ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ 119 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಅಧೀನದಲ್ಲಿರುವ ದೇಶದ ಪ್ರತಿಷ್ಠಿತ ಸಂಸ್ಥೆ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ನಲ್ಲಿ (Bharat Earth Movers Limited) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೊಮಾ ಟ್ರೈನಿ (Diploma Trainee), ಸ್ಟಾಫ್ ನರ್ಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ವಯೋಮಿತಿ, ಅರ್ಜಿಶುಲ್ಕ ಅನೇಕ ಮಾಹಿತಿಯನ್ನು ಇಲ್ಲಿ ನೀಡಲಾಗದೆ.

ಹುದ್ದೆಯ ಹೆಸರು: BEML ವಿವಿಧ ಹುದ್ದೆಗಳು

ಒಟ್ಟು ಹುದ್ದೆಗಳು: 119

ಶೈಕ್ಷಣಿಕ ವಿದ್ಯಾರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ, ITI, ಡಿಪ್ಲೋಮಾ, BSc, ನರ್ಸಿಂಗ್ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ: ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳೂ ಕನಿಷ್ಠ 29 ವರ್ಷ ಗರಿಷ್ಠ 35 ವರ್ಷ ನಿಗದಿ ಪಡಿಸಲಾಗಿದೆ.

ವೇತನ ಶ್ರೇಣಿ:
ಹುದ್ದೆಗಳಿಗೆ ಅನುಸಾರ ವೇತನ ನಿಗದಿಪಡಿಸಲಾಗದೆ.

ಅರ್ಜಿಶುಲ್ಕ:
GEN / EWS / OBC ಅಭ್ಯರ್ಥಿಗಳು : 200 ರೂ.ಗಳು
SC/ST/ PWD ಅಭ್ಯರ್ಥಿಗಳು – ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಮತು ಸಂದರ್ಶನ

ಉದ್ಯೋಗ ಸ್ಥಳ:
ಬೆಂಗಳೂರು, ಕರ್ನಾಟಕ

ಪ್ರಮುಖ ದಿನಾಂಕಗಳು:
ಅರ್ಜಿಸಲ್ಲಿಕೆಗೆ ಪ್ರಾರಂಭ ದಿನಾಂಕ: 27/09/2023
ಅರ್ಜಿಸಲ್ಲಿಕೆಗೆ ಕೊನೆಯ ದಿನಾಂಕ: 18/10/2023

ಹೆಚ್ಚಿನ ಮಾಹಿತಿಗಾಗಿ ಈ ವೆಬ್ಸೈಟ್ಗೆ ಭೇಟಿ ನೀಡಿ : https://www.bemlindia.in/

Exit mobile version