ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಬಯಸುವವರು ನ. 5-15 ರವರೆಗೆ ಅರ್ಜಿ ಸಲ್ಲಿಸಬಹುದು : ಡಿಕೆಶಿ

Bengaluru : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್(Congress) ಪಕ್ಷದಿಂದ ಸ್ಪರ್ಧಿಸಲು ಬಯಸುವವರು ನವೆಂಬರ್ 5 ರಿಂದ15ರವರೆಗೆ ಅರ್ಜಿ ಸಲ್ಲಿಸಬಹುದು ಎಂದು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ(Vidhansabha Election Congress) ಡಿ.ಕೆ.ಶಿವಕುಮಾರ್‌(DK Shivakumar) ಘೋಷಣೆ ಮಾಡಿದ್ದಾರೆ.

ಈ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಸದಸ್ಯತ್ವ (Vidhansabha Election Congress) ಪಡೆಯಲು ಹಲವರು ಉತ್ಸುಕರಾಗಿರುವುದರಿಂದ ಮತ್ತೆ ಆನ್ ಲೈನ್ ಸದಸ್ಯತ್ವ ನೋಂದಣಿ ಆರಂಭಿಸಿದ್ದೇವೆ.

ಅನ್ಯ ಪಕ್ಷಗಳ ಕೆಲವು ನಾಯಕರು ಕಾಂಗ್ರೆಸ್ ಸೇರುವ ಇಂಗಿತ ವ್ಯಕ್ತಪಡಿಸಿದ್ದು, ಬೇಷರತ್ತಾಗಿ ಪಕ್ಷ ಸೇರಲು ಬಯಸುವವರು ಅರ್ಜಿ ಸಲ್ಲಿಸಬಹುದು.

https://youtu.be/49tPYYDsOhY

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಬಯಸುವವರು ನವೆಂಬರ್ 5 ರಿಂದ 15ರವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿಗೆ ₹ 5,000 ಶುಲ್ಕ ನಿಗದಿಪಡಿಸಿದ್ದು, ಅರ್ಜಿ ಸಲ್ಲಿಸುವಾಗ ಪಕ್ಷದ ಕಟ್ಟಡ ಕಾಮಗಾರಿ ನಿಧಿಗೆ ಡಿಡಿ ಹಾಗೂ ಕಾಂಗ್ರೆಸ್ ಸದಸ್ಯತ್ವ ವಿವರ ಲಗತ್ತಿಸಬೇಕು ಎಂದಿದ್ದಾರೆ.

ಇದನ್ನೂ ಓದಿ : https://vijayatimes.com/non-bailable-warrant/

ಇನ್ನು ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಲ್ಲಿಕಾರ್ಜುನ್‌ ಖರ್ಗೆ(Mallikarjun Kharge) ಅವರು ರಾಜ್ಯಕ್ಕೆ ಮೊದಲ ಬಾರಿಗೆ ಆಗಮಿಸುತ್ತಿದ್ದಾರೆ. ನವೆಂಬರ್ 6 ರಂದು ರಾಜ್ಯಕ್ಕೆ ಆಗಮಿಸುವಂತೆ ನಾವು ಮನವಿ ಮಾಡಿದ್ದೇವೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಸರ್ವೋದಯ ಸಮಾವೇಶ’ ಹಮ್ಮಿಕೊಂಡಿದ್ದು, ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು, ನಾಯಕರು ಅವರನ್ನು ಸ್ವಾಗತಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಅನ್ಯ ಪಕ್ಷಗಳ ಕೆಲವು ನಾಯಕರು ಕಾಂಗ್ರೆಸ್ ಸೇರುವ ಇಂಗಿತ ವ್ಯಕ್ತಪಡಿಸಿದ್ದು,

ಬೇಷರತ್ತಾಗಿ ಪಕ್ಷ ಸೇರಲು ಬಯಸುವವರು ಅರ್ಜಿ ಸಲ್ಲಿಸಬಹುದು ಎಂದು ಹೇಳುವ ಮೂಲಕ ಡಿ.ಕೆ.ಶಿವಕುಮಾರ್‌ ಅವರು ಕಾಂಗ್ರೆಸ್‌ ತೊರೆದಿರುವ ಅನೇಕ ನಾಯಕರನ್ನು ಮರಳಿ ಕರೆತರುವ ಪ್ರಯತ್ನಕ್ಕೆ ಕೈಹಾಕಿದ್ದಾರೆ.

ಇದನ್ನೂ ಓದಿ : https://vijayatimes.com/auto-driver-gives-candies/

ಅದರಲ್ಲೂ ಸಿದ್ದರಾಮಯ್ಯನವರನ್ನು ವಿರೋಧಿಸಿ, ಕಾಂಗ್ರೆಸ್‌ ತೊರೆದಿರುವ ನಾಯಕರನ್ನು ಮರಳಿ ಪಕ್ಷಕ್ಕೆ ಕರೆತರಲು ಡಿಕೆಶಿ ಮುಂದಾಗಿದ್ದಾರೆ. ಈ ಮೂಲಕ ಸಿದ್ದರಾಮಯ್ಯನವರಿಗೆ(Siddaramaiah) ಸೆಡ್ಡು ಹೊಡೆಯಲು ತಂತ್ರ ರೂಪಿಸಿದ್ದಾರೆ ಎನ್ನಲಾಗುತ್ತಿದೆ.

Exit mobile version