ವೃಂದಾವನದ ವಿಧವೆಯರು ಪ್ರಧಾನಿ ಮೋದಿಗೆ ಕಳುಹಿಸಿಕೊಟ್ಟಿದ್ದಾರೆ 251 ರಾಖಿಗಳು

ಲಖನೌ, ಆ. 21: ರಕ್ಷಾಬಂಧನ ಸಮೀಪಿಸುತ್ತಿರುವ ಸಂದರ್ಭದಲ್ಲಿ ಉತ್ತರ ಪ್ರದೇಶದ ದೇಗುಲ ನಗರ ವೃಂದಾವನದ ವಿಧವೆಯರು ಪ್ರಧಾನಿ ನರೇಂದ್ರ ಮೋದಿಯವರಿಗೆ ಕೈಯಲ್ಲೇ ತಯಾರಿಸಿದ 251 ರಾಖಿಗಳನ್ನು ಕಳುಹಿಸಿಕೊಟ್ಟಿದ್ದಾರೆ.

ಕೋವಿಡ್ ಸಾಂಕ್ರಾಮಿಕ ಕಾರಣ ಈ ಬಾರಿ ವಿಧವೆಯರಿಗೆ ನೇರವಾಗಿ ಪ್ರಧಾನಿಯವರನ್ನು ಭೇಟಿಯಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ರಾಖಿಗಳನ್ನು ಕಳುಹಿಸಿಕೊಡಲಾಗಿದೆ ಎಂದು ವಿಧವೆಯರಿಗೆ ನೆರವಾಗುತ್ತಿರುವ ಎನ್‌ಜಿಒ ‘ಸುಲಭ್ ಹೋಪ್ ಫೌಂಡೇಷನ್’ ತಿಳಿಸಿದೆ.

ರಾಖಿಗಳು ಪ್ರಧಾನಿ ನರೇಂದ್ರ ಮೋದಿಯವರ ವರ್ಣಮಯ ಚಿತ್ರಗಳು, ಕೋವಿಡ್ ಸಾಂಕ್ರಾಮಿಕದ ವಿರುದ್ಧ ಎಚ್ಚರಿಕೆಯ ಸಂದೇಶಗಳು, ಆತ್ಮನಿರ್ಭರ ಭಾರತ ಅಭಿಯಾನದ ಸಂದೇಶಗಳನ್ನು ಒಳಗೊಂಡಿವೆ ಎಂದು ಎನ್‌ಜಿಒ ತಿಳಿಸಿದೆ.

ಕೆಲವು ವಿಧವೆಯರು ಹತ್ತಿ ಬಟ್ಟೆಯ ಮಾಸ್ಕ್‌ಗಳನ್ನು ಸಿದ್ಧಪಡಿಸಿದ್ದು, ಇವುಗಳನ್ನು ಭಾನುವಾರ ಪ್ರಧಾನಿಯವರಿಗೆ ನೀಡಲಾಗುತ್ತದೆ ಎಂದು ಎನ್‌ಜಿಒ ಹೇಳಿದೆ.

Latest News

ದೇಶ-ವಿದೇಶ

ದೇಶದ ಹೆಮ್ಮೆ ತ್ರಿವರ್ಣ ಧ್ವಜವೂ ಕೂಡ ಬಿಜೆಪಿಗೆ ವ್ಯಾಪಾರದ ಸರಕಾಗಿದೆ : ಬಿ.ಕೆ.ಹರಿಪ್ರಸಾದ್

38×11,80,000=4.484 ಕೋಟಿ, ಹೇಗಿದೆ ಮೋದಿ ಸರ್ಕಾರದ ಲೂಟಿ? ಕೇಂದ್ರದ ಮೋದಿ ಸರ್ಕಾರ ವಸೂಲಿ ಬಾಜಿತನಕ್ಕೆ ರಾಷ್ಟ್ರಧ್ವಜವನ್ನ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ

ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್

ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.

ಆರೋಗ್ಯ

ದೇಹ ನೀಡುವ `ಈ’ ಸೂಚನೆಗಳು ಕಿಡ್ನಿ ವೈಪಲ್ಯವನ್ನು ಸೂಚಿಸುತ್ತವೆ ; ಇಲ್ಲಿದೆ ಮಾಹಿತಿ ಓದಿ

ಕಿಡ್ನಿ(Kidney) ನಮ್ಮ ದೇಹದ ಪ್ರಮುಖ ಅಂಗವಾಗಿದೆ. ದೇಹದಲ್ಲಿ ಶುದ್ಧ ರಕ್ತವನ್ನು ಪರಿಚಲನೆ ಮಾಡುವಲ್ಲಿ ಮೂತ್ರಪಿಂಡಗಳು ಮುಖ್ಯ ಪಾತ್ರವಹಿಸುತ್ತವೆ.

ರಾಜಕೀಯ

1947ರ ಹಿಂದಿನ ಕಾಂಗ್ರೆಸ್ ಬೇರೆ, ಈಗಿನ ಸೋಗಲಾಡಿ ಸಿದ್ಧಹಸ್ತರು ಇರುವ ಕಾಂಗ್ರೆಸ್ಸೇ ಬೇರೆ : ಹೆಚ್‍ಡಿಕೆ

ಇದುವರೆಗೂ ಕಾಂಗ್ರೆಸ್ ನಡೆಸಿದ ಸ್ವಾತಂತ್ರ್ಯ ವಿರೋಧಿ ಕೃತ್ಯಗಳಿಗೆ ಉತ್ತರ ಕೊಡುವಿರಾ? ಕಾಂಗ್ರೆಸ್ ಕೋಳಿ ಕೂಗಿದರೆ ಭಾರತದಲ್ಲಿ ಬೆಳಕು ಹರಿಯುತ್ತದೆ ಎನ್ನುವ ಕಾಲ ಹೋಯಿತು.