Breaking News
ಒಂದು ದೇಶ, ಒಂದು ಪಕ್ಷ ಎಂದು ಹೇಳುವ ಬಿಜೆಪಿ ಲಸಿಕೆಗೆ ಒಂದೇ ಬೆಲೆ ಇಟ್ಟಿಲ್ಲ ಯಾಕೆ: ಮಮತಾ ಬ್ಯಾನರ್ಜಿ‘ಇನ್ನೆರಡು ತಾಸುಗಳಷ್ಟೇ..ಆಮೇಲೆ ಆಕ್ಸಿಜನ್​ ಇರೋದಿಲ್ಲ, ರೋಗಿಗಳು ಸಾಯ್ತಾರೆ..’ ಕಣ್ಣೀರಿಟ್ಟ ಆಸ್ಪತ್ರೆ ಸಿಇಒಶಾಸಕ ಜಮೀರ್ ಅಹ್ಮದ್, ಮಧು ಬಂಗಾರಪ್ಪಗೆ ಕೊರೊನಾ ಪಾಸಿಟಿವ್: ನಿನ್ನೆಯಷ್ಟೇ ಸಿದ್ದರಾಮಯ್ಯ ಭೇಟಿಯಾಗಿದ್ದ ಜಮೀರ್ಕೊರೊನಾ ನಿರ್ವಹಣೆ ವಿಚಾರವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ಮೇ 1ರಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಲು ನೋಂದಾವಣೆ ಮಾಡಿಕೊಳ್ಳುವ ವಿಧಾನ ಇಲ್ಲಿದೆರೆಮ್‌ಡಿಸಿವಿರ್‌ ವೈಜ್ಞಾನಿಕವಾಗಿ ಲೈಫ್ ಸೇವಿಂಗ್ ಡ್ರಗ್ ಅಲ್ಲ: ಸಚಿವ ಸುಧಾಕರ್ಭಾರತಕ್ಕೆ ಬಂದಿಳಿದ 5ನೇ ಬ್ಯಾಚ್​​ನ ರಫೇಲ್​​ ಯುದ್ಧ ವಿಮಾನಗಳುಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ಪ್ರಚಾರಗಳನ್ನ ಬಿಟ್ಟು ಜನರ ರಕ್ಷಣೆ ಜತೆಗೆ ಜನರ ವಿಶ್ವಾಸ ಗೆಲ್ಲುವ ಕೆಲಸ ಮಾಡಿ: ಬಿಜೆಪಿಗೆ ಕುಮಾರಸ್ವಾಮಿ ಚಾಟಿನೀವು ಖುಷಿಯಾಗಿ ಸಮಯ ಹಾಳು ಮಾಡಿ, ಜನ ಮಾತ್ರ ಸಾಯ್ತಾ ಇರ್ಲಿ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್​ ತರಾಟೆ

ಪ್ರಮುಖ ಸುದ್ದಿ

ದೆಹಲಿ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಎ.ಕೆ.ವಾಲಿಯಾ ಕೊರೊನಾ ಸೋಂಕಿನಿಂದ ಮೃತ

1993ರಲ್ಲಿ ಮೊದಲ ಬಾರಿಗೆ ಪೂರ್ವ ದೆಹಲಿಯ ಗೀತಾ ಕಾಲನಿಯಿಂದ ಚುನಾವಣೆಗೆ ಸ್ಪರ್ಧಿಸಿದರು. ನಂತರ ದೆಹಲಿ ಮುನ್ಸಿಪಲ್​ ಕಾರ್ಪೋರೇಶನ್​ ಚುನಾವಣೆಯಲ್ಲಿ ಹಣಕೊಟ್ಟವರಿಗೆ ಟಿಕೆಟ್ ಕೊಡಲಾಗಿದೆ ಎಂದು ಆರೋಪಿಸಿ 2017ರಲ್ಲಿ ಒಮ್ಮೆ ಕಾಂಗ್ರೆಸ್​​ನ್ನು ತೊರೆದಿದ್ದರು.

ಐಪಿಎಲ್‌: ಮತ್ತೆ ಮುಗ್ಗರಿಸಿದ ಪಂಜಾಬ್‌: ಗೆಲುವಿನ ಖಾತೆ ತೆರೆದ ಸನ್‌ರೈಸರ್ಸ್‌ ಹೈದ್ರಾಬಾದ್

ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಪಂಜಾಬ್‌, ಬ್ಯಾಟ್ಸಮನ್‌ಗಳ ನೀರಸ ಪ್ರದರ್ಶನದಿಂದ 19.4 ಓವರ್‌ಗಳಲ್ಲಿ 120 ರನ್‌ಗಳಿಸಿ ಆಲೌಟ್‌ ಆಯಿತು. ಈ ಸವಾಲು ಬೆನ್ನತ್ತಿದ ಹೈದ್ರಾಬಾದ್‌, ಆರಂಭಿಕರಾದ ಜಾನಿ ಬೈರ್ಸ್ಟೋವ್‌ 63(56) ಹಾಗೂ 37(37) ಹಾಗೂ ವಿಲಿಯಂಸನ್‌ 16(19) ಅವರುಗಳ ಜವಾಬ್ದಾರಿಯುತ ಬ್ಯಾಟಿಂಗ್‌ನಿಂದ 18.4 ಓವರ್‌ಗಳಲ್ಲಿ 1 ವಿಕೆಟ್‌ ಕಳೆದುಕೊಂಡು 121 ರನ್‌ಗಳಿಸುವ ಮೂಲಕ 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.

ಸರ್ಕಾರ ದೇಶದ ಜನರಿಗೆ ಮಾನಸಿಕವಾಗಿ ಧೈರ್ಯ ತುಂಬಿ, ಆರ್ಥಿಕವಾಗಿ ಶಕ್ತಿ ತುಂಬಬೇಕು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌

ಸರ್ಕಾರ ಈಗ ಮಾರ್ಗಸೂಚಿ ಹೊರಡಿಸಿದ್ದು, ಎಲ್ಲ ವರ್ಗದ ಜನ ಈಗ ಸಹಕಾರ ನೀಡಬೇಕಾದ ಅವಶ್ಯಕತೆ ಇದೆ. ಸರ್ಕಾರದ ವೈಫಲ್ಯದ ಬಗ್ಗೆ ರಾಜ್ಯಪಾಲರ ಸಭೆಯಲ್ಲಿ ಹೇಳಿದ್ದೇವೆ. ವಿವರವಾಗಿ ಹೇಳಲು ಸಾಧ್ಯವಾಗದಿದ್ದರೂ ಕಳೆದ ಒಂದು ವರ್ಷದಿಂದ ಸರ್ಕಾರದ ವೈಫಲ್ಯ ತಿಳಿಸಿದ್ದೇವೆ. ಅವರು ಈ ವಿಚಾರದಲ್ಲಿ ವಿಫಲರಾಗಿದ್ದಾರೆ ಎಂಬುದಕ್ಕೆ ಸೋಂಕಿನ ಸಂಖ್ಯೆಗಳೇ ಸಾಕ್ಷಿಯಾಗಿದೆ.

ಕೋವಿಡ್‌: ಒಂದೇ ಇಂಜೆಕ್ಷನ್‌ಗೆ ಮೂರು ಬೆಲೆ, ಸೀರಂ ಸ್ಪಷ್ಟನೆ

ಕೇಂದ್ರ ಸರ್ಕಾರವು ಪ್ರತಿ ಡೋಸೆಜ್‌ಗೆ 150 ರೂ. ನೀಡುತ್ತಿದ್ದರೆ, ರಾಜ್ಯ ಸರ್ಕಾರಗಳು 400 ರೂ. ನೀಡುತ್ತಿವೆ. ಖಾಸಗಿ ಆಸ್ಪತ್ರೆಗಳು 600 ರೂ. ನೀಡಿ ಖರೀದಿಸುತ್ತಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

೧೫ ದಿನಗಳ ಸಾರಿಗೆ ನೌಕರರ ಮುಷ್ಕರ ಅಂತ್ಯ: ತಾತ್ಕಾಲಿಕ ನಿರ್ಧಾರ ಎಂದ ಕೋಡಿಹಳ್ಳಿ ಚಂದ್ರಶೇಖರ್

ಸಾರಿಗೆ ಸಿಬ್ಬಂದಿ ಮುಷ್ಕರದಲ್ಲಿ ಹೈಕೋರ್ಟ್ ಮಧ್ಯಪ್ರವೇಶಿಸಿದೆ. ನ್ಯಾಯಮೂರ್ತಿಗಳ ಹೇಳಿಕೆಯನ್ನು ನಾವು ಗೌರವಿಸುತ್ತೇವೆ. ಹೀಗಾಗಿ ಹೈಕೋರ್ಟ್ ಆದೇಶದಂತೆ ಕರ್ತವ್ಯಕ್ಕೆ ಹಾಜರಾಗುತ್ತೇವೆ ಎಂದಿದ್ದಾರೆ.

ಮನಕಲಕುವ ಸಂದೇಶ ಪೋಸ್ಟ್​ ಮಾಡಿ, ಕೊನೆಯುಸಿರೆಳೆದ ವೈದ್ಯೆ ಡಾ.ಮನೀಷಾ ಜಾಧವ್

51 ವರ್ಷದ ಮನಿಶಾ ಜಾಧವ್ ಎಂಬ ವೈದ್ಯೆ ಶನಿವಾರ ತನ್ನ ಫೇಸ್​ಬುಕ್​ನಲ್ಲಿ ಸಾವಿನ ಸಾಧ್ಯತೆಯನ್ನು ಸ್ಪಷ್ಟವಾಗಿ ತಿಳಿಸಿ ಪೋಸ್ಟ್ ಹಾಕಿದ್ದರು. ಇದು ನನ್ನ ಕೊನೆಯ ಗುಡ್ ಮಾರ್ನಿಂಗ್ ಆಗಿರಬಹುದು. ಈ ವೇದಿಕೆಯಲ್ಲಿ ಮತ್ತೆ ನಾನು ನಿಮಗೆ ಸಿಗದೇ ಹೋಗಬಹುದು.

ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಗೆ ಕೊರೋನಾ ದೃಢ

ಕೊರೊನಾ ಸೋಂಕಿನ ತೀವ್ರತೆ ಹೆಚ್ಚುತ್ತಿರುವ ಬೆನ್ನಲ್ಲೇ ರಮೇಶ್ ಪೋಖ್ರಿಯಾಲ್ ಅವರು, ವಿವಿಧ ಕಾಲೇಜು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ವಿದ್ಯಾರ್ಥಿಗಳೊಂದಿಗೆ ವರ್ಚ್ಯುವಲ್​ ಸಂವಾದ ನಡೆಸಿದ್ದಾರೆ. ಅಲ್ಲದೆ, ಇತ್ತೀಚೆಗಷ್ಟೇ ಶಿಕ್ಷಣ ಸಚಿವಾಲಯದ ಉನ್ನತ ಅಧಿಕಾರಿಗಳು, ಸಿಬಿಎಸ್​ಇ, ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಸಹ ಉನ್ನತ ಮಟ್ಟದ ಸಭೆ ನಡೆಸಿದ್ದರು.

ಆಕ್ಸಿಜನ್ ಸೋರಿಕೆಯಿಂದ 22 ಮಂದಿ ಸಾವು: ಮಹಾರಾಷ್ಟ್ರದ ನಾಸಿಕ್ ನಲ್ಲಿ ಘಟನೆ

ನಾಸಿಕ್ʼನಲ್ಲಿರುವ ಡಾ. ಜಾಕಿರ್ ಹುಸೇನ್ ಎನ್ ಎಂಸಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆಯಾಗಿದ್ದು, ಈ ಘಟನೆಯಲ್ಲಿ 22 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಆಸ್ಪತ್ರೆಯ ಹೊರಗೆ ಆಮ್ಲಜನಕ ಟ್ಯಾಂಕ್ ಸೋರಿಕೆಯಾದ ಕಾರಣ ಆ ಪ್ರದೇಶದಾದ್ಯಂತ ಅನಿಲ ಸ್ಫೋಟಗೊಂಡಿದೆ.

ಕೊರೊನಾ ಹಿನ್ನೆಲೆ: ಮತ್ತೆ ಕೆ-ಸೆಟ್ ಪರೀಕ್ಷೆ ಮುಂದೂಡಿದ ಮೈಸೂರು ವಿಶ್ವವಿದ್ಯಾನಿಲಯ

ಕೆ-ಸೆಟ್ ಪರೀಕ್ಷೆ ಏಪ್ರಿಲ್ 25 ರಂದು ನಿಗದಿಯಾಗಿತ್ತು. ಆದರೆ, ಕೊರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಹಿಂದೆ ಏ.11 ರಂದು ಪರೀಕ್ಷೆ ನಿಗದಿ ಪಡಿಸಲಾಗಿತ್ತು.

ಜನರಲ್ಲಿ ವಿಶ್ವಾಸ ಮೂಡಿಸದೆ, ಕಠಿಣ ಕ್ರಮಗಳನ್ನು ಕೈಗೊಂಡರೆ ಏನು ಪ್ರಯೋಜನ: ಎಚ್ಡಿಕೆ ಪ್ರಶ್ನೆ

ಜನರಿಗೆ ಕೇವಲ ಮಾರ್ಗಸೂಚಿಗಳನ್ನು ಮಾತ್ರ ಸೂಚಿಸಲಾಯಿತು. ಸೋಂಕಿನಿಂದ ದೂರ ಇರುವ ಸಲಹೆ ನೀಡಲಾಯಿತು. ಆದರೆ, ಈಗಾಗಲೇ ಅಸ್ಪತ್ರೆಗಳಲ್ಲಿರುವವರ ರಕ್ಷಣೆಗಾಗಿ ಏನು ಮಾಡಲಾಗಿದೆ, ಏನೇನು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಸಭೆಯ ನಂತರ ಸರ್ಕಾರ ಹೇಳಿಲ್ಲ ಏಕೆ? ಸೋಂಕಿತರ ಪರಿಸ್ಥಿತಿಯನ್ನು ಸರ್ಕಾರ ಅರಿತಿಲ್ಲ ಏಕೆ?

Submit Your Article