ಮಂಗಳೂರು: ಮಲೆಕುಡಿಗೆ ನಕ್ಸಲರ ಜೊತೆ ನಂಟು ಹೊಂದಿದ್ದಾರೆ ಎಂಬ ಆರೋಪದಿಂದ ವಿಠಲ್ ಮಲೆಕುಡಿಯ ಮತ್ತು ಆತನ ತಂದೆ ಮುಕ್ತರಾಗಿದ್ದಾರೆ ಎಂದು ನ್ಯಾಯಾಲಯ ತೀರ್ಪು ನೀಡಿದೆ.
ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಮೂಲ ನಿವಾಸಿಗಳನ್ನು ಒಕ್ಕಲೆಬ್ಬಿಸುವುದರ ವಿರುದ್ದ ಹೋರಾಟ ನಡೆಸುತ್ತಿದ್ದ ವಿಠಲ್ ಮಲೆಕುಡಿಯಗೆ ನಕ್ಸಲ್ ನಂಟಿದೆ ಎಂದು ಬಂಧಿಸಿದ್ದ ನಕ್ಸಲ್ ನಿಗ್ರಹ ಪಡೆ ಬಳಿಕ ಇಬ್ಬರನ್ನು ವೇಣೂರು ಪೊಲೀಸರಿಗೆ ಒಪ್ಪಿಸಿತ್ತು.
ವಿಠಲ್ ಮಲೆಕುಡಿಯ ನಕ್ಸಲರ ಜೊತೆ ನಂಟು ಹೊಂದಿದ್ದಾರೆ ಎಂಬ ಆರೋಪ ದೇಶಾದ್ಯಂತ ಭಾರೀ ಚರ್ಚೆ ಹುಟ್ಟು ಹಾಕಿತ್ತು. 9 ವರ್ಷಗಳ ಕಾಲ ವಿಚಾರಣೆ ನಡೆಸಿದ ಬಳಿಕ ಅಂತಿಮ ತೀರ್ಪು ಪ್ರಕಟವಾಗಿದೆ. ಆರೋಪ ಬಂದಾಗ ವಿಠಲ್ ಮಲೆಕುಡಿಯ ಮಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿದ್ಯಾರ್ಥಿಯಾಗಿದ್ದರು.
ಪ್ರಕರಣದ ಹಿನ್ನಲೆ : ಮಂಗಳೂರು ವಿವಿಯಲ್ಲಿ ಎಂಸಿಜೆ ವಿದ್ಯಾರ್ಥಿಯಾಗಿದ್ದ ಅವರು 2012ರ ಮಾ. 3ರಂದು ನಕ್ಸಲ್ ನಿಗ್ರಹದಳದ ಪೊಲೀಸರಿಂದ ಬಂಧನಕ್ಕೊಳಗಾಗಿ ದೇಶಾದ್ಯಂತ ಸುದ್ದಿಯಾಗಿದ್ದರು. ಈ ಪ್ರಕರಣವನ್ನು ಸಿಪಿಐಎಂ ಪಕ್ಷ ಸವಾಲಾಗಿ ಸ್ವೀಕರಿಸಿ ಹೋರಾಟ ನಡೆಸಿತ್ತು. ವಿಠಲ 4 ತಿಂಗಳ ಹಿಂದೆ ಜೈಲಿನಿಂದ ಬಿಡುಗಡೆಗೊಂಡ ಬಳಿಕ ಕಲಿಕೆ ಜತೆ ಜನಪರ ಹೋರಾಟಗಳ ನೇತೃತ್ವ ವಹಿಸಿದ್ದರು. ಕಳೆದ ಜನವರಿ ಕೊನೆಯಲ್ಲಿ ವಿಠಲ ಮಲೆಕುಡಿಯ ವಿರುದ್ಧ ರಾಜ್ಯ ಸರಕಾರದ ನಿರ್ದೇಶನದಂತೆ ಬಂಟ್ವಾಳ ಎಎಸ್ಪಿಯವರು ಬೆಳ್ತಂಗಡಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಇದು ಮತ್ತೊಂದು ಹಂತದ ಹೋರಾಟಕ್ಕೆ ಕಾರಣವಾಗಿದೆ.