ವಿದ್ಯಾರ್ಥಿಗಳ 2019-20ನೇ ಸಾಲಿನ ಬಸ್‌ಪಾಸ್‌ ಅವಧಿ ವಿಸ್ತರಣೆ

ಬೆಂಗಳೂರು, ಡಿ, 10: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಇಳಿಕೆಯಾದ ನಂತರ ಸರ್ಕಾರದ ನಿರ್ದೇಶನದಂತೆ ಪದವಿ ಕಾಲೇಜುಗಳನ್ನು ಪುನರಾರಂಭಿಸಲಾಗಿದೆ.

ನವೆಂಬರ್ 17ರಿಂದ ತರಗತಿಗಳು ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕಳೆದ ವರ್ಷ ಪಡೆದಿರುವ ರಿಯಾಯಿತಿ ದರದ ಬಸ್ ಪಾಸ್ ತೋರಿಸಿ ನಿಗಮದ ಬಸ್‌ಗಳಲ್ಲಿ ಸಂಚರಿಸಲು ಕೆಎಸ್‌ಆರ್‌ಟಿಸಿ ಅವಕಾಶ ನೀಡಿತ್ತು. 2019-20ನೇ ಸಾಲಿನ ಆಧಾರದಲ್ಲಿ ಡಿಸೆಂಬರ್ 10ರವರೆಗೂ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿತ್ತು.

ಇದೀಗ ಈ ಅವಧಿಯನ್ನು ವಿಸ್ತರಿಸಲಾಗಿದ್ದು,  ಪದವಿ/ ಸ್ನಾತಕೋತ್ತರ/ ಡಿಪ್ಲೊಮಾ/ ತಾಂತ್ರಿಕ/ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸುಗಳನ್ನು ಡಿ. 31. 2020ರವರೆಗೂ ಮಾನ್ಯ ಮಾಡಲಿರುವುದಾಗಿ ತಿಳಿಸಿದೆ.

ಇದರ ಅನ್ವಯ ವಿದ್ಯಾರ್ಥಿಗಳು ಪ್ರಸಕ್ತ ವರ್ಷದಲ್ಲಿ ಕಾಲೇಜುಗಳಿಗೆ ದಾಖಲಾಗಿರುವ ಶುಲ್ಕ ಪಾವತಿ ರಶೀದಿಯೊಂದಿಗೆ 2019-20ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ತೋರಿಸಿ ಸಂಬಂಧಪಟ್ಟ ಮಾರ್ಗದಲ್ಲಿ ಕರಾರಸಾ ನಿಮಗದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಿಗೆ ಪ್ರಯಾಣಿಸಲು ಅವಕಾಶವನ್ನು ನೀಡಲಾಗಿದೆ. ಈ ತಿಂಗಳ ಕೊನೆಯವರೆಗೂ ವಿದ್ಯಾರ್ಥಿಗಳು ಸಂಚರಿಸಬಹುದಾಗಿದೆ. ವಿದ್ಯಾರ್ಥಿಗಳು ಈ ಅವಕಾಶವನ್ನು ಉಪಯೋಗಿಸಿಕೊಳ್ಳಬೇಕೆಂದು ನಿಗಮ ತಿಳಿಸಿದೆ.

Exit mobile version