ಉತ್ತರಾಖಂಡ, ಜು. 03: ಉತ್ತರಾಖಂಡ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ದಾಮಿ ಆಯ್ಕೆಯಾಗಿದ್ದಾರೆ. ಈ ಹಿಂದಿನ ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್ ನಿನ್ನೆ ರಾತ್ರಿ ರಾಜೀನಾಮೆ ಸಲ್ಲಿಸಿದ್ದರು. ಅದರ ಬೆನ್ನಲ್ಲೇ ಇಂದು ಹೊಸ ಮುಖ್ಯಮಂತ್ರಿ ಆಯ್ಕೆಗಾಗಿ ರಾಜ್ಯದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆದಿತ್ತು. ಡೆಹ್ರಾಡೂನ್ನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ 57 ಬಿಜೆಪಿ ಶಾಸಕರು ಪಾಲ್ಗೊಂಡಿದ್ದರು. ಈ ಸಭೆಯಲ್ಲಿ ಚರ್ಚೆ ನಡೆದ ಬಳಿಕ ಪುಷ್ಕರ್ ಸಿಂಗ್ ಧಮಿಯನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ.
ಯಾರು ಈ ಪುಷ್ಕರ್ ಸಿಂಗ್ ಧಮಿ?
ಉತ್ತರಾಖಂಡದ 10ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಪುಷ್ಕರ್ ಸಿಂಗ್ ಧಮಿಯವರಿಗೆ 45 ವರ್ಷ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಆಪ್ತರಾಗಿರುವ ಪುಷ್ಕರ್ ಸಿಂಗ್ರನ್ನು ಮುಖ್ಯಮಂತ್ರಿಯನ್ನಾಗಿ ಇಂದು ಬಿಜೆಪಿಗರು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ. ಖತಿಮಾ ಕ್ಷೇತ್ರದಿಂದ ಎರಡು ಬಾರಿ ಗೆದ್ದು ಶಾಸಕರಾಗಿದ್ದಾರೆ. ಹಾಗೇ, ಭಗತ್ ಸಿಂಗ್ ಕೊಶಿಯಾರಿ ಮುಖ್ಯಮಂತ್ರಿ(2001-2002ರವರೆಗೆ)ಯಾಗಿದ್ದಾಗ ಇವರು ವಿಶೇಷ ಕರ್ತವ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.