ನವದೆಹಲಿ : ರಾಷ್ಟ್ರಪತಿ ಚುನಾವಣಾ(President Election) ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ ಸದ್ಯ ಚುನಾವಣಾ ಆಯೋಗ (EC) ಬುಧವಾರ (ಜೂನ್ 29) ಉಪ ರಾಷ್ಟ್ರಪತಿ(Vice President) ಸ್ಥಾನದ ಚುನಾವಣೆಯ(Election) ವೇಳಾಪಟ್ಟಿಯನ್ನು ಪ್ರಕಟಿಸಿದೆ. ಎಂ ವೆಂಕಯ್ಯ ನಾಯ್ಡು(M Venkaiah Naidu) ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲು ಆಗಸ್ಟ್ 6 ರಂದು ಮತದಾನ ನಡೆಯಲಿದೆ.
ಜುಲೈ 5 ರಂದು ಅಧಿಸೂಚನೆಯನ್ನು ಹೊರಡಿಸಲಾಗುವುದು ಮತ್ತು ನಾಮಪತ್ರ(Nomination) ಸಲ್ಲಿಸಲು ಜುಲೈ 19 ಕೊನೆಯ ದಿನಾಂಕವಾಗಿದೆ ಎಂದು ಪಿಟಿಐ ವರದಿಯಲ್ಲಿ ಉಲ್ಲೇಖಿಸಿದೆ. ಉಪ ರಾಷ್ಟ್ರಪತಿ ಚುನಾವಣೆ 2022ರ(Vice President Election 2022) ವೇಳಾಪಟ್ಟಿಯನ್ನು ಅಂತಿಮಗೊಳಿಸಲು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ಅವರ ಸಭೆ ನಡೆಸಿದ ನಂತರ ಅಧಿಕೃತವಾಗಿ ಪ್ರಕಟವಾಗಿದೆ.
ಜುಲೈ 20 ರಂದು ನಾಮಪತ್ರಗಳ ಪರಿಶೀಲನೆ ಪೂರ್ಣಗೊಳ್ಳಲಿದ್ದು, ನಾಮಪತ್ರಗಳನ್ನು ಹಿಂಪಡೆಯಲು ಜುಲೈ 22 ಕೊನೆಯ ದಿನವಾಗಿರಲಿದೆ. ಹಾಲಿ ಉಪರಾಷ್ಟ್ರಪತಿ ನಾಯ್ಡು ಅವರ ಅವಧಿ ಆಗಸ್ಟ್ 10 ರಂದು ಕೊನೆಗೊಳ್ಳಲಿದೆ. ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆಯನ್ನು ನಿಗದಿಪಡಿಸಲಾಗಿದೆ ಎಂದು ಚುನಾವಣಾ ಆಯೋಗ ಅಧಿಕೃತವಾಗಿ ತಿಳಿಸಿದೆ. ಈ ಮಾಹಿತಿಯನ್ನು ಬುಧವಾರ, ಜೂನ್ 29 ರಂದು ಘೋಷಿಸಿದೆ. ಅಗತ್ಯವಿದ್ದಲ್ಲಿ, ಮತದಾನವು ಆಗಸ್ಟ್ 6 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ನಡೆಯುತ್ತದೆ ಮತ್ತು ಅದೇ ದಿನ ಮತಗಳನ್ನು ಎಣಿಕೆ ಕೂಡ ಮಾಡಲಾಗುತ್ತದೆ.
ಚುನಾವಣಾ ಆಯೋಗವು ಜುಲೈ 5 ರಂದು ಚುನಾವಣೆಯನ್ನು ಕರೆಯುವ ಅಧಿಸೂಚನೆಯನ್ನು ಹೊರಡಿಸಲಿದೆ. ನಾಮಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನಾಂಕವಾಗಿದೆ. ಜುಲೈ 20 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅರ್ಜಿ ಹಿಂಪಡೆಯಲು ಜುಲೈ 22 ಕೊನೆಯ ದಿನವಾಗಿದೆ. ಇದೇ ವೇಳೆ ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಜುಲೈ 21 ರಂದು ಫಲಿತಾಂಶ ಪ್ರಕಟವಾಗಲಿದೆ.