download app

FOLLOW US ON >

Wednesday, June 29, 2022
Breaking News
ಗವಿಮಠಕ್ಕೆ ಹರಿದು ಬರುತ್ತಿದೆ ದೇಣಿಗೆ, ಸರ್ಕಾರದಿಂದಲೂ 10 ಕೋಟಿ ಘೋಷಣೆGST ಹೊಸ ದರಗಳ ವಿವರಣೆ ; ವಸ್ತುಗಳ ಸಂಪೂರ್ಣ ಪಟ್ಟಿ ಇಲ್ಲಿದೆಬಿಜೆಪಿ ಅಂದ್ರೆ ಬಿಸ್ನೆಸ್ ಕ್ಲಾಸಿನ ಕಾಮಧೇನು : ಹೆಚ್.ಡಿಕೆಚಾಮುಂಡೇಶ್ವರಿ ಅಮ್ಮನವರ ಆಷಾಢ ಶುಕ್ರವಾರದ ದರ್ಶನಕ್ಕೆ ಉಚಿತ ಸರ್ಕಾರಿ ಬಸ್ ಸೇವೆಮಂಡ್ಯ ಜನರಿಗಾಗಿ ಮಾತ್ರ ನಾನು ರಾಜಕೀಯಕ್ಕೆ ಬಂದಿದ್ದೇನೆ ; ಸುಮಲತಾಕನ್ಹಯ್ಯಾ ಹತ್ಯೆ ; ಹಿಂಸೆ ಪರಿಹಾರ ಅಲ್ಲ, ಉತ್ತರವೂ ಅಲ್ಲ : ಸಿದ್ದರಾಮಯ್ಯನೂಪುರ್ ಶರ್ಮಾ ಹೇಳಿಕೆಗೆ ಬೆಂಬಲ ನೀಡಿದ ವ್ಯಕ್ತಿಯ ಶಿರಚ್ಛೇದ‘ಅಗ್ನಿವೀರ’ ಹುದ್ದೆಗೆ ನಿರೀಕ್ಷೆಗೂ ಮೀರಿ ಬಂದ ಅರ್ಜಿಗಳು40% ಕಮಿಷನ್ ಆರೋಪ : ಗುತ್ತಿಗೆದಾರರ ಸಂಘದಿಂದ ವರದಿ ಕೇಳಿದ ಗೃಹ ಸಚಿವಾಲಯಏಷ್ಯಾ ಖಂಡದಲ್ಲೇ ಮೊಟ್ಟ ಮೊದಲ ವಿದ್ಯುತ್ ದಾರಿದೀಪ ಅಳವಡಿಸಲ್ಪಟ್ಟ ನಗರ ‘ನಮ್ಮ ಬೆಂಗಳೂರು’
English English Kannada Kannada

ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ!

ದಾವಣಗೆರೆ ಜಿಲ್ಲೆಯ ಬೇತೂರು ಹಾಗೂ ಜಗಳೂರು ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಮೇಲ್ವೀಚಾರಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
job

ದಾವಣಗೆರೆ ಜಿಲ್ಲೆಯ ಬೇತೂರು ಹಾಗೂ ಜಗಳೂರು ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಮೇಲ್ವೀಚಾರಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ದಾವಣಗೆರೆ ತಾಲ್ಲೂಕಿನ ಬೇತೂರು ಹಾಗೂ ಜಗಳೂರು ತಾಲ್ಲೂಕಿನ ಬಿಸ್ತುವಳ್ಳಿ ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ.
ದಾವಣಗೆರೆ ತಾಲ್ಲೂಕಿನ ಬೇತೂರು-2ಎ (ಮಹಿಳೆ), ಜಗಳೂರು ತಾಲ್ಲೂಕಿನ ಬಿಸ್ತುವಳ್ಳಿ, ಸಾಮಾನ್ಯ ಗ್ರಾಮೀಣ ಅಭ್ಯರ್ಥಿಗೆ ಮೀಸಲಾತಿ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಟ ಎಸ್ಎಸ್ಎಲ್ಸಿ ಉತ್ತೀರ್ಣವಾಗಿರಬೇಕು. ಸ್ಥಳೀಯ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿದವರಾಗಿರಬೇಕು. ಈ ಕುರಿತು ತಹಶೀಲ್ದಾರ್ರಿಂದ ಪಡೆದ ರಹವಾಸಿ ಪ್ರಮಾಣ ಪತ್ರ ಹಾಗೂ ಸ್ಥಳೀಯ ಮತದಾರರ ಪಟ್ಟಿಯ ಭಾಗದ ಪ್ರತಿ ಸಲ್ಲಿಸಬೇಕು. ನಿಗದಿಪಡಿಸಿದ ಮೀಸಲಾತಿಗೆ ಅನುಗುಣವಾಗಿ ಮಾತ್ರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ವಯಸ್ಕರ ಶಿಕ್ಷಣದಡಿ ಮುಂದುವರಿಕಾ ಕಲಿಕಾ ಕೇಂದ್ರಗಳ ಪ್ರೇರಕ, ಉಪಪ್ರೇರಕ ಅಥವಾ ಸಂಯೋಜಕರಾಗಿ ಕಾರ್ಯನಿರ್ವಹಿಸಿದ್ದಲ್ಲಿ ಸೇವಾ ಪ್ರಮಾಣಪತ್ರ ಸಲ್ಲಿಸಿದಲ್ಲಿ ಆದ್ಯತೆ ನೀಡಲಾಗುವುದು ಅಲ್ಲದೆ ಗ್ರಂಥಾಲಯ ವಿಜ್ಞಾನ ತರಬೇತಿ ಪಡೆದವರಿಗೆ ಆದ್ಯತೆ ನೀಡಲಾಗುತ್ತದೆ.

ಸೇವಾ ಪ್ರಮಾಣ ಪತ್ರ ಅಥವಾ ಗ್ರಂಥಾಲಯ ವಿಜ್ಞಾನ ತರಬೇತಿ ಪಡೆಯದ ಅಭ್ಯರ್ಥಿಗಳು ಇಲ್ಲದಿದ್ದಲ್ಲಿ ಎಸ್ಎಸ್ಎಲ್ಸಿ ಅಂಕಗಳ ಆಧಾರದ ಮೇಲೆ ಅಭ್ಯರ್ಥಿ ಆಯ್ಕೆ ಮಾಡಲಾಗುತ್ತದೆ. ನಿಗದಿತ ಅರ್ಜಿ ನಮೂನೆಯನ್ನು ಸಂಬಂಧಪಟ್ಟ ಗ್ರಾಮ ಪಂಚಾಯತಿಗಳ ಪಿಡಿಒ ಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಎಸ್ಎಸ್ಎಲ್ಸಿ ಅಂಕಪಟ್ಟಿ ಮೀಸಲಾತಿ ಪ್ರಮಾಣ ಪತ್ರ, ರಹವಾಸಿ ಪ್ರಮಾಣಪತ್ರ ಸೇರಿದಂತೆ ಅಗತ್ಯ ದಾಖಲೆ ಲಗತ್ತಿಸಿ, ಆಯಾ ಗ್ರಾಮ ಪಂಚಾಯತಿಗಳ ಕಾರ್ಯದರ್ಶಿ ಅಥವಾ ಪಿಡಿಒಗೆ ಸಲ್ಲಿಸಬೇಕು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಮಾರ್ಚ್ 14 ಕೊನೆಯ ದಿನವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 12 ಸಾವಿರ ರೂ. ಗೌರವ ಸಂಭಾವನೆ ನಿಗದಿ ಮಾಡಲಾಗಿದೆ. ಮೀಸಲಾತಿಗನುಸಾರ ನೇಮಕಾತಿ ಮಾಡಲಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮುಖ್ಯ ಗ್ರಂಥಾಲಯಾಧಿಕಾರಿಗಳ ಕಚೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಎಸ್ಬಿಎಂ ಕಟ್ಟಡ, ನಿಟ್ಟುವಳ್ಳಿ ಹೊಸ ಬಡಾವಣೆ, ದಾವಣಗೆರೆ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 8722313666.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article