ವಾರಾಣಾಸಿ ಪ್ರವಾಹ: ನೆರವಿನ ಭರವಸೆ ನೀಡಿದ ಪ್ರಧಾನಿ ಮೋದಿ

ನವದೆಹಲಿ, ಆ. 11: ಉತ್ತರ ಪ್ರದೇಶದ ವಾರಾಣಸಿಯ ಕೆಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಸಂಭವಿಸಿದ್ದು, ಈ ಕುರಿತಾಗಿ ಸ್ಥಳೀಯ ಆಡಳಿತದೊಂದಿಗೆ ಬುಧವಾರ ಮಾತುಕತೆ ನಡೆಸಿದ ಪ್ರಧಾನಿ ಮೋದಿ ಅವರು ಎಲ್ಲಾ ರೀತಿಯ ನೆರವು ಒದಗಿಸುವುದಾಗಿ ಭರವಸೆ ನೀಡಿದ್ದಾರೆ.

ವಾರಾಣಸಿಯ ಪ್ರವಾಹ ಪರಿಸ್ಥಿತಿಯನ್ನು ಪ್ರಧಾನಿ ಮೋದಿ ಅವರು ಪರಿಶೀಲಿಸಿದ್ದಾರೆ. ಬಳಿಕ, ಈ ಬಗ್ಗೆ ಅಲ್ಲಿನ ಅಧಿಕಾರಿಗಳೊಂದಿಗೆ ವಿಸ್ತೃತ ಚರ್ಚೆ ನಡೆಸಿದರು ಎಂದು ಅಧಿಕೃತ ಮೂಲಗಳು ತಿಳಿಸಿವೆ. ‌‌ಮೋದಿ ಅವರು ವಾರಾಣಸಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ

Exit mobile version