ವಿನಯ್‌ ಕುಲಕರ್ಣಿಗೆ ಡಿಸೆಂಬರ್ 21ರವರೆಗೆ ನ್ಯಾಯಂಗ ಬಂಧನ

ಬೆಂಗಳೂರು, ಡಿ. 07: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರಿಗೆ, ಸಿಬಿಐ ವಿಶೇಷ ನ್ಯಾಯಾಲಯ ಮತ್ತೆ ಡಿಸೆಂಬರ್ 21ರವರೆಗೆ ನ್ಯಾಯಂಗ ಬಂಧನ ವಿಧಿಸಿ ಆದೇಶಿಸಿದೆ. ಹೀಗಾಗಿ ಮತ್ತೆ ವಿನಯ್ ಕುಲಕರ್ಣಿಗೆ ಜೈಲೇ ಗತಿ ಎಂಬಂತಾಗಿದೆ.

ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು. ಬಂಧನದ ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಇಂದಿನವರೆಗೆ ಸಿಬಿಐ ವಿಶೇಷ ಕೋರ್ಟ್ ನ್ಯಾಯಂಗ ಬಂಧನ ವಿಧಿಸಿತ್ತು. ಇಂದು ಅವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ, ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದಂತ ಸಿಬಿಐ ವಿಶೇಷ ನ್ಯಾಯಾಲಯವು, ಮತ್ತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಡಿಸೆಂಬರ್ 21ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಹೀಗಾಗಿ ವಿನಯ್ ಕುಲಕರ್ಣಿಗೆ ಮತ್ತೆ ಜೈಲೇ ಗತಿಯಾದಂತೆ ಆಗಿದೆ.

Exit mobile version