Bangalore : ನನ್ನ ಸೋಲಿಗೆ ಕಾರಣರಾದವರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳಿ ಇಲ್ಲವಾದಲ್ಲಿ ನಾನು ಸಿಡಿದೇಳಬೇಕಾಗುತ್ತದೆ ಎಂದು ಮಾಜಿ ಸಚಿವ ವಿ ಸೋಮಣ್ಣ (V.Sommanna) ಎಚ್ಚರಿಕೆ ನೀಡಿದರು.
ಕೆಲ ವಿಚಾರಗಳನ್ನ ಲೋಕಸಭೆ (Lok Saba) ಚುನಾವಣೆ ಇರುವುದರಿಂದ ಮಾತನಾಡಲ್ಲ. ನಮ್ಮಂಥವರಿಗೆ ಏನು ಅನಾನುಕೂಲ ಎಂಬ ಮಾಹಿತಿ ಅವರಿಗೆ ಇದೆ. ಅವರಿಗೇ ಅಂಟಿಕೊಂಡು ಹೋಗ್ತೇನೆ ಅಂದರೇ ಬೇರೆ ಮಾತಾಡಬೇಕಾಗುತ್ತೆ ಎಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಹೇಳಿದರು.
ರಾಜ್ಯ ಬಿಜೆಪಿ (BJP) ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ (B. Y. Vijayendra) ಇನ್ನೂ ಯುವಕ. ನೀನು ಬೆಳೆಯಬೇಕು, ರಾಜ್ಯದಲ್ಲಿ ದೊಡ್ಡ ನಾಯಕರು ಅಂತ ಇದ್ದಾರೆ. ಸೋಲಿಗೆ ಕಾರಣರಾದ ಮನೆಹಾಳರನ್ನು ಜೊತೆಯಲ್ಲಿ ಇಟ್ಟುಕೊಳ್ಳಬಾರದು ನಮ್ಮಂತಹವರ ಮೇಲೆ ಗದಾಪ್ರಹಾರ ಆದರೆ ಪರಿಣಾಮ ಆಗುತ್ತದೆ. ಎಷ್ಟರ ಮಟ್ಟಿಗೆ ಪರಿಣಾಮ ಆಗುತ್ತದೆ ಅಂತಾ ಚಿಂತನೆ ಮಾಡಬೇಕು ಎಂದು ಮಾತನಾಡಿದರು.
ವಿಜಯೇಂದ್ರ ಅವರಿಗೆ ಒಳ್ಳೆಯದಾಗಲಿ. ಚಾಮರಾಜನಗರ (Chamarajanagar) ಜಿಲ್ಲೆಗೆ ಬಿ.ವೈ.ವಿಜಯೇಂದ್ರ ಭೇಟಿ ನೀಡುತ್ತಿರುವ ವಿಚಾರವಾಗಿ ಮಾತನಾಡಿದ ಅವರು ವಿಜಯೇಂದ್ರ ರಾಜ್ಯಾಧ್ಯಕ್ಷರು, ಎಲ್ಲಿಗೆ ಬೇಕಾದರೂ ಹೋಗಲಿ ಎಂದು ಮಾತನಾಡಿದರು.
ವಿ ಸೋಮಣ್ಣ ಅವರು ಚಾಮರಾಜನಗರ ಮತ್ತು ವರುಣಾ (Varuna) ಕ್ಷೇತ್ರಗಳಿಂದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಆದರೆ ಈ ಎರಡೂ ಕ್ಷೇತ್ರಗಳಲ್ಲಿ ಸೋತಿದ್ದಾರೆ. ಈ ಸೋಲಿನ ಬಳಿಕ ಸ್ವಪಕ್ಷದವರ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ. ಇದೀಗ ತಮ್ಮ ಸೋಲಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಭವ್ಯಶ್ರೀ ಆರ್ ಜೆ