• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಉತ್ತರ ಪ್ರದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಅತ್ಯಾಚಾರ ಕೃತ್ಯ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಉತ್ತರ ಪ್ರದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಅತ್ಯಾಚಾರ ಕೃತ್ಯ
0
SHARES
0
VIEWS
Share on FacebookShare on Twitter

ಲಕ್ನೊ, ಜ. 06: ದೇವಸ್ಥಾನಕ್ಕೆ ಹೋಗಿದ್ದ  50ರ ವಯಸ್ಸಿನ ಮಹಿಳೆಯನ್ನು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿ ನಂತರ ಭೀಕರವಾಗಿ ಹತ್ಯೆಗೈದಿದ್ದಾರೆ.

ಬದೌನ್ ಜಿಲ್ಲೆಯ ಉಘೈಟಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ರವಿವಾರ ಸಂಜೆ ದೇವಸ್ಥಾನಕ್ಕೆ ಪೂಜೆಗೆಂದು ಹೋದವರು ಮತ್ತೆ ವಾಪಸಾಗಲಿಲ್ಲ ಎಂದು ಮಗ ಚಿಂತಿತನಾಗಿದ್ದ. ಆದರೆ ಆ ದಿನ ರಾತ್ರಿ 12 ಗಂಟೆ ಸುಮಾರಿಗೆ ದುಷ್ಕರ್ಮಿಗಳಾದ ಮಹಂತಾ ಬಾಬಾ ಸತ್ಯನಾರಾಯಣ, ಆತನ ಸಹಚರರಾದ ವೆದ್ರಮ್ ಹಾಗೂ ಚಾಲಕ ಜಸ್ಪಾಲ್ ರಕ್ತದ ಮಡುವಿನಲ್ಲಿದ್ದ ಮಹಿಳೆಯನ್ನು ತಮ್ಮದೇ ವಾಹನದಲ್ಲಿ ಕರೆ ತಂದು ಮಹಿಳೆಯ ಮನೆಯ ಬಳಿ ಬಿಟ್ಟು ಪರಾರಿಯಾಗಿದ್ದರು.

ಘಟನೆಗೆ ಸಂಬಂಧಿಸಿ ಅರ್ಚಕ ಸೇರಿ ಮೂವರ ವಿರುದ್ದ ಎಫ್ ಐಆರ್ ದಾಖಲಿಸಲಾಗಿದ್ದು, ಬಂಧನಕ್ಕಾಗಿ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪದಡಿ ಪೊಲೀಸ್ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ.

“ತಾಯಿ ಪ್ರತಿದಿನ ಪೂಜೆಗಾಗಿ ದೇವಸ್ಥಾನಕ್ಕೆ ಹೋಗುತ್ತಿದ್ದರು. ರವಿವಾರ ಸಂಜೆ 5ಕ್ಕೆ ದೇವಾಲಯಕ್ಕೆ ಹೋದ ತಾಯಿಯನ್ನು ರಾತ್ರಿ 12ರ ಸುಮಾರಿಗೆ ಮೂವರು ದುಷ್ಕರ್ಮಿಗಳು ತಾಯಿಯನ್ನು ಒಂದು ವಾಹನದಲ್ಲಿ ತಂದುಬಿಟ್ಟಿದ್ದಾರೆ” ಎಂದು ಮೃತ ಮಹಿಳೆಯ ಪುತ್ರ ಮಾದ್ಯಮಗಳಿಗೆ ತಿಳಿಸಿದ್ದಾರೆ.

ನಾವು ದೂರು ನೀಡಿದರೂ ಉಘೈಟಿ ಪೊಲೀಸ್ ಠಾಣೆಯ ಅಧಿಕಾರಿ ರವೀಂದ್ರ ಪ್ರತಾಪ್ ಸಿಂಗ್ ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಸಂತ್ರಸ್ತೆಯ ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ಘಟನೆ ನಡೆದು 18 ಗಂಟೆಗಳ ಬಳಿಕ ಸೋಮವಾರ ಮಧ್ಯಾಹ್ನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದು, ಮೂವರು ವೈದ್ಯರ ತಂಡ ಪೋಸ್ಟ್ ಮಾರ್ಟಂ ಮಾಡಿದೆ.

ಪೋಸ್ಟ್ ಮಾರ್ಟಂ ವರದಿಯ ಪ್ರಕಾರ, ಮಹಿಳೆಯ ಖಾಸಗಿ ಭಾಗಕ್ಕೆ ರಾಡ್ ತುರುಕಿಸಲಾಗಿದ್ದು, ತೀವ್ರ ಗಾಯವಾಗಿದೆ. ದುಷ್ಕರ್ಮಿಗಳ ನಡೆಸಿರುವ ಹಲ್ಲೆಗೆ ಮಹಿಳೆಯ ಶ್ವಾಸಕೋಶಕ್ಕೆ ಹಾನಿಯಾಗಿದ್ದು,ಮಹಿಳೆಯ ಪಕ್ಕೆಲುಬು ಹಾಗೂ ಕಾಲು ಮುರಿಯಲಾಗಿದೆ. ಆಕೆಗೆ ತೀವ್ರ ರಕ್ತಸ್ರಾವವೂ ಆಗಿದೆ ಎಂದು ವರದಿಯಾಗಿದೆ. ಪೊಲೀಸರು ಹತ್ಯೆ ಹಾಗೂ ಗ್ಯಾಂಗ್ ರೇಪ್ ಪ್ರಕರಣ ದಾಖಲಿಸಿದ್ದು, ತಲೆಮರೆಸಿಕೊಂಡಿರುವ ಇಬ್ಬರು ದುಷ್ಕರ್ಮಿಗಳನ್ನುಸೆರೆ ಹಿಡಿಯಲು 4 ತಂಡಗಳನ್ನು ರಚಿಸಿದ್ದಾರೆ.

Related News

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.