ಕನ್ನಡಿಗರಿಗೆ ಕಡ್ಡಾಯ ಉದ್ಯೋಗ – ವಿ. ಸುನೀಲ್ ಕುಮಾರ್

ಉಡುಪಿ ನ 01 : ಕನ್ನಡಿಗರಿಗೆ ಎಲ್ಲಾ ಉದ್ದಿಮೆಗಳಲ್ಲೂ ಕಡ್ಡಾಯ ಉದ್ಯೋಗ ನೀಡುವ ಸಲುವಾಗಿ ರಾಜ್ಯ ಸರ್ಕಾರ ಹೊಸ ಹೆಜ್ಜೆಯನ್ನು ಇಟ್ಟಿದ್ದು, ರಾಜ್ಯದ ಎಲ್ಲಾ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಪ್ರಸ್ತುತ ಅಗತ್ಯತೆಗೆ ಅನುಗುಣವಾಗಿ ಸರೋಜಿನಿ ಮಹಿಷಿ ವರದಿಯಲ್ಲಿ ಕೆಲವು ಮಾರ್ಪಾಡುಗೊಳಿಸುವ ಬಗ್ಗೆ ಚಿಂತಿಸಲಾಗಿದೆ. ಈ ಬಗ್ಗೆ ಕಾನೂನಿನ ಚೌಕಟ್ಟಿನಲ್ಲಿ ಅವಕಾಶ ಕಲ್ಪಿಸಲಾಗುವುದೆಂದು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ ತಿಳಿಸಿದ್ದಾರೆ.

ಅವರು ಜಿಲ್ಲಾಡಳಿತದ ವತಿಯಿಂದ ಉಡುಪಿ ಅಜ್ಜರಕಾಡು ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ 66 ನೇ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿದ ಬಳಿಕ ಸಂದೇಶ ನೀಡಿ ಮಾತನಾಡಿದರು.

ರಾಜ್ಯದಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕೆಂಬುವುದು ರಾಜ್ಯ ಸರಕಾರದ ಚಿಂತನೆ. ಜಾಗತೀಕರಣ ಹಾಗೂ ಐಟಿ, ಬಿಟಿ ಕಂಪನಿಗಳಿಂದಾಗಿ ಸ್ಥಿತಿಯಲ್ಲಿ ಬದಲಾವಣೆ ಆಗಿದೆ. ಹೀಗಾಗಿ ಕನ್ನಡಿಗರಿಗೆ ಉದ್ಯೋಗ ಕಡ್ಡಾಯ ಮಾಡಲಾಗುತ್ತಿಲ್ಲ‌. ಈ‌ ನಿಟ್ಟಿನಲ್ಲಿ ಸರೋಜಿನಿ ಮಹಿಷಿ ವರದಿಯಲ್ಲಿ ಮಾರ್ಪಡು ಮಾಡಲಾಗುತ್ತದೆ ಎಂದರು.


Exit mobile version