ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಿಎಂ ಆದೇಶ

ಬೆಂಗಳೂರು, .17: ಇದೀಗ ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪನೆ ಮಾಡಿ ಎಂಬುದಾಗಿ ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದಾರೆ.

ಆದರೆ, ನಿಗಮಕ್ಕೆ ರಾಜ್ಯಸರ್ಕಾರ ಯಾವುದೇ ರೀತಿಯ ಹಣಕಾಸಿನ ನೆರವು ಘೋಷಣೆ ಮಾಡಿಲ್ಲ. ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮಾಜದ ಜನಾಂಗದವರು ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರಾಗಿದ್ದಾರೆ. ಹೀಗಾಗಿ ಈ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆ ಮಾಡುತ್ತಿರುವುದಾಗಿ ಸಿಎಂ ತಿಳಿಸಿದ್ದಾರೆ.

ಮರಾಠಾ ಪ್ರಧಿಕಾರ ಸ್ಥಾಪನೆಯಾದ ಬೆನ್ನಲ್ಲೆ, ನಿನ್ನೆಯಷ್ಟೇ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವರಾದ ವಿ.ಸೋಮಣ್ಣ, ಬಿ.ಸಿ.ಪಾಟೀಲ್ ಸೇರಿದಂತೆ ಮತ್ತಿತರ ಸಮುದಾಯದ ಮುಖಂಡರು ಸಿಎಂ ಅವರನ್ನು ಭೇಟಿಯಾಗಿ ನಿಗಮ ಸ್ಥಾಪನೆಗೆ ಹಕ್ಕು ಮಂಡಿಸಿದ್ದರು.

Exit mobile version