• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಪೊಲೀಸರ ಕೈಗೆ ಸಿಗದ ಯುವತಿ ವಿಜಯಮಲ್ಯನೋ ಇಲ್ಲ ನೀರವ್‌ ಮೋದಿಯೋ: ಸಿದ್ದರಾಮಯ್ಯ ಪ್ರಶ್ನೆ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಸಂತ್ರಸ್ತ ಯುವತಿ ರಕ್ಷಣೆಗೆ ಮೊರೆಯಿಡುತ್ತಿರುವುದು ಪೊಲೀಸರ ವೈಫಲ್ಯ ಮತ್ತು ಪೂರ್ವಗ್ರಹಕ್ಕೆ ಹಿಡಿದ ಕನ್ನಡಿ: ಸಿದ್ದರಾಮಯ್ಯ
0
SHARES
0
VIEWS
Share on FacebookShare on Twitter

ಬೆಂಗಳೂರು, ಮಾ. 28: ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಇನ್ನೂ ಪೊಲೀಸರ ಕೈಗೆ ಸಿಕ್ಕಿಲ್ಲ ಅಂದರೆ, ಆಕೆಯೇನು ವಿಜಯಮಲ್ಯನೋ ಅಥವಾ ನೀರವ್‌ ಮೋದಿಯೋ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ರಾಜ್ಯದ ಪೊಲೀಸ್ ಇಲಾಖೆಯೂ ಸೇರಿದಂತೆ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿರುವುದಕ್ಕೆ ಈ ಸಿಡಿ ಹಗರಣ ಸಾಕ್ಷಿ. ಸಾಮಾನ್ಯ ಕುಟುಂಬದಿಂದ ಬಂದಿರುವ ಯುವತಿಯನ್ನು ಇಷ್ಟು ದಿನಗಳ ನಂತರವೂ ಪತ್ತೆ ಹಚ್ಚಲಾಗಿಲ್ಲವೆಂದರೆ ಏನು ಅರ್ಥ? ಆಕೆಯೇನು ವಿಜಯಮಲ್ಯನೋ ಇಲ್ಲವೇ ನೀರವ್ ಮೋದಿಯೋ ಎಂದು ಕೇಳಿದ್ದಾರೆ.

ಸಿಡಿ ಪ್ರಕರಣದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು ಆಗುತ್ತಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಪೊಲೀಸರ ವೈಫಲ್ಯವೇ ಕಾರಣ. ಸಿಡಿ ಮಾಧ್ಯಮದಲ್ಲಿ ಕಾಣಿಸಿಕೊಂಡು 26 ದಿನಗಳು ಕಳೆದರೂ ಸಂತ್ರಸ್ತೆ ಯುವತಿಯನ್ನು ಪೊಲೀಸರಿಗೆ ಪತ್ತೆಹಚ್ಚಲಿಕ್ಕಾಗದಿರುವುದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದ್ದಾರೆ.

ದಿನಕ್ಕೊಂದು ತಿರುವು ಪಡೆದು ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿರುವ ಸಿಡಿ ಹಗರಣದ ತನಿಖೆ ತಾರ್ಕಿಕ ಅಂತ್ಯ ಕಾಣಬೇಕಾದರೆ ಸಂತ್ರಸ್ತ ಯುವತಿ ಅಜ್ಞಾತ ಸ್ಥಳದಿಂದ ಹೊರಬಂದು ಪೊಲೀಸರ ಮುಂದೆ ಹಾಜರಾಗಿ ಹೇಳಿಕೆ ನೀಡಬೇಕು. ಕಾನೂನು ಬದ್ಧವಾದ ಅವಳ ಹಕ್ಕನ್ನು ಚಲಾಯಿಸದಂತೆ ತಡೆಯುತ್ತಿರುವವರು ಯಾರು ಎಂದು ಸಿದ್ದು ಪ್ರಶ್ನಿಸಿದ್ದಾರೆ.

ಸಿಡಿಯಲ್ಲಿರುವ ಯುವತಿ ಅಜ್ಞಾತ ಸ್ಥಳದಿಂದ ನಿರಂತರವಾಗಿ ತನ್ನ ಹೇಳಿಕೆಗಳ ಸಿಡಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತಿದ್ದಾಳೆ, ತನ್ನ ವಕೀಲನ ಮೂಲಕ ಪೊಲೀಸರಿಗೆ ದೂರು ಕಳುಹಿಸಿಕೊಡುತ್ತಿದ್ದಾಳೆ, ತಂದೆ-ತಾಯಿ ಜೊತೆ ಮಾತನಾಡುತ್ತಿದ್ದಾಳೆ. ಹೀಗಿದ್ದರೂ ಪೊಲೀಸರ ಕೈಗೆ ಮಾತ್ರ ಸಿಗುತ್ತಿಲ್ಲ ಎಂದರೆ ಏನು ಅರ್ಥ? ಎಂದು ಪ್ರಶ್ನಿಸಿದ್ದಾರೆ.

ಅಲ್ಲದೇ, ಮಾಧ್ಯಮಗಳಲ್ಲಿ ಪ್ರಕಟ/ಪ್ರಸಾರವಾಗಿರುವ ಯುವತಿಯದ್ದೆನ್ನಲಾದ ಹೇಳಿಕೆಗಳನ್ನು ಗಮನಿಸಿದರೆ ಆಕೆಗೆ ರಾಜ್ಯ ಸರ್ಕಾರದ ಮೇಲಾಗಲಿ, ಪೊಲೀಸರ ಮೇಲಾಗಲಿ ನಂಬಿಕೆ ಇಲ್ಲ. ಪೊಲೀಸರು ತನ್ನ ವಿರುದ್ಧವೇ ಸಂಚು ಮಾಡುತ್ತಿದ್ದಾರೆಂಬ ಅರ್ಥದಲ್ಲಿ ಯುವತಿ ಮಾತನಾಡುತ್ತಿದ್ದಾಳೆ. ಗೃಹಸಚಿವ ಬಸವರಾಜ ಬೊಮ್ಮಾಯಿ ಈ ಬಗ್ಗೆ ಗಮನಹರಿಸಬೇಕು ಎಂದು ತಿಳಿಸಿದ್ದಾರೆ.

ಸಿಡಿ ಪ್ರಕರಣದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು ಆಗುತ್ತಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಪೊಲೀಸರ ವೈಫಲ್ಯವೇ ಕಾರಣ. ಸಿಡಿ ಮಾಧ್ಯಮದಲ್ಲಿ ಕಾಣಿಸಿಕೊಂಡು 26 ದಿನಗಳು ಕಳೆದರೂ ಸಂತ್ರಸ್ತೆ ಯುವತಿಯನ್ನು ಪೊಲೀಸರಿಗೆ ಪತ್ತೆಹಚ್ಚಲಿಕ್ಕಾಗದಿರುವುದು ನಾಚಿಕೆಗೇಡಿನ ಸಂಗತಿ. 1/5#RameshJarkiholiCDCase

— Siddaramaiah (@siddaramaiah) March 28, 2021

Related News

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ
ಪ್ರಮುಖ ಸುದ್ದಿ

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ

May 31, 2023
ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!
Vijaya Time

ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!

May 31, 2023
ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!
Vijaya Time

ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!

May 31, 2023
ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC
Vijaya Time

ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC

May 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.