Visit Channel

ವಂಚಕ ಯುವರಾಜ್’ಗೂ ಸಂಘ ಪರಿವಾರಕ್ಕೂ ಸಂಬಂಧವಿಲ್ಲ: ಮಾ.ವೆಂಕಟರಾಮ್ ಸ್ಪಷ್ಟನೆ

WhatsApp Image 2021-01-07 at 1.00.39 PM

ಮೈಸೂರು, ಜ. 07: ತನಗೆ ಆರ್’ಎಸ್’ಎಸ್ ಮುಖಂಡರು, ಬಿಜೆಪಿ ಮುಖಂಡರಾದ ಅಮಿತ್ ಶಾ, ಜೆಪಿ ನಡ್ಡಾ ಸೇರಿದಂತೆ ಹಲವರ ಪರಿಚಯ ಇದೆ ಎಂದು ಜನರಿಗೆ ಕೋಟ್ಯಾಂತರ ರೂ.ವಂಚಿಸಿ ಬಂಧನಕ್ಕೆ ಒಳಗಾಗಿರುವ ಯುವರಾಜ್ ಗೂ ಸಂಘ ಪರಿವಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಸಂಚಾಲಕ ಮಾ.ವೆಂಕಟರಾಮ್ ಹೇಳಿದರು.

ಮೈಸೂರಿನಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯುವರಾಜ ಎಂಬ ವ್ಯಕ್ತಿ ಆರ್. ಎಸ್.ಎಸ್ ನವನಲ್ಲ. ಅವನಿಗೂ ಆರ್.ಎಸ್‌.ಎಸ್ ಗೂ ಯಾವುದೇ ರೀತಿಯ ಸಂಬಂಧವಿಲ್ಲ. ನನ್ನ ಜೀವಮಾನದಲ್ಲಿ ಅವನನ್ನು ನೋಡಿಲ್ಲ ಎಂದು ಹೇಳಿದರು.

ನಮ್ಮ ಸಂಘಕ್ಕೆ ಮಸಿ ಬಳಿಯುವುದಕ್ಕೆ ನಡೆದಿರುವ ಷಡ್ಯಂತ್ರ ಇದಾಗಿದೆ. ಸಾರ್ವಜನಿಕರು ಇಂತಹ ಮೋಸಗಾರರಿಗೆ ಬಲಿಯಾಗಬಾರದು ಎಂದು ಹೇಳಿದರು.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.