ಬೆಂಗಳೂರು, ನ. 27: ಕೊರೋನಾದಿಂದ ತ್ತರಿಸಿದ ಜನರಿಗೆ ಇದೀಗ ಸಿಹಿಸುದ್ದಿಯೊಂದು ಎಚ್ಡಿಎಫ್ಸಿ ಬ್ಯಾಂಕ್ನಿಂದ ಬಂದಿದೆ. ಹೆಚ್ಡಿಎಫ್ಸಿ ಬ್ಯಾಂಕ್ (ಹೌಸಿಂಗ್ ಡೆವಲಪ್ಮೆಂಟ್ ಫಿನಾನ್ಸ್ ಕಾರ್ಪೋರೇಶನ್ ಲಿಮಿಟೆಡ್)ನಲ್ಲಿ ಖಾಲಿ ಇರುವ ಪ್ರೊಬೆಷನರಿ ಅಧಿಕಾರಿ, ಅಸಿಸ್ಟೆಂಟ್ ಮ್ಯಾನೇಜರ್, ಎಕ್ಸಿಕ್ಯುಟಿವ್ ಸೇರಿದಂತೆ 1367 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಹತೆ: ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ.
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 58,200/- ರೂ. ವೇತನವನ್ನ ನೀಡಲಾಗುವುದು. ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 31, 2020 ಆಗಿರುತ್ತದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅಧಿಕೃತ ವೆಬ್ಸೈಟ್ https://www.hdfcbank.com/ ಗೆ ಹೋಗಿ, ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ತಿಳಿಸಿದೆ.