ತು ವಿರಾಮ ಚಟುವಟಿಕೆಯಲ್ಲಿ ತೊಡಗಬಾರದು. ಒಂದು ವೇಳೆ 11 ದಿನಗಳ ಶೋಕಾಚರಣೆಯ ಅವಧಿಯಲ್ಲಿ ಈ ನಿಯಮಗಳನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಈ ಮುನ್ನ ಶೋಕಾಚರಣೆಯ ವೇಳೆ ಮದ್ಯಪಾನ ಮಾಡಿ ಸಿಕ್ಕಿಬಿದ್ದ ಕೆಲವರನ್ನು ಬಂಧಿಸಿ ಅವರನ್ನು ಸೈದ್ಧಾಂತಿಕ ಅಪರಾಧಿಗಳೆಂದು ಪರಿಗಣಿಸಿ ಪೊಲೀಸರು ಕರೆದೊಯ್ದಿದ್ದರು. ಆದರೆ ಮತ್ತೆ ಅವರು ಕಾಣಿಸಿಕೊಂಡಿಲ್ಲ. ಅಲ್ಲದೇ ಶೋಕಾಚರಣೆಯ ಸಮಯದಲ್ಲಿ ಕುಟುಂಬದ ಸದಸ್ಯರೇ ಸತ್ತರೂ ಜೋರಾಗಿ ಅಳುವಂತಿಲ್ಲ. ಶೋಕಾಚರಣೆ ಮುಗಿದ ನಂತರವಷ್ಟೇ ದೇಹವನ್ನು ಹೊರತೆಗೆಯಬೇಕು. ಶೋಕ ದಿನಗಳಲ್ಲಿ ಜನ್ಮದಿನವನ್ನು ಆಚರಿಸಿಕೊಳ್ಳುವಂತಿಲ್ಲ. ಶೋಕಾಚರಣೆಯ ಅವಧಿಯಲ್ಲಿ ಮನಸ್ಥಿತಿಗೆ ಹಾನಿ ಮಾಡುವವರನ್ನು ಗುರುತಿಸಿ ಶಿಕ್ಷಿಸಲು ಪೊಲೀಸರಿ ಅಧಿಕಾರ ನೀಡಲಾಗಿರುವುದಾಗಿ ತಿಳಿಸಿದ್ದಾರೆ.

ಕಿಮ್ ಜಾಂಗ್ ಇಲ್ ಅವರ ಪುಣ್ಯತಿಥಿಯ ಪ್ರಯುಕ್ತ ಉತ್ತರ ಕೊರಿಯಾದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಇವುಗಳಲ್ಲಿ ಅವರ ಫೋಟೋ ಮತ್ತು ಪೇಟಿಂಗ್ ಅನ್ನು ಸಾರ್ವಜನಿಕರ ಪ್ರದರ್ಶನಕ್ಕೆ ಇಡಲಾಗಿದೆ ಮತ್ತು ಸಂಗೀತ ಕಚೇರಿಯನ್ನು ಏರ್ಪಡಿಸಲಾಗಿದೆ.

Latest News

ದೇಶ-ವಿದೇಶ

ರೇಷನ್ ಕಾರ್ಡ್ ಹೊಂದಿರುವ ಬಡವರಿಗೆ ರಾಷ್ಟ್ರಧ್ವಜ ಖರೀದಿಸುವಂತೆ ಒತ್ತಾಯಿಸುತ್ತಿದ್ದಾರೆ : ರಾಹುಲ್ ಗಾಂಧಿ

ಇದು ಬಿಜೆಪಿ ಸರ್ಕಾರದ ಪ್ರಚಾರ ಪಿತೂರಿ. ಈ ರೀತಿ ಮಾಡುವ ಮೂಲಕ ಬಿಜೆಪಿಯು “ರಾಷ್ಟ್ರೀಯತೆ”ಯನ್ನು ಮಾರಾಟ ಮಾಡುತ್ತಿದೆ ಮತ್ತು ಬಡವರ ಆತ್ಮಗೌರವಕ್ಕೆ ಧಕ್ಕೆ ತಂದಿದೆ ಎಂದು ಆರೋಪಿಸಿದ್ದಾರೆ.

ರಾಜಕೀಯ

`ಬ್ಲ್ಯಾಕ್‌ ಮೇಲ್‌ ಕುಮಾರಸ್ವಾಮಿʼ ; ಕಣ್ಣೀರ ಕೋಡಿಯಿಂದ ಕುಟುಂಬಕ್ಕೆ ಲಾಭವೇ ಹೊರತು ಜನತೆಗೇನು ಲಾಭ? : ಅಶ್ವಥ್ ನಾರಾಯಣ್‌

ನೀವು ಈವರೆಗೆ ಹೇಳಿದ ಸುಳ್ಳುಗಳನ್ನು ಎಣಿಸಲು ಸಾಧ್ಯವೇ? ಎಂದು ಸಚಿವ(Minister) ಅಶ್ವಥ್‌ ನಾರಾಯಣ್(Ashwath Narayan) ಪ್ರಶ್ನಿಸಿದ್ದಾರೆ.

ದೇಶ-ವಿದೇಶ

ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈದ ಭಾರತೀಯ ಸೇನೆ ; ದಾಳಿಯಲ್ಲಿ ಮೂವರು ಯೋಧರು ಹುತಾತ್ಮ!

ಸ್ವಾತಂತ್ರ್ಯ ದಿನಾಚರಣೆ(Independence Day) ಸಂದರ್ಭದಲ್ಲಿ ಉಗ್ರರು ದೇಶದ ವಿವಿಧ ಭಾಗಗಳಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ದೇಶ-ವಿದೇಶ

‘ಡಾನಿ’ ಬುಡಕಟ್ಟು ಜನಾಂಗದಲ್ಲಿ ಬೆರಳನ್ನು ಕತ್ತರಿಸುವುದೇ ಸಂಪ್ರದಾಯವಂತೆ!

ಇಂಡೋನೇಷ್ಯಾದ, ಪಪುವಾ ಗಿನಿಯಾ ದ್ವೀಪದಲ್ಲಿ ವಾಸಿಸುವ ಎಲ್ಲಾ ಡಾನಿ ಬುಡಕಟ್ಟಿನ ಮಹಿಳೆಯರನ್ನು ಕತ್ತರಿಸಿದ ಬೆರಳುಗಳಿಂದ ಬದುಕಲು ಒತ್ತಾಯಿಸಲಾಗುತ್ತದೆ.