ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ.

Shivamogga: ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟಗಳ ಪ್ರಮುಖ ತಾಣವಾಗಿರುವ ಆಗುಂಬೆ ಘಾಟಿ (Agumbe Ghat)ಯಲ್ಲಿ ಜೂನ್ 27 ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

Agumbe Ghat

ಪಶ್ಛಿಮ ಘಟ್ಟದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಆಗುಂಬೆ ಘಾಟಿಯಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆಯಿದೆ. ಈಗಾಗಲೇ ಹಲವು ಕಡೆಗಳಲ್ಲಿ ಭೂಕುಸಿತ ಉಂಟಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜೂನ್ (June) 27ರಿಂದ ಸೆಪ್ಟೆಂಬರ್ 15ರವರೆಗೆ ಭಾರಿ ವಾಹನ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಬದಲಿ ಮಾರ್ಗವನ್ನು ಸೂಚಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ನೀಡಿದ್ದಾರೆ. ಆದೇಶದನ್ವಯ ಸರಕು ಸಾಗಣೆ ವಾಹನಗಳು ತೀರ್ಥಹಳ್ಳಿ-ಉಡುಪಿ ಮಾರ್ಗದಲ್ಲಿ ಸಂಚರಿಸುವ ಬದಲಿಗೆ ತೀರ್ಥಹಳ್ಳಿ-ಮಾಸ್ತಿಕಟ್ಟೆ, ಸಿದ್ದಾಪುರ-ಕುಂದಾಪುರ (Siddapura-Kundapura) ಉಡುಪಿ ಮಾರ್ಗದಲ್ಲಿ ಸಂಚರಿಸುವಂತೆ ಸೂಚನೆ ನೀಡಲಾಗಿದೆ.

ಇನ್ನು ಅತ್ಯಂತ ಕಡಿದಾದ ಹಾಗೂ ಕಿರುದಾದ ತಿರುವುಗಳನ್ನು ಒಳಗೊಂಡಿರುವ ಆಗುಂಬೆ ಘಾಟಿಯಲ್ಲಿ ಒಟ್ಟು 14 ತಿರುವುಗಳಿವೆ ಇದರಲ್ಲಿ ಮೇಲ್ಭಾಗದ 7 ಸುತ್ತುಗಳು ಶಿವಮೊಗ್ಗ ಜಿಲ್ಲಾ ವ್ಯಾಪ್ತಿಗೆ, ಕೆಳಗಿನ 7 ಸುತ್ತುಗಳು ಉಡುಪಿ ಜಿಲ್ಲಾ ವ್ಯಾಪ್ತಿಗೆ ಸೇರುತ್ತವೆ. ಹೀಗಾಗಿ ಆಗುಂಬೆ ಘಾಟಿ ಶಿವಮೊಗ್ಗ ಮತ್ತು ಉಡುಪಿ (Shivamogga And Udupi) ಎರಡೂ ಜಿಲ್ಲೆಗಳಲ್ಲಿ ಹರಡಿಕೊಂಡಿದೆ.

Exit mobile version