Breaking News
‘ಇನ್ನೆರಡು ತಾಸುಗಳಷ್ಟೇ..ಆಮೇಲೆ ಆಕ್ಸಿಜನ್​ ಇರೋದಿಲ್ಲ, ರೋಗಿಗಳು ಸಾಯ್ತಾರೆ..’ ಕಣ್ಣೀರಿಟ್ಟ ಆಸ್ಪತ್ರೆ ಸಿಇಒಶಾಸಕ ಜಮೀರ್ ಅಹ್ಮದ್, ಮಧು ಬಂಗಾರಪ್ಪಗೆ ಕೊರೊನಾ ಪಾಸಿಟಿವ್: ನಿನ್ನೆಯಷ್ಟೇ ಸಿದ್ದರಾಮಯ್ಯ ಭೇಟಿಯಾಗಿದ್ದ ಜಮೀರ್ಕೊರೊನಾ ನಿರ್ವಹಣೆ ವಿಚಾರವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ಮೇ 1ರಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಲು ನೋಂದಾವಣೆ ಮಾಡಿಕೊಳ್ಳುವ ವಿಧಾನ ಇಲ್ಲಿದೆರೆಮ್‌ಡಿಸಿವಿರ್‌ ವೈಜ್ಞಾನಿಕವಾಗಿ ಲೈಫ್ ಸೇವಿಂಗ್ ಡ್ರಗ್ ಅಲ್ಲ: ಸಚಿವ ಸುಧಾಕರ್ಭಾರತಕ್ಕೆ ಬಂದಿಳಿದ 5ನೇ ಬ್ಯಾಚ್​​ನ ರಫೇಲ್​​ ಯುದ್ಧ ವಿಮಾನಗಳುಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ಪ್ರಚಾರಗಳನ್ನ ಬಿಟ್ಟು ಜನರ ರಕ್ಷಣೆ ಜತೆಗೆ ಜನರ ವಿಶ್ವಾಸ ಗೆಲ್ಲುವ ಕೆಲಸ ಮಾಡಿ: ಬಿಜೆಪಿಗೆ ಕುಮಾರಸ್ವಾಮಿ ಚಾಟಿನೀವು ಖುಷಿಯಾಗಿ ಸಮಯ ಹಾಳು ಮಾಡಿ, ಜನ ಮಾತ್ರ ಸಾಯ್ತಾ ಇರ್ಲಿ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್​ ತರಾಟೆದೆಹಲಿ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಎ.ಕೆ.ವಾಲಿಯಾ ಕೊರೊನಾ ಸೋಂಕಿನಿಂದ ಮೃತ

ನಟಿ ಕತ್ರಿನಾ ಕೈಫ್ ಅವರಿಗೆ ಕೊರೊನಾ ಪಾಸಿಟಿವ್: ಹೋಂ‌ ಕ್ವಾರಂಟೈನ್ ಆದ ಬಾಲಿವುಡ್‌ ಬೆಡಗಿ

ಮಹಾಮಾರಿ ಕೊರೊನಾ ಸೋಂಕಿಗೆ ತುತ್ತಾಗಿರುವ ಕತ್ರಿನಾ ಕೈಫ್, ಹೋಂ ಕ್ವಾರಂಟೈನ್ ಆಗಿದ್ದಾರೆ. ಈ ಕುರಿತು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಕತ್ರಿನಾ, ತಮ್ಮಗೆ ಕೊರೊನಾ ಸೋಂಕು ತಗುಲಿರುವುದನ್ನು ಖಚಿತಪಡಿಸಿದ್ದಾರೆ.
Share on facebook
Share on google
Share on twitter
Share on linkedin
Share on print

ಹೊಸದಿಲ್ಲಿ, ಏ. 06: ದೇಶಾಧ್ಯಂತ ತಲ್ಲಣ ಮೂಡಿಸಿರುವ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹಲವು ಸೆಲೆಬ್ರಿಟಿಗಳು ಎರಡನೇ ಅಲೆಯ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಇವರ ಸಾಲಿಗೆ ಇದೀಗ ಬಾಲಿವುಡ್‌ ಬೆಡಗಿ ಕತ್ರಿನಾ ಕೈಫ್‌ ಸಹ ಸೇರ್ಪಡೆಗೊಂಡಿದ್ದಾರೆ.

ಮಹಾಮಾರಿ ಕೊರೊನಾ ಸೋಂಕಿಗೆ ತುತ್ತಾಗಿರುವ ಕತ್ರಿನಾ ಕೈಫ್, ಹೋಂ ಕ್ವಾರಂಟೈನ್ ಆಗಿದ್ದಾರೆ. ಈ ಕುರಿತು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಕತ್ರಿನಾ, ತಮ್ಮಗೆ ಕೊರೊನಾ ಸೋಂಕು ತಗುಲಿರುವುದನ್ನು ಖಚಿತಪಡಿಸಿದ್ದಾರೆ. ಅಲ್ಲದೇ, ವೈದ್ಯರ ಸಲಹೆಯಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುತ್ತಿರುವುದಾಗಿ ಸಹ ತಿಳಿಸಿದ್ದಾರೆ.

ಅಲ್ಲದೇ, ತಮಗೆ ಕೊರೊನಾ ಪಾಸಿಟಿವ್ ಬಂದಿರುವ ಕಾರಣ ಕಳೆದ ಕೆಲವು ‌ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೂಡಲೇ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಜತೆಗೆ ಪ್ರೀತಿ ಹಾಗೂ ಬೆಂಬಲ ತೋರಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.

Submit Your Article