ಪಾಟ್ನಾ : ಉತ್ತರ ಪ್ರದೇಶದಲ್ಲಿ 4ನೇ ಹಂತದ ಚುನಾವಣೆ ಪ್ರಾರಂಭ ಆಗಿದ್ದು, 625 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿ. ದ.ಉತ್ತರ ಪ್ರದೇಶದ 9 ಜಿಲ್ಲೆಗಳಲ್ಲಿ ವ್ಯಾಪಿಸಿಕೊಂಡಿರುವ 59 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ಆರಂಭಗೊಂಡಿದ್ದು, 4ನೇ ಹಂತದಲ್ಲಿ ನಡೆಯುತ್ತಿರುವ ಈ ಕ್ಷೇತ್ರಗಳಲ್ಲಿ ಬಿಜೆಪಿ, ಎಸ್’ಪಿ, ಕಾಂಗ್ರೆಸ್, ಬಿಎಸ್’ಪಿ ಸೇರಿ 625 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆ. ಕಳೆದ ವರ್ಷದ ಅಕ್ಟೋಬರ್ 3 ರಂದು ಕಾರು ಹರಿದು ನಾಲ್ವರು ರೈತರು ಸೇರಿ 8 ಮಂದಿ ಸಾವನ್ನಪ್ಪಿದ ಘಟನೆಯಿಂದ ರಾಷ್ಟ್ರ ಮಟ್ಟದಲ್ಲಿ ಕುಖ್ಯಾತಿ ಪಡೆದ ಲಖಿಂಪುರ ಜಿಲ್ಲೆ ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ 4ನೇ ಹಂತದ ಚುನಾವಣೆ ನಡೆಯಲಿದೆ. ಬಳಿಕ ಇನ್ನೂ 3 ಹಂತದ ಚುನಾವಣೆ ಬಾಕಿ ಉಳಿಯಲಿವೆ. ಮಾ.10ಕ್ಕೆ ಮತ ಎಣಿಕೆ ನಡೆಯಲಿದೆ.

ಕೋವಿಡ್19 ಸುರಕ್ಷತೆಯ ಮಾರ್ಗಸೂಚಿಗಳ ಪ್ರಕಾರ ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಪ್ರಾರಂಭಗೊಂಡಿದ್ದು, ಸಂಜೆ 6 ಗಂಟೆಗೆ ಮತದಾನ ಮುಕ್ತಾಯವಾಗಲಿದೆ. ಕೊರೊನಾ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ರೋಡ್ಶೋಗಳು ಮತ್ತು ಭೌತಿಕ ರ್ಯಾಲಿಗಳ ಮೇಲೆ ನಿರ್ಬಂಧ ವಿಧಿಸಿತ್ತು. ಇದರ ಪರಿಣಾಮವಾಗಿ ರಾಜಕೀಯ ಪಕ್ಷಗಳು ವರ್ಚುವಲ್ ಮಾಧ್ಯಮವನ್ನು ಬಳಸಿಕೊಂಡು ಪ್ರಚಾರ ನಡೆಸಿದ್ದವು. ಹೆಚ್ಚಾಗಿ ಮನೆ ಮನೆ ಪ್ರಚಾರಕ್ಕೆ ಆದ್ಯತೆ ನೀಡಲಾಗಿತ್ತು.
ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಒಟ್ಟು ಏಳು ಹಂತದಲ್ಲಿ ನಡೆಯಲಿದ್ದು, ಈಗಾಗಲೇ ಮೂರು ಹಂತದ ಚುನಾವಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇನ್ನೂ ನಾಲ್ಕು ಹಂತದ ಮತದಾನ ನಡೆಯಬೇಕಿದೆ.

ಈ ಹಂತದ ಪ್ರಮುಖ ಅಭ್ಯರ್ಥಿಗಳಲ್ಲಿ ಉತ್ತರ ಪ್ರದೇಶದ ಕಾನೂನು ಸಚಿವ ಬ್ರಿಜೇಶ್ ಪಾಠಕ್ ಅವರು ಲಕ್ನೋ ಕಂಟೋನ್ಮೆಂಟ್ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಮತ್ತು ಎರಡು ಬಾರಿ ಕಾರ್ಪೊರೇಟರ್ ಸುರೇಂದ್ರ ಸಿಂಗ್ ಗಾಂಧಿ ಅವರನ್ನು ಎದುರಿಸುತ್ತಿದ್ದಾರೆ. ಕ್ರಿಮಿನಲ್ ಪ್ರಕರಣಗಳು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಪ್ರಕಾರ, ಉತ್ತರ ಪ್ರದೇಶದ ನಾಲ್ಕನೇ ಹಂತದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಒಟ್ಟು 27% ಅಭ್ಯರ್ಥಿಗಳು ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದರೆ, 37% ರಷ್ಟು ಜನರು 1 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ.

ಪ್ರಮುಖ ಪಕ್ಷಗಳ ಪೈಕಿ ಕಾಂಗ್ರೆಸ್ನ 58 ಅಭ್ಯರ್ಥಿಗಳಲ್ಲಿ 31, ಸಮಾಜವಾದಿ ಪಕ್ಷದ (ಎಸ್ಪಿ) 57 ಅಭ್ಯರ್ಥಿಗಳಲ್ಲಿ 30, ಬಹುಜನ ಸಮಾಜ ಪಕ್ಷದ (ಬಿಎಸ್ಪಿ) 59 ಅಭ್ಯರ್ಥಿಗಳಲ್ಲಿ 26, ಬಿಜೆಪಿಯ 57 ಅಭ್ಯರ್ಥಿಗಳಲ್ಲಿ 23 ಮತ್ತು ಎಎಪಿಯ 45 ಅಭ್ಯರ್ಥಿಗಳಲ್ಲಿ 11 ಅಭ್ಯರ್ಥಿಗಳು ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿದ್ದಾರೆ. ಉತ್ತರ ಪ್ರದೇಶ ಅಸೆಂಬ್ಲಿ ಚುನಾವಣೆ 2022 ಹಂತ 4 ರಲ್ಲಿ ಸ್ಪರ್ಧಿಸುವ ಪ್ರತಿ ಅಭ್ಯರ್ಥಿಯ ಸರಾಸರಿ 2.46 ಕೋಟಿ ರೂ. ಸರಾಸರಿ ಆಸ್ತಿಯನ್ನು ಹೊಂದಿದ್ದಾರೆ.