Visit Channel

ಸಿದ್ದರಾಮಯ್ಯ ಅವರನ್ನು ಅಫ್ಘಾನಿಸ್ತಾನಕ್ಕೆ ಕಳುಹಿಸಬೇಕು – ವಿ. ಶ್ರೀನಿವಾಸ ಪ್ರಸಾದ್

70870586

ಮೈಸೂರುಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah)ರನ್ನು ಅಫ್ಘಾನಿಸ್ಥಾನಕ್ಕೆ ಕಳುಹಿಸಬೇಕೆಂದು ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿಕೆ ನೀಡಿದ್ದಾರೆ ತಾಲಿಬಾನ್ ಆಡಳಿತ ಹೇಗಿದೆ ಎಂಬುದನ್ನು ಸಿದ್ದರಾಮಯ್ಯ ಖುದ್ದಾಗಿ ತಿಳಿದುಕೊಳ್ಳಬೇಕಾಗಿದೆ. ಹೀಗಾಗಿ ಅವರನ್ನು ತಕ್ಷಣವೇ ಒಂದು ತಿಂಗಳುಗಳ ಕಾಲ ತಾಲಿಬಾನ್ ಆಡಳಿತವಿರುವ ಅಫ್ಘಾನಿಸ್ತಾನಕ್ಕೆ  ಕಳುಹಿಸಿಕೊಡಬೇಕೆಂದು ನಾನು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.

ಮೈಸೂರಿನ ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಶನಿವಾರ ಆಯೋಜಿಸಿದ್ದ .ವೆಂಕಟರಾಮು ಅಭಿನಂದನಾ ಕಾರ್ಯಕ್ರಮ’ದಲ್ಲಿ ಭಾಗವಹಿಸಿದ್ದ ವಿ.ಶ್ರೀನಿವಾಸ್ ಪ್ರಸಾದ್ ಸುದ್ದಿಗಾರರೊಂದಿಗೆ ಮಾತನಾಡಿ ಸಿದ್ದರಾಮಯ್ಯ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ.

 ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ, ವಿರೋಧ ಪಕ್ಷಗಳಿಗೆ ಜವಾಬ್ದಾರಿ ಇದೆ. ವಿರೋಧ ಪಕ್ಷದ ನಾಯಕರಾದವರು ವಿವೇಚನೆಯಿಂದ ಜವಾಬ್ದಾರಿಯುತವಾಗಿ ಮಾತನಾಡಬೇಕು. ಆದರೆ ದೇಶದ ಪ್ರಧಾನಿ(PM of India) ಬಗ್ಗೆ ಬೇಜವಾಬ್ದಾರಿತನದಿಂದ ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ ಎಂದು ವಿ.ಶ್ರೀನಿವಾಸ್ ಪ್ರಸಾದ್ ಅವರು ಸಿದ್ದರಾಮಯ್ಯ(Siddaramaiah) ವಿರುದ್ಧ ಕಿಡಿಕಾರಿದ್ದಾರೆ.

ಪ್ರಧಾನಿ ಮೋದಿ(PM Modi)ಯವರ ಬಗ್ಗೆ ಅವಹೇಳನಕಾರಿಯಾಗಿ ಟೀಕಿಸುತ್ತಿರುವುದು ನನಗೆ ಬಹಳ ಮನಸ್ಸಿಗೆ ನೋವಾಗಿದೆ. ತಾಲಿಬಾನ್(Taliban) ಆಡಳಿತವಿರುವ ಅಫ್ಘಾನಿಸ್ತಾನಕ್ಕೆ ಸಿದ್ದರಾಮಯ್ಯ 1 ತಿಂಗಳು ಹೋಗಿ ಅಲ್ಲಿ ಇದ್ದು ಬರಲಿ. ಆಮೇಲೆ ಮಾತನಾಡಲಿ. ಯಾವುದಕ್ಕೂ ಒಂದು ಇತಿಮಿತಿ ಇರುತ್ತದೆ. ನಾನು ಇಲ್ಲಿ ಅಭಿನಂದನಾ ಕಾರ್ಯಕ್ರಮಕ್ಕೆ ಬಂದಿದ್ದೇನೆ. ನಾನು ಪತ್ರಿಕಾಗೋಷ್ಠಿ ಆಯೋಜಿಸಿದರೆ ಈ ಬಗ್ಗೆ ಮಾತನಾಡುತ್ತೇನೆ ಅಂತಾ ಅವರು ಹೇಳಿದ್ದಾರೆ.

ಹಾನಗಲ್ ಮತ್ತು ಸಿಂದಗಿ ಉಪಚುನಾವಣೆಗಳ ಬಗ್ಗೆ ಮಾತನಾಡಿರುವ ವಿ.ಶ್ರೀನಿವಾಸ್ ಪ್ರಸಾದ್, ‘ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಭಾರಿಸಲಿದೆ’ ಅಂತಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಉಪಚುನಾವಣೆ ಅಖಾಡದಲ್ಲಿ ನಾಯಕರು ನಡೆಸುತ್ತಿರುವ ವಾಗ್ದಾಳಿಯನ್ನು ಮಾಧ್ಯಮಗಳಲ್ಲಿ ನೋಡುತ್ತಿದ್ದೇನೆ. ಎರಡು ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲ್ಲಲು ಅವಕಾಶ ಇದೆ ಅಂತಾ ಅವರು ಹೇಳಿದ್ದಾರೆ.  

Latest News

Dakshina Kannada
ರಾಜ್ಯ

ಎಚ್ಚರ! ಅಪಾಯದಲ್ಲಿದೆ ದ.ಕ ಜಿಲ್ಲೆಯ ಬಂಟ್ವಾಳ ಕಿಂಡಿ ಅಣೆಕಟ್ಟು ಸೇತುವೆ

ಕಿಂಡಿ ಅಣೆಕಟ್ಟು ಹಾಗೂ ಸೇತುವೆಯ ಕಾಮಗಾರಿಯ ಕರ್ಮಕಾಂಡ. ಕಾಮಗಾರಿ ಪೂರ್ಣ ಆಗುವ ಮೊದಲೇ ತಡೆಗೋಡೆಯ ಕಾಮಗಾರಿಯ ಅಡಿಪಾಯನೇ ಕಿತ್ತು ಹೊರಗೆ ಬಂದಿದೆ!

BJP
ರಾಜಕೀಯ

ಬಿಜೆಪಿ ನಾಯಕರು ನಮಗೆ ದೇಶಪ್ರೇಮದ ಪಾಠ ಮಾಡುವುದು ಆತ್ಮವಂಚನೆಯಾಗುತ್ತದೆ : ಸಿದ್ದರಾಮಯ್ಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಕರಾವಳಿಯಲ್ಲಿ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು(Praveen Nettaru) ಮನೆಗೆ ಮಾತ್ರ ಹೋಗಿ ಪರಿಹಾರ ಕೊಟ್ಟಿದ್ದಾರೆ.

Malyalam
ಮನರಂಜನೆ

ನಟನೆಯಲ್ಲಿ ಸೋಲನ್ನು ಕಂಡರೂ ಕುಗ್ಗದೆ, ಇಂದು ಭಾರತ ಚಿತ್ರರಂಗವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ ನಟ ಫಹಾದ್ ಫಾಸಿಲ್!

ಫಹಾದ್ ಸಿನಿಮಾಗಳು ತಕ್ಕಮಟ್ಟಿಗೆ ಹಿಟ್ ಎನಿಸಿದರೂ, ಇವರ ಈಗಿನ ಸಿನಿಮಾ ಪ್ರಸಿದ್ಧಿಗೆ ಹೋಲಿಸಿದರೆ ಹಿಂದಿನ ಸಿನಿಮಾಗಳು ಏನೇನೂ ಆಗಿರಲಿಲ್ಲ.

Kabbadi Player
ದೇಶ-ವಿದೇಶ

ಪಲ್ಟಿ ಹೊಡೆಯುವ ಯತ್ನದಲ್ಲಿ ಕುಸಿದು ಬಿದ್ದು ಕಬಡ್ಡಿ ಆಟಗಾರ ಸಾವು! ; ವೀಡಿಯೋ ವೈರಲ್

ಕಬಡ್ಡಿ(Kabbadi) ಆಟಗಾರರೊಬ್ಬ ಸೋಮರ್ ಸಾಲ್ಟ್ ಹೊಡೆಯುತ್ತಿದ್ದಾಗ ಕುಸಿದು ಬಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ(Hospital) ಮೃತಪಟ್ಟಿದ್ದಾರೆ.