ಜೋಹನ್ಸ್‌ಬರ್ಗ್ ಜ 13 : ದಕ್ಷಿಣ ಆಫ್ರಿಕಾ ವಿರುದ್ದದ ಅಂತಿಮ ಟೆಸ್ಟ್‌ನಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ಸಾಧನೆ ಮಾಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಹಾಗೂ ಸರಣಿ ನಿರ್ಣಾಯಕ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ನಾಯಕ ಫೀಲ್ಡಿಂಗ್‌ನಲ್ಲಿ ಮತ್ತೊಂದು ಮೈಲುಗಲ್ಲು ಸ್ಥಾಪಿಸಿದ್ದಾರೆ.
ಬುಧವಾರ ದಕ್ಷಿಣ ಆಫ್ರಿಕಾ ತಂಡದ ಪ್ರಥಮ ಇನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ತಮ್ಮ ಟೆಸ್ಟ್ ವೃತ್ತಿ ಜೀವನದಲ್ಲಿ 100 ಕ್ಯಾಚ್‌ಗಳನ್ನು ಪೂರ್ಣಗೊಳಿಸಿದರು. 56ನೇ ಓವರ್‌ನಲ್ಲಿ ಮೊಹಮ್ಮದ್ ಶಮಿ ಎಸೆತದಲ್ಲಿ ತೆಂಬಾ ಬವೂಮ ಅವರ ಕ್ಯಾಚ್ ಅನ್ನು ಪಡೆಯುವ ಮೂಲಕ ವಿರಾಟ್ ಕೊಹ್ಲಿ ಈ ಸಾಧನೆಗೆ ಭಾಜನರಾಗಿದ್ದಾರೆ.
ಮೈದಾನದಲ್ಲಿ ಈ ಸಾಧನೆ ಮಾಡಿದ ವಿಕೆಟ್ ಕೀಪರ್ ಅಲ್ಲದ ಭಾರತದ 6ನೇ ಫೀಲ್ಡರ್ ಎಂಬ ಕೀರ್ತಿಗೆ ಕಿಂಗ್ ಕೊಹ್ಲಿ ಪಾತ್ರರಾಗಿದ್ದಾರೆ. ಭಾರತ ತಂಡದ ಪರ ಎರಡನೇ ದಿನ ಎರಡನೇ ಸೆಷನ್‌ನಲ್ಲಿ ಮೊಹಮ್ಮದ್ ಶಮಿ ಅದ್ಭುತವಾಗಿ ಬೌಲ್ ಮಾಡಿದ್ದರು. ಆ ಮೂಲಕ ಪ್ರಥಮ ಇನಿಂಗ್ಸ್‌ನಲ್ಲಿ ಎರಡು ನಿರ್ಣಾಯಕ ವಿಕೆಟ್‌ಗಳನ್ನು ಕಬಳಿಸುವ ಮೂಲಕ ದಕ್ಷಿಣ ಆಫ್ರಿಕಾ ತಂಡವನ್ನು 210 ರನ್‌ಗಳಿಗೆ ಆಲ್‌ಔಟ್ ಮಾಡುವಲ್ಲಿ ತಂಡಕ್ಕೆ ನೆರವಾಗಿದ್ದರು. ಪ್ರಥಮ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ಅರ್ಧ ಶತಕ ಗಳಿಸಿ ತಂಡಕ್ಕೆ ನೆರವಾಗಿದ್ದರು.