ಸಮಾಜವನ್ನು ಜಾತಿವಾರು ವಿಭಜನೆ ಮಾಡಬೇಕು ಎಂದಾದರೆ ಮಾತ್ರ ಬಿಜೆಪಿಗೆ ಮತ ನೀಡಿ: ಮಹಮದ್ ನಲಪಾಡ್

Bagalakote: ಬಿಜೆಪಿ (BJP) ಮತ್ತೆ ಅಧಿಕಾರಕ್ಕೆ ಬಂದರೆ ದೇಶಕ್ಕೆ ಗಂಡಾಂತರ ನಿಶ್ಚಿತ. ಸಮಾಜವನ್ನು ಜಾತಿವಾರು ವಿಭಜನೆ ಮಾಡುತ್ತಾರೆ. ಸಂವಿಧಾನ ತಿದ್ದುಪಡಿಯ ಮಾತುಗಳನ್ನು ಆಡುತ್ತಿದ್ದಾರೆ. ಭಯದ ವಾತಾವರಣ ನಿರ್ಮಿಸುತ್ತಿದ್ದಾರೆ. ದೇಶ ಮತ್ತು ಸಂವಿಧಾನ ರಕ್ಷಣೆಗಾಗಿ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಅಧಿಕಾರಕ್ಕೆ ಬರಬೇಕಿದೆ ಎಂದು ಹೇಳಿದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮದ್ ಹ್ಯಾರಿಸ್ ನಲಪಾಡ್ (Mohammed Harries Nalapad) ಹೇಳಿದ್ದಾರೆ .

Congress

ಸಂಯುಕ್ತಾ ಪಾಟೀಲ ಅವರು ತಂದೆ ಸಚಿವ ಶಿವಾನಂದ ಪಾಟೀಲರ (Shivananda Patil) ಪ್ರಭಾವದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವ ಅವಕಾಶ ಪಡೆದಿಲ್ಲ. ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷ ವಹಿಸಿದ ಜವಾಬ್ದಾರಿ ನಿರ್ವಹಿಸಿದ್ದಾರೆ. ಮಹಿಳಾ ಕಾಂಗ್ರೆಸ್ (Congress) ಘಟಕದಲ್ಲಿ ಕೆಲಸ ಮಾಡಿದ್ದಾರೆ. ನಾಯಕತ್ವ ಗುಣ ಹೊಂದಿರುವ ಕಾನೂನು ಪದವಿಧರೆಯಾಗಿದ್ದು, ಅವರು ಸಂಸತ್ತಿಗೆ ಆಯ್ಕೆಯಾದರೆ ರಾಜ್ಯಕ್ಕೆ ನ್ಯಾಯ ಒದಗಿಸಬಲ್ಲರು ಎಂದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮದ್ ಹ್ಯಾರಿಸ್ ನಲಪಾಡ್ ನುಡಿದಿದ್ದಾರೆ.

ಸತತ ನಾಲ್ಕು ಬಾರಿ ಸಂಸತ್ತಿಗೆ ಆಯ್ಕೆಯಾಗಿರುವ ಪಿ.ಸಿ.ಗದ್ದಿಗೌಡರ (P C Gaddigowda) ತಮ್ಮ ಕ್ಷೇತ್ರ ಅಥವಾ ರಾಜ್ಯದ ಸಮಸ್ಯೆಗಳ ಪರಿಹಾರಕ್ಕೆ ಸಂಸತ್ತಿನಲ್ಲಿ ಧ್ವನಿ ಎತ್ತಿಲ್ಲ. ನಮ್ಮ ಪರವಾಗಿ ಮಾತನಾಡುವವರು ಸಂಸತ್ತಿನಲ್ಲಿ ಇರಬೇಕು. ಬಾಗಲಕೋಟೆ ಜಿಲ್ಲೆಗೆ ಬದಲಾವಣೆಯ ಕಾಲ ಬಂದಿದೆ. ಕಾಂಗ್ರೆಸ್ ಪಕ್ಷ ಒಬ್ಬ ಒಳ್ಳೆಯ ಅಭ್ಯರ್ಥಿಯನ್ನು ನಿಮಗೆ ನೀಡಿದೆ. ಸಂಯುಕ್ತಾ ಪಾಟೀಲ (Samyukta Patila) ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕನಸು ಕಟ್ಟಿಕೊಂಡಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ಏನೇನು ಮಾಡಬೇಕು ಎಂಬ ಯೋಜನೆಗಳನ್ನು ರೂಪಿಸಿಕೊಂಡಿದ್ದಾರೆ. ಹೀಗಾಗಿ ಈ ಬಾರಿ ಸಂಯುಕ್ತಾ ಪಾಟೀಲ ಅವರನ್ನು ಅಧಿಕ ಮತಗಳಿಂದ ಆಯ್ಕೆ ಮಾಡಿ ಎಂದು ಮನವಿ ಮಾಡಿದ್ದಾರೆ.

Exit mobile version