Valmiki Corporation scam: ED attack again on the houses of former minister Nagendra’s close friends
Bellary: ವಾಲ್ಮಿಕಿ ಅಭಿವೃದ್ಧಿ ನಿಗಮ ಹಗರಣಕ್ಕೆ (Valmiki Development Corporation Scam) ಸಂಬಂಧಿಸಿದಂತೆ ಬುಧವಾರ (ಆ.೨೮) ಬೆಳ್ಳಂಬೆಳಗ್ಗೆ ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರಿನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳ್ಳಾರಿಯ ವಿವಿಧೆಡೆ ಮಾಜಿ ಸಚಿವ ನಾಗೇಂದ್ರ (Nagendra) ಆಪ್ತರ ಮನೆಗಳ ಮೇಲೆ ಮತ್ತೊಮ್ಮೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ನಾಗೇಂದ್ರ ಸಂಬಂಧಿ ಎರ್ರಿಸ್ವಾಮಿ (Erriswamy) ಮನೆ ಸೇರಿದಂತೆ ಕೆಲ ಆಪ್ತ ಸಹಾಯಕರು ಮತ್ತು ಆಪ್ತರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಪ್ರಕರಣದಲ್ಲಿ ಇಡಿ ಜಾರ್ಜ್ಶೀಟ್ ಸಲ್ಲಿಕೆಗೆ ಸಮಯ ಹತ್ತಿರ ಬಂದಿರುವುದರಿಂದ ಅಧಿಕಾರಿಗಳು ದಾಳಿ ಚುರುಕುಗೊಳಿಸಿದ್ದಾರೆ ಎನ್ನಲಾಗಿದೆ. ಹಗರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಅಧಿಕಾರಿಗಳು ಕಳೆದ ತಿಂಗಳಷ್ಟೇ ಬೆಂಗಳೂರು, ರಾಯಚೂರು (Bengaluru, Raichur) ಬಳ್ಳಾರಿ ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ದಾಳಿ ನಡೆಸಿ ಮಾಹಿತಿ ಕಲೆಹಾಕಿದ್ದರು.
ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿರುವ ಬಸನಗೌಡ ದದ್ದಲ್ (Basanagowda Daddal) (ನಿಗಮದ ಅಧ್ಯಕ್ಷ, ಕಾಂಗ್ರೆಸ್ ಶಾಸಕ) ನಿವಾಸ, ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾಗೇಂದ್ರ (ಮಾಜಿ ಸಚಿವ) ಮನೆ ಮೇಲೂ ದಾಳಿ ನಡೆಸಿದ್ದರು. ಬೆಂಗಳೂರಿನ (Bengaluru) ಡಾಲರ್ಸ್ ಕಾಲೋನಿಯ ಬಿ.ನಾಗೇಂದ್ರ ಫ್ಲ್ಯಾಟ್ ಸೇರಿದಂತೆ ಏಕಕಾಲಕ್ಕೆ 18 ಕಡೆ ದಾಳಿ ನಡೆದಿತ್ತು. ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್ (Union Bank) ಕಚೇರಿಯನ್ನೂ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು.
ಏನಿದು ವಾಲ್ಮೀಕಿ ನಿಗಮ ಹಗರಣ?
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಣಕಾಸು ವಂಚನೆ ಪ್ರಕರಣವಾಗಿದೆ. ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆಯ ನಂತರ ಹಗರಣ ಬೆಳಕಿಗೆ ಬಂದಿತ್ತು. ಚಂದ್ರಶೇಖರನ್ ಡೆತ್ನೋಟ್ನಲ್ಲಿ (Chandrasekharan Death Note) ಭ್ರಷ್ಟಾಚಾರ ಸಂಬಂಧಿತ ಮಾಹಿತಿಗಳು ಹಾಗೂ ಹಲವಾರು ಅಧಿಕಾರಿಗಳ ಹೆಸರು ಉಲ್ಲೇಖವಾಗಿತ್ತು.
ಹಗರಣವು ರಾಜ್ಯದಲ್ಲಿ ತೀವ್ರ ರಾಜಕೀಯ ಕೋಲಾಹಲಕ್ಕೂ ಕಾರಣವಾಗಿತ್ತು. ಸದ್ಯ ಎಸ್ಐಟಿ, ಇಡಿ ಹಾಗೂ ಸಿಬಿಐ (SIT, ED and CBI) ಕೂಡ ಪ್ರಕರಣದ ತನಿಖೆ ನಡೆಸುತ್ತಿವೆ. ಎಸ್ಐಟಿ ಈಗಾಗಲೇ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದು, ದದ್ದಲ್ ಹಾಗೂ ನಾಗೇಂದ್ರ ಹೆಸರನ್ನು ಉಲ್ಲೇಖಿಸಿಲ್ಲ.
Valmiki Corporation Scam- ED Attack Kannada viral
Bellary: Enforcement Directorate (ED) officials raided Bellary, Koppal and Raichur on Wednesday (August 28) in connection with the Valmiki Development Corporation scam. The ED officials have once again raided the houses of ex-minister Nagendra’s close friends in different parts of Bellary and verified the documents.
The house of Nagendra’s relative Erriswamy and some of his close aides and relatives were raided. It is said that the authorities have accelerated the attack as the time has come for the submission of the ED George sheet in the case. The officials who have intensified the investigation related to the scam had conducted raids in many parts of the state including Bangalore, Raichur, Bellary and collected information only last month.
The residence of Basanagowda Daddal (Chairman of the Corporation, Congress MLA) on Ashapur Road in Raichur city and the house of Congress MLA Nagendra (former minister) from Bellary Rural Constituency in Nehru Colony, Bellary were also attacked. 18 places were attacked simultaneously, including B. Nagendra’s flat in Dollars Colony, Bangalore. ED officials also inspected the Union Bank office at MG Road in Bengaluru.
What is Valmiki Corporation Scam?
The Valmiki Development Corporation scam is a case of alleged financial fraud in the Karnataka Maharshi Valmiki Scheduled Tribes Development Corporation. The scandal came to light after the suicide of Chandrasekaran, the superintendent of the corporation. Chandrasekaran’s death note mentioned corruption related information and names of several officials.
The scam also led to intense political upheaval in the state. Currently SIT, ED and CBI are also investigating the case. The SIT has already submitted the charge sheet and has not mentioned the names of Daddal and Nagendra.