Visit Channel

ವಿದ್ಯುತ್ ವಾಹನಗಳ ಬ್ಯಾಟರಿ ಸ್ವಾಪಿಂಗ್ ಘಟಕಗಳಿಗೆ ಚಾಲನೆ ನೀಡಿದ ಸಿಎಂ

WhatsApp Image 2020-12-22 at 6.35.37 PM

ಬೆಂಗಳೂರು, ಡಿ. 23: ಸನ್ ಮೊಬಿಲಿಟೀಸ್ ಕಂಪನಿಯ ವಿದ್ಯುತ್ ವಾಹನಗಳ ಬ್ಯಾಟರಿ ಸ್ವಾಪಿಂಗ್ ಘಟಕಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಗಳವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾಗರಿಕರು ವಿದ್ಯುತ್ ಚಾಲಿತ ವಾಹನಗಳನ್ನು ಬಳಸಲು ಉತ್ಸುಕರಾಗಿದ್ದಾರೆ. ಆದರೆ ಇದಕ್ಕೆ ಪೂರಕ ಸೌಲಭ್ಯಗಳನ್ನು ಒದಗಿಸಬೇಕಾಗಿದೆ.ಈ ನಿಟ್ಟಿನಲ್ಲಿ ಸನ್ ಮೊಬಿಲಿಟಿಯವರು ರೂಪಿಸಿರುವ ಬ್ಯಾಟರಿ ಸ್ವಾಪಿಂಗ್ ನೆಟ್ ವರ್ಕ್ ಒಂದು ಮಹತ್ವಪೂರ್ಣ ಬೆಳವಣಿಗೆ ಎಂದು ಶ್ಲಾಘಿಸಿದರು.ಪರಿ ಸರ ಸ್ನೇಹಿ ವಿದ್ಯುತ್ ಚಾಲಿತ ವಾಹನಗಳ ಬಳಕೆಗೆ ಸರ್ಕಾರ ಒತ್ತು ನೀಡಲಿದ್ದು,ಬ್ಯಾಟರಿ ಸ್ವಾಪಿಂಗ್ ಘಟಕಗಳು ವೆಚ್ಚ ಹಾಗೂ ಸಮಯದ ಉಳಿತಾಯ ಮಾಡಲಿವೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಮಾತನಾಡಿದ ಸನ್ ಮೊಬಿಲಿಟಿಯ ಉಪಾಧ್ಯಕ್ಷರಾದ ಉದಯ್ ಖೇಮ್ಕಾ ಹಾಗೂ ಚೇತನ್ ಮೈನಿ ಅವರು ಭಾರತದ ಮೊದಲ ವಿದ್ಯುತ್ ಚಾಲಿತ ಕಾರ್ ತಯಾರಿಕೆಗೆ ಕರ್ನಾಟಕ ಸರ್ಕಾರ ನೀಡಿದ ಬೆಂಬಲ ವನ್ನು ಸ್ಮರಿಸಿ,ಈ ಹಸಿರು ಉಪಕ್ರಮಕ್ಕೂ ಸರ್ಕಾರ ಬೆಂಬಲ ನೀಡುತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ,ಸನ್ ಮೊಬಿಲಿಟಿ ಸಂಸ್ಥೆಯ ಸಿಇಓ ಡಿ.ಎಸ್. ರಾವತ್, ಪಿಯಾಜಿಯೊ ವೆಹಿಕಲ್ಸ್ ನ ಸಿಇಓ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಿಯಾಗೊ ಗ್ರಾಫಿ ಮೊದಲಾದವರು ಉಪಸ್ಥಿತರಿದ್ದರು.

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.