ಬೆಂಗಳೂರು ಜ 3 : 15 ವರ್ಷ ಮೇಲ್ಪಟ್ಟವರಿಗೆ ಇಂದಿನಿಂದ ಲಸಿಕೆ ನೀಡಲು ಸರ್ಕಾರ ನಿರ್ಧರಿಸಿದ್ದು, ಈ ಹಿನ್ನಲೆಯಲ್ಲಿ ಕೆಲವೊಂದಿಷ್ಟು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು ಈ ಮಾರ್ಗಸೂಚಿಗಳು ಹೀಗಿವೆ
- ಕೋವಿಡ್-19 ಲಸಿಕಾಕರಣ ಪ್ರಕ್ರಿಯೆಗಾಗಿ ಶಾಲೆಯ ಗುರುತಿನ ಚೀಟಿ ಅಥವಾ ಆಧಾರ್ ಬಳಸಿ ಫೋಟೋ ಐಡಿಯನ್ನು ಹಾಜರುಪಡಿಸಬೇಕು
- ಅಸ್ವಸ್ಥತೆ ಹೊಂದಿರುವ ಮಕ್ಕಲಿಗೆ ಲಸಿಕೆ ನೀಡಲು ಪೋಷಕರ ಸಹಮತ ಅಗತ್ಯ. ಆರೋಗ್ಯ ಕೇಂದ್ರಗಳಲ್ಲಿಯೇ ವೈದ್ಯರಿಂದ ಮೇಲ್ವಿಚಾರಣೆ ನಡೆಸಬೇಕು
- ಶಿಕ್ಷಣ ಸಂಸ್ಥೆಗಳಲ್ಲಿ ಲಸಿಕೆ ಪಡೆಯದವರನ್ನು ಗುರುತಿಸಿ, ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಹಾಕಿಸಲು ವ್ಯವಸ್ಥೆ ಮಾಡಬೇಕು
- ಖಾಸಗಿ ಶಾಲೆಗಳು ಇಷ್ಟಪಟ್ಟಲ್ಲಿ ಖಾಸಗಿ ಆಸ್ಪತ್ರೆಗಳ ಸಹಯೋಗದಲ್ಲಿ ಲಸಿಕಾ ಅಭಿಯಾನ ಕೈಗೊಳ್ಳಲು ಅವಕಾಶ ನೀಡಬಹುದು.
- ಎಲ್ಲಾ ಹಂತಗಳಲ್ಲಿ ಕೋವಿಡ್-19 ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವುದರೊಂದಿಗೆ ಕೋವಿಡ್-19 ಲಸಿಕಾಕರಣದ ಮಾರ್ಗೂಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.
- 2007ನೇ ಇಸವಿಯಲ್ಲಿ ಜನಿಸಿರುವ ಮತ್ತು 2007ನೇ ಇಸವಿಗೂ ಮುನ್ನ ಜನಿಸಿರುವ ಮಕ್ಕಳು ಕೋವಾಕ್ಸಿನ್ ಲಸಿಕೆ ಪಡೆಯಲು ಅರ್ಹರಿರುತ್ತಾರೆ. ಈ ಮಕ್ಕಳಿಗೆ ಈಗಾಗಲೇ ಚಾಲ್ತಿಯಲ್ಲಿರುವಂತೆ ಕೋವಾಕ್ಸಿನ್ ಲಸಿಕೆ 2 ಡೋಸ್ ಲಸಿಕೆಯನ್ನು 28 ದಿನಗಳ ಅಂತರದಲ್ಲಿ ನೀಡಲಾಗುತ್ತದೆ.
- ಲಸಿಕಾಕರಣಕ್ಕೆ ಮುನ್ನ ಮಕ್ಕಳ ಪೋಷಕರಿಗೆ ವಿಶೇಷ ಜಾಗೃತಿ ಸಭೆಗಳನ್ನು ನಡೆಸಿ ಲಸಿಕಾಕರಣದ ಮಹತ್ವ ಮತ್ತು ಅವಶ್ಯಕತೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ, ಅವರ ಸಂದೇಶಗಳನ್ನು ನಿವಾರಿಸುವುದು
- ಫಲಾನುಭವಿ ಮತ್ತು ಮಕ್ಕಳು ಸ್ವಂತ ದೂರವಾಣಿ ಸಂಖ್ಯೆ ಬಳಸಿ ಅಥವಾ ಕೋವಿನ್ ನಲ್ಲಿ ಈಗಾಗಲೇ ಇರುವ ತಂದೆ-ತಾಯಿಗಳ ಪೋಷಕರ ಅಕೌಂಟ್ ನಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಇದು ಯಾವುದೂ ಲಭ್ಯವಿಲ್ಲದಿದ್ದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರ ದೂರವಾಣಿ ಸಂಖ್ಯೆ ಮೂಲಕ ನೋಂದಣಿ ಮಾಡಿಕೊಳ್ಳಬಹುದು.