ಬೆಂಗಳೂರು, ಡಿ. 07: ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದಿಢೀರನೇ ಅವಧೂತ ವಿನಯ್ ಗುರೂಜಿ ಅವರನ್ನು ಭೇಟಿಯಾಗಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸಕ್ಕೆ ವಿನಯ್ ಗುರೂಜಿ ಅವರನ್ನು ಕರೆಸಿಕೊಂಡಿದ್ದ ಯಡಿಯೂರಪ್ಪ ಸುಮಾರು ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದ್ದು, ಅವರ ಭೇಟಿ ಹಿಂದಿನ ಕಾರಣವೇನೆಂದು ತಿಳಿದುಬಂದಿಲ್ಲ. ಸದ್ಯ ವಿನಯ್ ಗುರೂಜಿ, ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿ ತೀವ್ರ ಕುತೂಹಲ ಮೂಡಿಸಿದೆ.