ಕಾಂಗ್ರೆಸ್ ಸರ್ಕಾರ ಉದ್ದೇಶ ಪೂರ್ವಕವಾಗಿಯೇ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡಿದೆ – ವಿಜಯೇಂದ್ರ ವಾಗ್ದಾಳಿ

Bengaluru : ಭದ್ರಾವತಿಯಲ್ಲಿ( Bhadravathi) ನಡೆಯುತ್ತಿರುವ ಅಕ್ರಮ ದಂಧೆಗಳಿಗೆ ಸ್ಥಳೀಯ ಶಾಸಕರ ಕೈವಾಡ (Vijayendras Statement on Congress) ಇರುವ ಬಗ್ಗೆ ಜಾಲತಾಣದಲ್ಲಿ

ಗೋಕುಲ್ ಕೃಷ್ಣನ್ (Gokul Krishnan) ಪ್ರಶ್ನಿಸಿದ್ದೇ, ಈ ದಾಳಿ ನಡೆಯಲು ಕಾರಣವಾಗಿದೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್( Congress) ಸರ್ಕಾರ ಉದ್ದೇಶ ಪೂರ್ವಕವಾಗಿಯೇ ಬಿಜೆಪಿ

ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಹಲ್ಲೆ ಮಾಡುವವರಿಗೆ ಕುಮ್ಮಕ್ಕು ನೀಡುತ್ತಿರುವಂತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಅಧಿಕಾರಸ್ಥ ಕಾಂಗ್ರೆಸ್ಸಿಗರ ಅಕ್ರಮಗಳ ವಿರುದ್ಧ ದನಿ ಎತ್ತುವ ಬಿಜೆಪಿ( BJP ) ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಲ್ಲೆ ಪ್ರಕರಣಗಳು

ದಿನೇ ದಿನೇ ಹೆಚ್ಚುತ್ತಲೇ ಇವೆ. ಕಲಬುರ್ಗಿ(Kalaburgi), ಬೆಳಗಾವಿಯ ಪ್ರಕರಣಗಳ ಬೆನ್ನಲೇ ಭದ್ರಾವತಿಯ ನಮ್ಮ ಬಿಜೆಪಿ ಮುಖಂಡ ಗೋಕುಲ್ ಕೃಷ್ಣನ್ ಅವರ ಮೇಲೆ ನಡೆದಿರುವ ಗೂಂಡಾಗಳ

ಹಲ್ಲೆ ಆತಂಕಕಾರಿ (Vijayendras Statement on Congress) ಘಟನೆಯಾಗಿದೆ.

ಭದ್ರಾವತಿಯಲ್ಲಿ(Bhadravathi) ನಡೆಯುತ್ತಿರುವ ಅಕ್ರಮ ದಂಧೆಗಳಿಗೆ ಸ್ಥಳೀಯ ಶಾಸಕರ ಕೈವಾಡ ಇರುವ ಬಗ್ಗೆ ಜಾಲತಾಣದಲ್ಲಿ ಗೋಕುಲ್ ಕೃಷ್ಣನ್ ಪ್ರಶ್ನಿಸಿದ್ದೇ, ಈ ದಾಳಿ ನಡೆಯಲು

ಕಾರಣವಾಗಿದೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್( Congress) ಸರ್ಕಾರ ಉದ್ದೇಶ ಪೂರ್ವಕವಾಗಿಯೇ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಹಲ್ಲೆ ಮಾಡುವವರಿಗೆ ಕುಮ್ಮಕ್ಕು

ನೀಡುತ್ತಿರುವಂತಿದೆ. ತಕ್ಷಣವೇ ಭದ್ರಾತಿಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನಮ್ಮ ಕಾರ್ಯಕರ್ತನಿಗೆ ರಕ್ಷಣೆ ನೀಡಿ, ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕ್ರಮ ಜರುಗಿಸಬೇಕೆಂದು

ಒತ್ತಾಯಿಸುತ್ತೇನೆ ಎಂದಿದ್ದಾರೆ.

ಇನ್ನು ಕೆಲ ದಿನಗಳ ಹಿಂದಷ್ಟೇ ಬೆಳಗಾವಿಯಲ್ಲೂ(Belagavi) ಬಿಜೆಪಿ ಕಾರ್ಯಕರ್ತನ ಕೊಲೆ ಯತ್ನ ನಡೆದಿತ್ತು. ಬಿಜೆಪಿ ಕಾರ್ಯಕರ್ತ ಪೃಥ್ವಿ ಸಿಂಗ್ ಮೇಲೆ ನಡೆದ ಕೊನೆ ಯತ್ನ ಪ್ರಕರಣ

ವಿಧಾನಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಗಿತ್ತು. ಡಿಸೆಂಬರ್ 4 ರಂದು ನಡೆದ ಕೊಲೆ ಯತ್ನ ಪ್ರಕರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar)

ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರ ವಿರುದ್ಧ ಆರೋಪ ಕೇಳಿಬಂದಿತ್ತು.

ಈ ವಿಚಾರವಾಗಿ ಬಿಜೆಪಿ(BJP) ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದರು. ನಮ್ಮ ಕಾರ್ಯಕರ್ತರಿಗೆ ಸೂಕ್ತ

ರಕ್ಷಣೆ ನೀಡಬೇಕು, ಸೂಕ್ತ ಸೆಕ್ಷನ್ ಹಾಕಬೇಕು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದರು.

ಇದನ್ನು ಓದಿ: ನಕಲಿ ವೈದ್ಯರ ಹಾವಳಿ: ಕಾರ್ಯಾಚರಣೆಗೆ ಇಳಿದ ಆರೋಗ್ಯ ಇಲಾಖೆ, 1,434ಕ್ಕೂ ಹೆಚ್ಚು ವೈದ್ಯರ ವಿರುದ್ಧ ದೂರು ದಾಖಲು

Exit mobile version