ಬೆಂಕಿ ಅವಘಡ: ರಸ್ತೆ ಮಧ್ಯೆ ಹೊತ್ತಿ ಉರಿದ ಖಾಸಗಿ ಬಸ್, ಪ್ರಯಾಣಿಕರು ಬಚಾವ್

Vijayapura: ಶುಕ್ರವಾರ ಮುಂಜಾನೆ ಬೆಂಗಳೂರಿನಿಂದ ವಿಜಯಪುರಕ್ಕೆ ಆಗಮಿಸುತ್ತಿದ್ದ (Vijayapura Fire accident) ಖಾಸಗಿ ಬಸ್ಸಿನ ಟೈರ್ ಬ್ಲಾಸ್ಟ್ ಆಗಿದ್ದು, ಇದರ ಪರಿಣಾಮವಾಗಿ

ರಸ್ತೆಮಧ್ಯೆಯಲ್ಲಿಯೇ ಬಸ್ ಹೊತ್ತಿ ಉರಿದ ಘಟನೆ ನಡೆದಿದೆ. ಅದೃಷ್ಟವಶಾತ್ ಎಲ್ಲಾ (Vijayapura Fire accident) ಪ್ರಯಾಣಿಕರು ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ.

ಈ ಘಟನೆ ರಾಷ್ಟ್ರೀಯ ಹೆದ್ದಾರಿ-50 (National Highway-50) ರಲ್ಲಿಸಂಭವಿಸಿದ್ದು, ಬೆಳಗಿನ ಸಮಯವಾದ್ದರಿಂದ ಪ್ರಯಾಣಿಕರೆಲ್ಲ ಎಚ್ಚರವಾಗಿದ್ದರು ಹಾಗಾಗಿ ಈ ಭಾರೀ ಅನಾಹುತ ತಪ್ಪಿದಂತಾಗಿದೆ.

ಟೈರ್ ಬ್ಲಾಸ್ಟ್ ಆಗುತ್ತಿದ್ದಂತೆ ಪ್ರಯಾಣಿಕರು ಬೇಗ ಬೇಗ ಕೆಳಗಿಳಿದಿದ್ದರಿಂದ ಅವರೆಲ್ಲ ಸುರಕ್ಷಿತವಾಗಿದ್ದಾರೆ. ನೋಡ ನೋಡುತ್ತಿದ್ದಂತೆಯೇ ಬಸ್ ಗೆ ಹೊತ್ತಿಕೊಂಡ ಬೆಂಕಿ ಕ್ಷಣ ಮಾತ್ರದಲ್ಲಿ ಇಡೀ ಬಸ್ ಗೆ

ಆವರಿಸಿದ್ದರಿಂದ ಬಸ್ ಸುಟ್ಟು ಕರಕಲಾಗಿದೆ.‌

ಜನತಾ ಟ್ರಾವೆಲ್ಸ್ ಗೆ ಸೇರಿದ ಬಸ್ ಇದಾಗಿದ್ದು, ರಾಷ್ಟ್ರೀಯ ಹೆದ್ದಾರಿ 50ರ ವಿಜಯಪುರ ತಾಲೂಕಿನ ಹಿಟ್ಟನಹಳ್ಳಿ (Hittanahalli) ಸಮೀಪ ಚಲಿಸುತ್ತಿದ್ದಾಗ ಏಕಾಏಕಿ ಟೈರ್ ಬ್ಲಾಸ್ಟ್ ಆಗಿ ಅವಘಡ

ಸಂಭವಿಸಿದೆ. ಇನ್ನು ಟೈರ್ ಬ್ಲಾಸ್ಟ್ ಆಗುತ್ತಿದ್ದಂತೆ ಚಾಲಕ ಬಸ್ ಅನ್ನು ನಿಯಂತ್ರಣಕ್ಕೆ ತಂದು ನಿಲ್ಲಿಸಿದ್ದಾನೆ. ತಕ್ಷಣವೇ ಪ್ರಯಾಣಿಕರು ಸುರಕ್ಷಿತವಾಗಿ ಕೆಳಗಿಳಿದಿದ್ದಾರೆ.

ಇದೇ ವೇಳೆ ನೋಡು ನೋಡುತ್ತಿದ್ದಂತೆಯೇ ಕ್ಷಣಮಾತ್ರದಲ್ಲಿ ಬಸ್ಸಿಗೆ ಬೆಂಕಿ ಹೊತ್ತಿಕೊಂಡಿದ್ದು, ಎಲ್ಲಾ ಪ್ರಯಾಣಿಕರು ಬಸ್ಸಿನಿಂದ ವೇಗವಾಗಿ ಇಳಿದಿದ್ದರಿಂದ ನಡೆಯಬಹುದಾಗಿದ್ದ ಭಾರೀ ಅನಾಹುತವೊಂದು

ತಪ್ಪಿದೆ. ಈ ಘಟನೆಯಿಂದ ಪ್ರಯಾಣಿಕರು ಗಾಬರಿಗೊಂಡಿದ್ದಾರೆ.

ಪ್ರಯಾಣಿಕರು ಬಸ್ಸಿನಿಂದ ಕೆಳಗೆ ಇಳಿಯುವಷ್ಟರಲ್ಲೇ ಬೆಂಕಿ ಹೊತ್ತಿಕೊಂಡಿದ್ದರಿಂದ ಲಗೇಜುಗಳನ್ನು ಉಳಿಸಿಕೊಳ್ಳಲಾಗಲಿಲ್ಲ. ಎಲ್ಲರ ಲಗೇಜ್ ಗಳು ಬೆಂಕಿಗಾಹುತಿಯಾಗಿವೆ. ಬೆಳೆ ಬಾಳುವ ವಸ್ತುಗಳು,

ಬಟ್ಟೆಗಳು, ನಗದು ಒಡವೆ ಲಗೇಜ್ ನಲ್ಲಿ ಇದ್ದವು ಎಂದು ಪ್ರಯಾಣಿಕರು ಅಳಲು ತೋಡಿಕೊಂಡಿದ್ದಾರೆ.

ಇನ್ನು ಈ ಘಟನೆ ನಡೆದ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು, ಅಗ್ನಿ ಶಾಮಕ‌ದಳದ (Fire Brigade) ಸಿಬ್ಬಂದಿ ದೌಡಾಯಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ. ವಿಜಯಪುರ ಗ್ರಾಮೀಣ

ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನು ಮಾಡಿ: ಐಟಿ ದಾಳಿ ನಡೆದಷ್ಟೂ ಅಕ್ರಮ ಕಪ್ಪುಹಣ ಪತ್ತೆ: ಕೈ ನಾಯಕರ ಮೇಲೆ ವಿಜಯೇಂದ್ರ ಆರೋಪ

Exit mobile version