ನ್ಯಾಷನಲ್ ಫರ್ಟಿಲೈಜರ್ಸ್ ಲಿಮಿಟೆಡ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಫರ್ಟಿಲೈಜರ್ಸ್ ಲಿಮಿಟೆಡ್ನಲ್ಲಿ (National Fertilizers Limited) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಿರುವ ಅರ್ಹತೆ ಹಾಗೂ ಮಾನದಂಡಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹುದ್ದೆಗಳ ವಿವರ
ಮ್ಯಾನೇಜ್ಮೆಂಟ್ ಟ್ರೈನಿ (Management Trainee) : 60
ಮ್ಯಾನೇಜ್ಮೆಂಟ್ ಟ್ರೈನಿ : 10
ಮ್ಯಾನೇಜ್ಮೆಂಟ್ ಟ್ರೈನಿ : 04

ವೇತನ:
ಮ್ಯಾನೇಜ್ಮೆಂಟ್ ಟ್ರೈನಿ (ಮಾರ್ಕೆಟಿಂಗ್) : 40000-140000ರೂ.ಗಳು
ಮ್ಯಾನೇಜ್ಮೆಂಟ್ ಟ್ರೈನಿ (ಫೈನಾನ್ಸ್ ಅಂಡ್ ಅಕೌಂಟ್) : 40000-140000 ರೂ.ಗಳು
ಮ್ಯಾನೇಜ್ಮೆಂಟ್ ಟ್ರೈನಿ (ಕಾನೂನು) : 40000-140000 ರೂ.ಗಳು

ಶೈಕ್ಷಣಿಕ ವಿದ್ಯಾರ್ಹತೆ : ಅಂಗೀಕೃತ ವಿಶ್ವವಿದ್ಯಾಲಯದಿಂದ BBM/ MBA / ಕಾಮರ್ಸ್(Commerce) / ಕಾನೂನು ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು.

ವಯೋಮಿತಿ : ಕನಿಷ್ಠ 18 ವರ್ಷ ಮತ್ತುಗರಿಷ್ಠ 27 ವರ್ಷ ವಯಸ್ಸು ಮೀರಿರಬಾರದು. OBC 3 ವರ್ಷ, SC / ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ :
GM / OBC / EWS ಅಭ್ಯರ್ಥಿಗಳಳು : 700ರೂ.ಗಳು
SC / ST / PWD / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ

ಪ್ರಮುಖ ದಿನಾಂಕಗಳು
ಆನ್ಲೈನ್ ಅರ್ಜಿ ಸಲ್ಲಿಕೆಗೆ ಆರಂಭಿಕ ದಿನಾಂಕ : 02-11-2023
ಆನ್ಲೈನ್ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : 01-12-2023

Exit mobile version