ರಾಮಮಂದಿರ ಪ್ರಾಣಪ್ರತಿಷ್ಠೆ ಹಿನ್ನೆಲೆ, ಮೋದಿ ಉಪವಾಸ ಮಾಡಿದ್ದೇ ಅನುಮಾನ: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ

Chikkaballapura: ಅಯೋಧ್ಯೆ (Ayodhya) ರಾಮಮಂದಿರದಲ್ಲಿನ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ (Veerappa Moily against Modi) ಅವರು ಈ ಸಮಾರಂಭದ

ನಾಯಕತ್ವ ವಹಿಸಿಕೊಂಡಿದ್ದು, ಹನ್ನೊಂದು ದಿನಗಳ ಕಾಲ ಕಠಿಣ ವ್ರತಾಚಾರಣೆ ಕೈಗೊಂಡಿದ್ದರು. ಆದರೆ ಈ ವಿಷಯಕ್ಕೆ ಸಂಭಂದಿಸಿದಂತೆ ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ (Veerappa Moily)ಅವರು,

11 ದಿನಗಳ ಕಾಲ ಉಪವಾಸ ಮಾಡಿದ್ರೆ ಮನುಷ್ಯ ಬದುಕಲು (Veerappa Moily against Modi) ಸಾಧ್ಯವಿಲ್ಲ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ರಾಮ ಮಂದಿರ (Rama Mandira) ಪ್ರಾಣಪ್ರತಿಷ್ಠೆ ಹಾಗೂ ಪೂಜಾ ವಿಧಿವಿಧಾನ ಪೂರೈಸಿದ ಪ್ರಧಾನಿ ಮೋದಿ, ರಾಮ ಮಂದಿರ ಆವರಣದಲ್ಲಿ ಆಯೋಜಿಸದ ಕಾರ್ಯಕ್ರಮದಲ್ಲಿ 11 ದಿನಗಳ ಕಠಿಣ

ಉಪವಾಸ ವೃತ ಅಂತ್ಯಗೊಳಿಸಿದ್ದಾರೆ. ಸ್ವಾಮೀಜಿಗಳು ಪ್ರಧಾನಿ ಮೋದಿಗೆ ಶ್ರೀರಾಮನ ಪ್ರಸಾದ ನೀಡಿ ಕಠಿಣ ವೃತ ಪೂರ್ಣಗೊಳಿಸಿದ್ದಾರೆ. ಆದರೆ ನರೇಂದ್ರ ಮೋದಿ (Narendra Modi) ಉಪವಾಸ

ಮಾಡಿದ್ದೇ ಅನುಮಾನ ಎಂದು ಮಾಜಿ ಮುಖ್ಯಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದ ಅಂಗವಾಗಿ ಮೋದಿ ಉಪವಾಸ ಮಾಡಿಲ್ಲ. ಏಳನೀರು ಮಾತ್ರ ಕುಡಿದು ಉಪವಾಸ ಮಾಡಿದ್ರೆ ಒಂದೆರೆಡು ದಿನದಲ್ಲಿ ಮನುಷ್ಯ ಬೀಳುತ್ತಾನೆ. 11 ದಿನಗಳ‌ ಉಪವಾಸ

ಮಾಡಿದ್ರೆ ಮನುಷ್ಯ ಬದುಕಲು ಸಾಧ್ಯವಿಲ್ಲ ಎಂದು ಚಿಕ್ಕಬಳ್ಳಾಪುರದಲ್ಲಿಂದು (Chikkaballapura) ಸುದ್ದಿಗಾರರೊಂದಿಗೆ ಮಾತನಾಡಿದ ವೀರಪ್ಪ ಮೊಯ್ಲಿ
ಹೇಳಿದ್ದಾರೆ.

ಉಪವಾಸ (Fasting) ಅಂತ ಹೇಳಿ ಮೋದಿ ಬಹಳ ಜೋರಾಗಿ ಓಡಾಡಿದ್ರು ಆದರೆ ಉಪವಾಸ ಇದ್ದ ಹಾಗೆ ನರೇಂದ್ರ ಮೋದಿ ಕಾಣಲಿಲ್ಲ. ದೇವರಿಗೆ ಇಚ್ಛೆ ಪ್ರಕಾರ ಏನು ಬೇಕಾದರೂ ಮಾಡಲಿ. ಅದ್ರೆ ಇವರ

ನಾಟಕ ಇನ್ನೂ ಮುಂದೆ ನಡೆಯಲ್ಲ. ವೈದ್ಯರ ಅಭಿಪ್ರಾಯದ ಪ್ರಕಾರ ಇದು ಅಸಾಧ್ಯ ಎಂದಿದ್ದಾರೆ.

ಗುಜರಾತ್ (Gujarat) ಹತ್ಯಾಕಾಂಡದ ವೇಳೆ ಮೋದಿ ರಾಜಧರ್ಮ ಪಾಲನೆ ಮಾಡಲಿಲ್ಲ. ಕಾನೂನು ಪರಿಪಾಲನೆ ಮಾಡಲಿಲ್ಲ. ರಾಜಧರ್ಮ ಪಾಲನೆ ಮಾಡದೆ ಶ್ರೀರಾಮನ ಗರ್ಭಗುಡಿಯಲ್ಲಿ ಕೂತು

ಪ್ರಾಣ ಪ್ರತಿಷ್ಠಾಪನೆ ಮಾಡಿದ್ದು ವಿಪರ್ಯಾಸ. ನಾನು ಬೆಳಿಗ್ಗೆ ವಾಕಿಂಗ್ (Walking) ಮಾಡುವಾಗ ಡಾಕ್ಟರ್ ಬಳಿ ಚರ್ಚೆ ಮಾಡಿದೆ. 11 ದಿನ ಉಪವಾಸ ಮಾಡಿದ್ರೆ ಮನುಷ್ಯ ಬದುಕಲು ಸಾಧ್ಯವಿಲ್ಲ.

ಒಂದು ವೇಳೆ ಮನುಷ್ಯ ಬದುಕಿದ್ರೆ ಪವಾಡ. ಹಾಗಾಗಿ ಅ ಉಪವಾಸ ಮಾಡಿರುವುದು ಅನುಮಾನ.

ಗರ್ಭಗುಡಿಗೆ ಉಪವಾಸ ಮಾಡದೆ ಹೋಗಿ ಪೂಜೆ ಮಾಡಿದ್ರೆ ಸ್ಥಳ ಅಪವಿತ್ರ ಆಗಲಿದೆ. ಶಕ್ತಿ ಉದ್ಭವವಾಗಲ್ಲ ಎಂದರು. ರಾಮಮಂದಿರದ ಕೆಲಸ ಸಂಪೂರ್ಣ ಆಗಲಿಲ್ಲ. ನರೇಂದ್ರ ಮೋದಿ ಪ್ರಾಣ

ಪ್ರತಿಷ್ಟಾಪನೆ ನಡೆಸಿಕೊಟ್ಟಿದ್ದು ತಪ್ಪು. ನರೇಂದ್ರ ‌ಮೋದಿ ಗರ್ಭಗುಡಿಗೆ ಪ್ರವೇಶ ಮಾಡಿದ್ದು ಸಹ ತಪ್ಪು. ಅವರ ಕೈಗೆ ತೀರ್ಥ ಬಾಯಿಗೆ ಕೊಡುವುದು ಇದು ಹಿಂದೂ ಧರ್ಮಕ್ಕೆ ಬಂದ ದುಸ್ಥಿತಿ ಎಂದು ಹೇಳಿದರು.

ಜನವರಿ 12 ಉಪವಾಸ ವ್ರತ ಕೈಗೊಂಡಿದ್ದ ಮೋದಿ
ಅಯೋಧ್ಯೆಯ ರಾಮ ಮಂದಿರ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕಾಗಿ ಜನವರಿ (January) 12 ರಿಂದ ಪ್ರಧಾನಿ ಮೋದಿ ಉಪವಾಸ ವ್ರತ ಕೈಗೊಂಡಿದ್ದರು. ಮಹಾರಾಷ್ಟ್ರದ (Maharashtra) ನಾಸಿಕ್ ನಲ್ಲಿ

ಪ್ರಸಿದ್ಧ ಕ್ಷೇತ್ರ ಶ್ರೀ ಕಲಾರಾಮ್ ದೇವಾಲಯದಲ್ಲಿ ದರ್ಶನ ಪಡೆದ ಪ್ರಧಾನಿ ಮೋದಿ ದೇವಾಲಯದಲ್ಲಿ ವಿಶೇಷ ಪೂಜೆ ಮಾಡುವ ಮೂಲಕ ಉಪವಾಸ ವ್ರತ ಶುರು ಮಾಡಿದ್ದರು.

ಇದನ್ನು ಓದಿ: ಫೋನ್ ಸ್ಟೋರೇಜ್‌ ತುಂಬದಂತೆ ಏನು ಮಾಡಬೇಕು? ಇಲ್ಲಿದೆ ಉಪಯುಕ್ತ ಮಾಹಿತಿ

Exit mobile version