ಮಂತ್ರಿಯಾಗುವ ವಿಶ್ವನಾಥ್ ಕನಸು ಭಗ್ನ: ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂಕೋರ್ಟ್

ಬೆಂಗಳೂರು, ಜ. 28: ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನ ಪಡೆಯುವ ಕನಸು ಹೊತ್ತಿದ್ದ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರ ಕನಸು ಭಗ್ನಗೊಂಡಿದೆ.

ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಗೆ ಸುಪ್ರೀಂಕೋರ್ಟ್ ನಲ್ಲೂ ಹಿನ್ನೆಡೆ. ಹೆಚ್.ವಿಶ್ವನಾಥ್ ಮಂತ್ರಿಯಾಗುವಂತಿಲ್ಲ ಎಂದ ಸುಪ್ರೀಂಕೋರ್ಟ್. ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂಕೋರ್ಟ್. ಹೈಕೋರ್ಟ್ ಆದೇಶ ಪ್ರಶ್ನಿಸಿ ಎಂಎಲ್ ಸಿ ಹೆಚ್.ವಿಶ್ವನಾಥ್ ಸಲ್ಲಿಸಿದ್ಧ ಅರ್ಜಿ ವಜಾಗೊಳಿಸಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ನ 17 ಶಾಸಕರು ತಮ್ಮ ಪಕ್ಷಕ್ಕೆ ರಾಜಿನಾಮೆ ನೀಡಿ ಬಿಜೆಪಿ ಪಕ್ಷ ಸೇರಿದ ವೇಳೆ, ಇವರೆಲ್ಲಾ ನೇರವಾಗಿ ಆಯ್ಕೆಯಾದರೆ ಮಾತ್ರ ಸಚಿವರಾಗಬಹುದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿತು. ಆದರೆ ಉಳಿದವರೆಲ್ಲರೂ ವಿಧಾನಸಭೆ ಹಾಗೂ ವಿಧಾನಪರಿಷತ್ ಚುನಾವಣೆಯಲ್ಲಿ ನೇರವಾಗಿ ಆಯ್ಕೆಯಾಗಿದ್ದರು. ಆದರೆ ವಿಶ್ವನಾಥ್ ಮಾತ್ರ ಸರ್ಕಾರದಿಂದ ಸಾಹಿತಿ ಕೋಟಾದಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದರು.
ಶಾಸಕರಾಗಿ ನೇರವಾಗಿ ಆಯ್ಕೆಯಾದರೆ ಮಾತ್ರ ಸಚಿವರಾಗಬೇಕೆಂಬ ಸುಪ್ರೀಂ ಕೋರ್ಟ್ ತೀರ್ಪು ಪ್ರಶ್ನಿಸಿ ವಿಶ್ವನಾಥ್ ಹೈಕೋರ್ಟ್ ಮೆಟ್ಟಿಲು ಹತ್ತಿದ್ದರು.

ಹೈಕೋರ್ಟ್ ಕೂಡ ಸುಪ್ರೀಂ ಕೋರ್ಟ್ ಆದೇಶವನ್ನು ಎತ್ತಿ ಹಿಡಿದಿತ್ತು. ವಿಶ್ವನಾಥ್ ಅವರು ಮತ್ತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ವಿಶ್ವನಾಥ್ ಸಲ್ಲಿಸಿದ್ದ ಮನವಿಯ ಬಗ್ಗೆ ವಾದ ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಎ.ಎಸ್.ಬೋಬ್ಡೆ ಅವರಿದ್ದ ವಿಭಾಗೀಯ ಪೀಠ ಇಂದು ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ.
ಪಕ್ಷಾಂತರ ಮಾಡಿದವರು ನೇರವಾಗಿ ಆಯ್ಕೆಯಾಗದೆ ನಾಮ ನಿರ್ದೇಶನದ ಮೂಲಕ ನೇಮಕಗೊಂಡು ಮಂತ್ರಿ ಆಗಬಾರದು ಎಂದು ಸುಪ್ರೀಂ ಕೋರ್ಟ್ ಇಂದು ಮಹತ್ವದ ಆದೇಶ ನೀಡಿದೆ. ಇದರಿಂದ ಸಚವರಾಗಬೇಕು ಎಂಬ ವಿಶ್ವನಾಥ್ ಆಸೆ ನಿರಾಸೆಯಾಗಿದೆ.

Exit mobile version