Visit Channel

ನಾಯಕತ್ವ ಬದಲಾವಣೆಗೆ ಮತ್ತೊಮ್ಮೆ ಚಕಾರವೆತ್ತಿದ ಎಚ್. ವಿಶ್ವನಾಥ್; ವಿಜಯೇಂದ್ರ ವಿರುದ್ಧ ಕಿಕ್ ಬ್ಯಾಕ್ ಆರೋಪ ಮಾಡಿದ ಹಳ್ಳಿಹಕ್ಕಿ

b53a254d-39d7-465f-ba15-99d0c8ec5c44

ಬೆಂಗಳೂರು,ಜೂ.18: ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಗೆ ಬಿಗಿ ಪಟ್ಟು ಹಿಡಿದಿರುವ ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್,ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬದ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ‌20 ಸಾವಿರ ಕೋಟಿ ರೂ. ನೀರಾವರಿ ಯೋಜನೆಯಲ್ಲಿ ಸಿಎಂ ಪುತ್ರ ವಿಜಯೇಂದ್ರ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಅಲ್ಲದೇ, ಯಡಿಯೂರಪ್ಪ ನಾಯಕತ್ವದ ವಿರುದ್ಧ ಶೇ.80 ರಷ್ಟು ಶಾಸಕರಿಗೆ ಅಸಮಾಧಾನ ಇದೆ. ಎಲ್ಲರೂ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬಳಿ ಹೇಳಿದ್ದಾರೆ ಎಂದಿರುವ ಅವರು, ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಆಗಲೇಬೇಕೆಂದು ಮತ್ತೊಮ್ಮೆ
ನಾಯಕತ್ವ ಬದಲಾವಣೆ ಬಗ್ಗೆ ಚಕಾರ ಎತ್ತಿದ್ದಾರೆ.

ಇದೇ ವೇಳೆ ತಮ್ಮ ವಿರುದ್ಧ ಹೇಳಿಕೆ ನೀಡುತ್ತಿರುವ ಸಚಿವ ಈಶ್ವರಪ್ಪ, ಶಾಸಕರಾದ ರೇಣುಕಾಚಾರ್ಯ ಹಾಗೂ ವಿಶ್ವನಾಥ್ ಅವರನ್ನು ತೀವ್ರ ತರಾಟೆಗೆ ‌ತೆಗೆದುಕೊಂಡ ಹಳ್ಳಿಹಕ್ಕಿ, ಇವರೆಲ್ಲರೂ ಸರ್ಕಾರದ ಖಜಾನೆಯನ್ನು ಹೇಗೆ ಲೂಟಿ ಮಾಡುತ್ತಿದ್ದಾರೆ ಎಂದು ಹಳ್ಳಿಹಕ್ಕಿ ಕುಟುಕಿದರು.

Latest News

Lal singh chadda
ಮನರಂಜನೆ

“ಲಾಲ್ ಸಿಂಗ್ ಚಡ್ಡಾ” ಚಿತ್ರ ಭಾರತೀಯ ಸೇನೆ ಮತ್ತು ಸಿಖ್ಖರನ್ನು ಅವಮಾನಿಸಿದೆ! : ಕ್ರಿಕೆಟಿಗ ಮಾಂಟಿ ಪನೇಸರ್

ಲಾಲ್ ಸಿಂಗ್ ಚಡ್ಡಾ  ಚಿತ್ರ ನಿಷೇಧಕ್ಕೆ ಮಾಂಟಿ ಪನೇಸರ್ ಕರೆ.  ಕ್ರಿಕೆಟಿಗ ಮಾಂಟಿ ಪನೇಸರ್ ಅವರು ಟ್ವಿಟರ್ನಲ್ಲಿ “ಲಾಲ್ ಸಿಂಗ್ ಚಡ್ಡಾ ಚಿತ್ರ ನಾಚಿಕೆಗೇಡಿನದು.

Medical Test
ಮಾಹಿತಿ

ಮದುವೆಗೂ ಮುನ್ನ ಈ ವೈದ್ಯಕೀಯ ಪರೀಕ್ಷೆಗಳನ್ನು ತಪ್ಪದೇ ಮಾಡಿಸಿಕೊಳ್ಳಿ ; ಅನುವಂಶಿಕ ಕಾಯಿಲೆಗಳನ್ನು ಪತ್ತೆ ಮಾಡಿ

ಕೆಲ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವುದರಿಂದ ಆನುವಂಶಿಕ ಕಾಯಿಲೆಗಳು ಪತ್ತೆ ಮಾಡಿ, ಅವುಗಳಿಗೆ ಚಿಕಿತ್ಸೆಯನ್ನು ಕೂಡ ಪಡೆದುಕೊಳ್ಳಬಹುದು.