ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

vijayapura bank


ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಗಮದಲ್ಲಿ 71 ವ್ಯವಸ್ಥಾಪಕ, ಎಫ್ಡಿಎ ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಫೆಬ್ರವರಿ 15,2022 ರಿಂದ ಮಾರ್ಚ್ 5,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು.
2022 ವಿದ್ಯಾರ್ಹತೆ : ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಗಮ ನೇಮಕಾತಿಯ ವ್ಯವಸ್ಥಾಪಕ, ಎಫ್ಡಿಎ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ ಅಥವಾ ಸಂಸ್ಥೆಯಿಂದ ಪದವಿ, ಬಿಇ, ಬಿ.ಎಸ್ಸಿ ಮತ್ತು 10ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ :
ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಗಮ ನೇಮಕಾತಿಯ ವ್ಯವಸ್ಥಾಪಕ, ಎಫ್ಡಿಎ ಮತ್ತು ವಿವಿಧ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 35 ವರ್ಷದೊಳಗಿನ ಸಾಮಾನ್ಯ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ನೇಮಕಾತಿ 2022 ವೇತನ :
ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಗಮ ನೇಮಕಾತಿಯ ವ್ಯವಸ್ಥಾಪಕ, ಎಫ್ಡಿಎ ಮತ್ತು ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,500/- ರಿಂದ 88,300/-ರೂ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ :
ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಗಮ ನೇಮಕಾತಿಯ ವ್ಯವಸ್ಥಾಪಕ, ಎಫ್ಡಿಎ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ತದನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಶುಲ್ಕ :
ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಗಮ ನೇಮಕಾತಿಯ ವ್ಯವಸ್ಥಾಪಕ, ಎಫ್ಡಿಎ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಕೆ :
ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಗಮ ನೇಮಕಾತಿಯ ವ್ಯವಸ್ಥಾಪಕ, ಎಫ್ಡಿಎ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕಚೇರಿ ವೇಳೆಯಲ್ಲಿ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 15,2022 ರಿಂದ ಮಾರ್ಚ್ 5,2022ರೊಳಗೆ ಅರ್ಜಿಯನ್ನು ಹಾಕಬಹುದು

Exit mobile version