Breaking News
ಬಂದೂಕು ಹಿಡಿದು ಸೆಲ್ಫಿಗೆ ಪೋಸ್: ಆಕಸ್ಮಿಕವಾಗಿ ಗುಂಡು ಹಾರಿ ನವವಿವಾಹಿತೆ ಸಾವುಎದೆಹಾಲು ನೀಡುವ ತಾಯಂದಿರು ಈ ಆಹಾರಗಳಿಂದ ದೂರವಿರಿಜುಲೈ 27ರಿಂದ ಭಾರತ ಪ್ರವಾಸ ಆರಂಭಿಸಲಿರುವ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್ಎಲ್‌ಪಿಜಿ ಸಿಲಿಂಡರ್‌ ಸ್ಪೋಟ; ಏಳು ಮಂದಿ ಸಾವುಅಂಬೇಡ್ಕರ್ ಅಂತ್ಯಸಂಸ್ಕಾರ ಮಾಡಲು ಕಾಂಗ್ರೆಸ್ ಜಾಗ ಕೊಡಲಿಲ್ಲ: ನಳಿನ್ ಕುಮಾರ್‌ ಕಟೀಲ್ ಟೀಕೆಮಳೆಗಾಲದಲ್ಲಿ ಹೆಚ್ಚಾಗಿ ಕಾಡುವ ಹೊಟ್ಟೆಯ ನೋವು ತಡೆಯುವುದು ಹೇಗೆ?ನುಗ್ಗೆ ಸೊಪ್ಪಿನಲ್ಲಿದೆ ಕೂದಲಿನ ಸಮಸ್ಯೆ ನಿವಾರಿಸುವ ಶಕ್ತಿವಿಯೆಟ್ನಾಂ: ಹನೊಯಿನಲ್ಲಿ 15 ದಿನಗಳ ಲಾಕ್‌ಡೌನ್‌ಕಳೆದ ೨೪ಗಂಟೆಯಲ್ಲಿ 39,097 ಹೊಸ ಕೊರೊನಾ ಪ್ರಕರಣಗಳು, 546 ಸಾವುಜು.25ರಿಂದ ರಾಜ್ಯಾದ್ಯಂತ ದೇವಾಲಯಗಳಲ್ಲಿ ಪೂಜಾದಿ ಸೇವೆ & ಪ್ರಸಾದಿ ವಿತರಣೆಗೆ ಅವಕಾಶ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ದೇಶ-ವಿದೇಶ

ಜುಲೈ 27ರಿಂದ ಭಾರತ ಪ್ರವಾಸ ಆರಂಭಿಸಲಿರುವ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್

ಭಾರತಕ್ಕೆ ಇದು ಬ್ಲಿಂಕೆನ್‌ ಅವರ ಮೊದಲ ಭೇಟಿಯಾಗಿದೆ. ಈ ಪ್ರವಾಸದ ಸಮಯದಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಡೋಭಾಲ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಎಲ್‌ಪಿಜಿ ಸಿಲಿಂಡರ್‌ ಸ್ಪೋಟ; ಏಳು ಮಂದಿ ಸಾವು

ಕಾರ್ಖಾನೆಯೊಂದರ ಕೆಲವು ಕಾರ್ಮಿಕರು ಮತ್ತು ಅವರ ಕುಟುಂಬದವರು ಸಣ್ಣ ಕೊಠಡಿಯೊಂದರಲ್ಲಿ ಮಲಗಿದ್ದರು. ಈ ವೇಳೆ ಎಲ್‌ಪಿಜಿ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿದೆ. ಈ ಬಗ್ಗೆ ಎಚ್ಚರಿಕೆ ನೀಡಲು ನೆರೆ ಮನೆಯವರು ಬಾಗಿಲು ತಟ್ಟಿದ್ಧಾರೆ.

ವಿಯೆಟ್ನಾಂ: ಹನೊಯಿನಲ್ಲಿ 15 ದಿನಗಳ ಲಾಕ್‌ಡೌನ್‌

ಈ ವಾರದ ಆರಂಭದಲ್ಲಿ ಎಲ್ಲಾ ಹೊರಾಂಗಣ ಚಟುವಟಿಕೆಗಳು ಮತ್ತು ಅಗತ್ಯವಲ್ಲದ ಸೇವೆಗಳ ಸ್ಥಗಿತಕ್ಕೆ ಸೂಚಿಸಲಾಗಿತ್ತು. ಶುಕ್ರವಾರ ಹನೊಯಿಯಲ್ಲಿ ಕೋವಿಡ್‌ನ 70 ಹೊಸ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ವಿಯೆಟ್ನಾಂನಲ್ಲಿ ಕಳೆದ 24 ಗಂಟೆಗಳಲ್ಲಿ 7,295 ಹೊಸ ಪ್ರಕರಣಗಳು ಪತ್ತೆಯಾದಂತಾಗಿದೆ.

ಕಳೆದ ೨೪ಗಂಟೆಯಲ್ಲಿ 39,097 ಹೊಸ ಕೊರೊನಾ ಪ್ರಕರಣಗಳು, 546 ಸಾವು

ಕೋವಿಡ್‌ ಪ್ರಕರಣಗಳ ಸಂಖ್ಯೆ 3,13,32,159ಕ್ಕೆ ಏರಿಕೆಯಾಗಿದ್ದು, ಈ ಪೈಕಿ 3,05,03,166 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ ಚೇತರಿಕೆ ಪ್ರಮಾಣ ಶೇ.97.35 ಮತ್ತು ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.1.31ರಷ್ಟಿದೆ. ಸತತ 33 ದಿನಗಳಿಂದ ಕೋವಿಡ್‌ ದೃಢ ಪ್ರಮಾಣವು ಶೇ.3ಕ್ಕಿಂತ ಕಡಿಮೆ ದಾಖಲಾಗಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದು ಬಂದಿದೆ.

ತಮಿಳುನಾಡಿನ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಲಸಿಕೆ; ಸಿಎಸ್ಆರ್ ನಿಧಿ ಬಳಕೆಗೆ ಅವಕಾಶ

ಖಾಸಗಿ ಆಸ್ಪತ್ರೆಗಳ ಕೋಟಾದಡಿ ಹಂಚಿಕೆಯಾಗಿರುವ ಲಸಿಕೆಗಳನ್ನು ಕಾರ್ಪೋರೇಟ್‌ ಮತ್ತು ಖಾಸಗಿ ಸಂಸ್ಥೆಗಳು ತಮ್ಮ ಸಾಮಾಜಿಕ ಜವಾಬ್ದಾರಿ ನಿಧಿಯಡಿ (ಸಿಎಸ್‌ಆರ್‌) ಖರೀದಿಸಿ, ಅವುಗಳನ್ನು ಜನರಿಗೆ ಉಚಿತವಾಗಿ ವಿತರಿಸುವಂತೆ ತಮಿಳುನಾಡು ಸರ್ಕಾರ ಕೋರಿದೆ.

ಕೇರಳ: ‘ವರದಕ್ಷಿಣೆ ಪಡೆದುಕೊಂಡಿಲ್ಲ’ ಎಂಬ ಪ್ರಮಾಣಪತ್ರ ಸಲ್ಲಿಸಲು ಸರ್ಕಾರಿ ನೌಕರರಿಗೆ ಸೂಚನೆ

ಕೇರಳದಲ್ಲಿ ಇತ್ತೀಚೆಗೆ ವರದಕ್ಷಿಣೆ ಸಾವು ಮತ್ತು ಕಿರುಕುಳಗಳು ನಡೆದಿದ್ದು, ಇದರಲ್ಲಿ ಸರ್ಕಾರಿ ನೌಕರರು ಸಹ ಆರೋಪಿಯಾಗಿದ್ದಾರೆ. ಹಾಗಾಗಿ, ಅಲ್ಲಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಈ ಬಗ್ಗೆ ಸುತ್ತೋಲೆ ಹೊರಡಿಸಿದೆ.

ಸೋಮವಾರದಿಂದ 9-11 ವರೆಗಿನ ತರಗತಿಗಳನ್ನು ಶೇಕಡಾ 50 ಸಾಮರ್ಥ್ಯದೊಂದಿಗೆ ಪುನರಾರಂಭಿಸಲು ಅನುಮತಿ

ಭೌತಿಕವಾಗಿ ತರಗತಿಗಳಿಗೆ ಹಾಜರಾಗಲು ಇಚ್ಚಿಸುವ ವಿದ್ಯಾರ್ಥಿಗಳು ತಮ್ಮ ಪೋಷಕರಿಂದ ಅನುಮತಿ ಪತ್ರ ತರಬೇಕೆಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ. ರಾಜ್ಯದಲ್ಲಿ ಕೋವಿಡ್​ ಸೋಂಕಿತರ ಪ್ರಮಾಣ ಗಣನೀಯವಾಗಿ ಇಳಿಮುಖಗೊಂಡಿರುವ ಹಿನ್ನೆಲೆಯಲ್ಲಿ ಗುಜರಾತ್ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಎಎನ್​ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಕೊರೊನಾ ಕಾರಣ ಸಿಡ್ನಿಯಲ್ಲಿ ತುರ್ತುಪರಿಸ್ಥಿತಿ ಘೋಷಣೆ

ಕಳೆದ 24 ಗಂಟೆಗಳ ಅವಧಿಯಲ್ಲಿ ನಗರದಲ್ಲಿ ಕೋವಿಡ್‌–19ನ 136 ಹೊಸ ಪ್ರಕರಣಗಳು ವರದಿಯಾಗಿದ್ದು, ಒಬ್ಬ ವ್ಯಕ್ತಿ ಮೃತ್ತಪಟ್ಟಿದ್ದಾರೆ. ಕಳೆದ ಜೂನ್‌ ಮಧ್ಯಭಾಗದಲ್ಲಿ ಇಲ್ಲಿ ಕೊರೊನಾ ಸೋಂಕು ಪ್ರಸರಣ ಹೆಚ್ಚಿದ ನಂತರ ಒಂದೇ ದಿನದಲ್ಲಿ ವರದಿಯಾಗಿರುವ ಗರಿಷ್ಠ ಪ್ರಕಣಗಳು ಇವಾಗಿವೆ. ಈ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿಲಾಗಿದೆ ಎಂದು ಮೂಲಗಳು ಹೇಳಿವೆ.

ಮಹಾರಾಷ್ಟ್ರ ಮಳೆ: ಮೃತರ ಸಂಖ್ಯೆ 60ಕ್ಕೆ ಏರಿಕೆ

ರಾಯಗಢ ಜಿಲ್ಲೆಯೊಂದರಲ್ಲೇ ಭೂಕುಸಿತ ಮತ್ತು ಪ್ರವಾಹಕ್ಕೆ ಕನಿಷ್ಠ 36 ಮಂದಿ ಮೃತರಾಗಿದ್ದಾರೆ. ಪಶ್ಚಿಮ ಮಹಾರಾಷ್ಟ್ರದ ಕೊಂಕಣ ಬೆಲ್ಟ್‌ನಲ್ಲಿ ಸಂಭವಿಸಿದ ಸರಣಿ ಭೂಕುಸಿತ ಅವಘಡಗಳಲ್ಲಿ 12ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರ: ಸ್ಪೋಟಕ ಹೊತ್ತೊಯ್ಯುತ್ತಿದ್ದ ಡ್ರೋನ್ ಹೊಡೆದುರುಳಿಸಿದ ಪೊಲೀಸರು

ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಭಾಗದ ಕಂಚಕ್‌ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆಯ ಕ್ಷಿಪ್ರ ಕಾರ್ಯ ಪಡೆ (ಕ್ಯುಆರ್‌ಟಿ)ಯವರು, ಸ್ಪೋಟಕ ಸಾಗಿಸುತ್ತಿದ್ದ ಡ್ರೋನ್‌ ಹೊಡೆದುಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Submit Your Article