Breaking News
ಬಿಜೆಪಿಯ ನೈತಿಕ ಭ್ರಷ್ಟ ನಾಯಕರು ಒಬ್ಬೊಬ್ಬರಾಗಿ ದೇಶದ ಮುಂದೆ ಬೆತ್ತಲಾಗುತ್ತಿದ್ದಾರೆ: ಸಿದ್ದರಾಮಯ್ಯ ಟೀಕೆಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ: ಸಾಹುಕಾರನ ಬೆನ್ನಿಗೆ ನಿಂತ ಬಿಜೆಪಿ ನಾಯಕರುಸಾಹುಕಾರನ ತಲೆದಂಡ: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆತಿಂಗಳಲ್ಲೇ ಕೋಟಿ ಒಡೆಯನಾದ ನಂಜುಂಡೇಶ್ವರ: ದೇವಸ್ಥಾನದ ಹುಂಡಿಯಲ್ಲಿ 1.11ಕೋಟಿ ಸಂಗ್ರಹಬೃಹದಾಕಾರದ ಅರಳಿ ಮರಕ್ಕೆ ಕೊಡಲಿ ಪೆಟ್ಟು: ಕಡಿದ ಮರದ ಬುಡಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ ಪರಿಸರ ಪ್ರೇಮಿಗಳುಸಚಿವ ಸಿಪಿ ಯೋಗೀಶ್ವರ್ ಗೆ ಮಾಜಿ ಸಿಎಂ ಕುಮಾರಸ್ವಾಮಿ ಟಾಂಗ್ಯಾರಿಗೆ ಎಲ್ಲಿ ಅನುಕೂಲ ಆಗುತ್ತೋ ಅಲ್ಲಿ ಲಸಿಕೆ ಹಾಕಿಸಿಕೊಳ್ಳಲಿ: ಸಿಎಂ ಯಡಿಯೂರಪ್ಪಜೀವನದ ಪಾಠ ಕಲಿಸಿದ ಕೊರೋನಾ: ವ್ಯಕ್ತಿಯ ಶ್ರಮಕ್ಕೆ ಮೋದಿ ಮೆಚ್ಚುಗೆಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಸಿಡಿಮಾ 3 ರಿಂದ ಕಾಂಗ್ರೆಸ್‌ನ ಜನಧ್ವನಿ ಯಾತ್ರೆ

ನಟ ರಾಘವೇಂದ್ರ ರಾಜಕುಮಾರ್ ಮನೆಗೆ ಜಗ್ಗೇಶ್‌ ಭೇಟಿ: ಹಿರಿಯ ನಟನ ಆರೋಗ್ಯ ವಿಚಾರಿಸಿದ ನವರಸ ನಾಯಕ

ಆರೋಗ್ಯದಲ್ಲಿ ಕೊಂಚ ಸಮಸ್ಯೆ ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲಾಗಿದ್ದೆ. ಈ ಬಗ್ಗೆ ಯಾರು ಆತಂಕಪಡುವಂತಹದ್ದು ಏನೂ ಆಗಿಲ್ಲ ಎಂದು ರಾಘವೇಂದ್ರ ರಾಜ್‌ಕುಮಾರ್‌ ಅವರು ಹೇಳಿದ್ದಾರೆ.
Share on facebook
Share on google
Share on twitter
Share on linkedin
Share on print

ಬೆಂಗಳೂರು, ಫೆ. 22: ಶೂಟಿಂಗ್‌ ಸಂದರ್ಭದಲ್ಲಿ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿ ಡಿಸ್ಚಾರ್ಜ್‌ ಆದ ನಟ ರಾಘವೇಂದ್ರ ರಾಜ್‌ಕುಮಾರ್‌ ಅವರ ನಿವಾಸಕ್ಕೆ ನವರಸ ನಾಯಕ ಜಗ್ಗೇಶ್‌ ಭೇಟಿ‌ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಆರೋಗ್ಯದಲ್ಲಿ ಕೊಂಚ ಸಮಸ್ಯೆ ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲಾಗಿದ್ದೆ. ಈ ಬಗ್ಗೆ ಯಾರು ಆತಂಕಪಡುವಂತಹದ್ದು ಏನೂ ಆಗಿಲ್ಲ ಎಂದು ರಾಘವೇಂದ್ರ ರಾಜ್‌ಕುಮಾರ್‌ ಅವರು ಹೇಳಿದ್ದಾರೆ.

ಬೆಳಕು ಸಿನಿಮಾದ ಶೂಟಿಂಗ್‌ ವೇಳೆ ಆರೋಗ್ಯದಲ್ಲಿ ವ್ಯತ್ಯಯವಾಗಿತ್ತು. ಆ ವೇಳೆ ರಾಜಾಜಿನಗರದ ಕೊಲೊಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳ ನಂತರ ರಾಘವೇಂದ್ರ ರಾಜ್‌ಕುಮಾರ್‌ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು.

ಈ ಹಿನ್ನೆಲೆಯಲ್ಲಿ ಸೋಮವಾರ ಸದಾಶಿವನಗರದಲ್ಲಿರುವ ನಟ ರಾಘವೇಂದ್ರ ರಾಜ್‌ಕುಮಾರ್‌ ಮನೆಗೆ ಭೇಟಿ ನೀಡಿದ ಜಗ್ಗೇಶ್‌ ಅವರು ರಾಜ್‌ ಕುಟುಂಬದೊಂದಿಗೆ ಈ ಹಿಂದಿನಿಂದಲೂ ಸಾಕಷ್ಟು ಒಡನಾಟ ಹೊಂದಿದ್ದವರು.

Submit Your Article