Breaking News
‘ಇನ್ನೆರಡು ತಾಸುಗಳಷ್ಟೇ..ಆಮೇಲೆ ಆಕ್ಸಿಜನ್​ ಇರೋದಿಲ್ಲ, ರೋಗಿಗಳು ಸಾಯ್ತಾರೆ..’ ಕಣ್ಣೀರಿಟ್ಟ ಆಸ್ಪತ್ರೆ ಸಿಇಒಶಾಸಕ ಜಮೀರ್ ಅಹ್ಮದ್, ಮಧು ಬಂಗಾರಪ್ಪಗೆ ಕೊರೊನಾ ಪಾಸಿಟಿವ್: ನಿನ್ನೆಯಷ್ಟೇ ಸಿದ್ದರಾಮಯ್ಯ ಭೇಟಿಯಾಗಿದ್ದ ಜಮೀರ್ಕೊರೊನಾ ನಿರ್ವಹಣೆ ವಿಚಾರವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ಮೇ 1ರಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಲು ನೋಂದಾವಣೆ ಮಾಡಿಕೊಳ್ಳುವ ವಿಧಾನ ಇಲ್ಲಿದೆರೆಮ್‌ಡಿಸಿವಿರ್‌ ವೈಜ್ಞಾನಿಕವಾಗಿ ಲೈಫ್ ಸೇವಿಂಗ್ ಡ್ರಗ್ ಅಲ್ಲ: ಸಚಿವ ಸುಧಾಕರ್ಭಾರತಕ್ಕೆ ಬಂದಿಳಿದ 5ನೇ ಬ್ಯಾಚ್​​ನ ರಫೇಲ್​​ ಯುದ್ಧ ವಿಮಾನಗಳುಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ಪ್ರಚಾರಗಳನ್ನ ಬಿಟ್ಟು ಜನರ ರಕ್ಷಣೆ ಜತೆಗೆ ಜನರ ವಿಶ್ವಾಸ ಗೆಲ್ಲುವ ಕೆಲಸ ಮಾಡಿ: ಬಿಜೆಪಿಗೆ ಕುಮಾರಸ್ವಾಮಿ ಚಾಟಿನೀವು ಖುಷಿಯಾಗಿ ಸಮಯ ಹಾಳು ಮಾಡಿ, ಜನ ಮಾತ್ರ ಸಾಯ್ತಾ ಇರ್ಲಿ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್​ ತರಾಟೆದೆಹಲಿ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಎ.ಕೆ.ವಾಲಿಯಾ ಕೊರೊನಾ ಸೋಂಕಿನಿಂದ ಮೃತ

ರಾಜಕೀಯ

ಪ್ರತಿಷ್ಠೆ ಬದಿಗಿಟ್ಟು ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಿ: ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಕೆಎಸ್‌ಆರ್‌ಟಿಸಿ ನೌಕರರ ಬೇಡಿಕೆಗಳನ್ನು ಈಡೇರಿಸಲಾಗದಿರುವುದಕ್ಕೆ ರಾಜ್ಯ ಬಿಜೆಪಿ ಸರ್ಕಾರ ನೀಡುತ್ತಿರುವ ಆರ್ಥಿಕ ಸಂಕಷ್ಟ ಸ್ವಯಂಕೃತ ಅಪರಾಧ. ತನ್ನ ದುರಾಡಳಿತ ಮತ್ತು ಕೇಂದ್ರದ ಗುಲಾಮಗಿರಿಯಿಂದಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಕಿಡಿಕಾರಿದ್ದಾರೆ.

ಕರ್ತವ್ಯಕ್ಕೆ ಹಾಜರಾಗದಿದ್ದರೆ ಕಠಿಣ ಕ್ರಮ: ಸಾರಿಗೆ ನೌಕರರಿಗೆ ಸಿಎಂ ಯಡಿಯೂರಪ್ಪ ಖಡಕ್ ವಾರ್ನಿಂಗ್

ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಸರ್ಕಾರ ಈಡೇರಿಸಿದೆ. ಹೀಗಿರುವಾಗ ನಮ್ಮ ಮನವಿಗೆ ಸ್ಪಂದಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ. ಇವತ್ತು ಬೆಂಗಳೂರಿಗೆ ಹೋಗುತ್ತಿದ್ದೇನೆ. ಅಲ್ಲಿ ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತೀರ್ಮಾನ ಕೈಗೊಂಡು ಮುಂದೆ ತೆಗೆದುಕೊಳ್ಳಬೇಕಾದ ಕಠಿಣ ಕ್ರಮದ ಬಗ್ಗೆ ಪರಾಮರ್ಶೆ ನಡೆಸುತ್ತೇನೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಅಸಮರ್ಥ: ಸಿದ್ದರಾಮಯ್ಯ ಟೀಕೆ

ಸಚಿವ ಕೆ.ಎಸ್. ಈಶ್ವರಪ್ಪ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ತಮ್ಮದೇ ಪಕ್ಷದ ‌ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ದ ದಿನನಿತ್ಯ ಹೇಳಿಕೆ ನೀಡುವ ಮೂಲಕ ಬಹಿರಂಗ ಸಮರ ಸಾರಿದ್ದಾರೆ. ಆದರೂ ಈ ಇಬ್ಬರ ವಿರುದ್ದ ಕ್ರಮಕೈಗೊಳ್ಳಲಾಗದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಒಬ್ಬ ಅಸಮರ್ಥ ನಾಯಕ.

ಮತಗಟ್ಟೆ ಹತ್ತಿರದಲ್ಲೇ ಇದ್ದುದರಿಂದ ವಿಜಯ್ ಸೈಕಲ್ ನಲ್ಲಿ ಬಂದಿದ್ದು, ಬೇರೆ ಅರ್ಥ ಕಲ್ಪಿಸಬೇಡಿ

ಸೈಕಲ್ ತುಳಿದು ವಿಜಯ್ ಮತಗಟ್ಟೆಗೆ ಬಂದಿರುವುದು ಸುದ್ದಿಯಾಗುತ್ತಿದ್ದಂತೆ, ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸಿ ವಿಜಯ್ ಸೈಕಲ್ ನಲ್ಲಿ ಬಂದಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿತ್ತು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಿಜಯ್ ಮೌನವಾಗಿ ಪ್ರತಿಭಟನೆ ತೋರಿದ್ದಾರೆ ಎಂಬ ಪೋಸ್ಟ್ ಗಳು ಫೇಸ್​ಬುಕ್, ಟ್ವಿಟರ್​ನಲ್ಲಿ ಹರಿದಾಡಿತ್ತು.

ನಾವು ಸಂಬಳ ಹೆಚ್ಚು ಮಾಡಲಿಕ್ಕೆ ಸಿದ್ದರಿದ್ದೇವೆ, ನೀವು ಕೆಲಸಕ್ಕೆ ಹಾಜರಾಗಿ: ಲಕ್ಷ್ಮಣ ಸವದಿ

ಕೇಂದ್ರ ಚುನಾವಣಾ ಆಯೋಗದಿಂದ ಒಪ್ಪಿಗೆ ಆದೇಶ ಬಂದ ತಕ್ಷಣ ನಾವು ಸಂಬಳ ಜಾಸ್ತಿ ಮಾಡುತ್ತೇವೆ ಎಂದು ಹೇಳಿದ ಮೇಲೂ ಅವರು ಮುಷ್ಕರ ಮಾಡುತ್ತಿದ್ದಾರೆ. ಕೆಲವರು ಮುಷ್ಕರ ಮಾಡಿಸಲೇ ಬೇಕು ಎಂದು ಮಾಡಿಸುತ್ತಿದ್ದಾರೆ. ಅವರು ಯಾರು ಅಂತ ನಿಮಗೆ ಗೊತ್ತಾಗಲಿದೆ ಎಂದರು.

ತಮಿಳುನಾಡಿನಲ್ಲಿ ಚುನಾವಣೆ ಮುನ್ನ ಹಣ ಹಂಚಲಾಗಿದೆ: ಕಮಲ್ ಹಾಸನ್ ಆರೋಪ

ನಾವು ಕೆಲವರನ್ನು ಹಿಡಿದಿದ್ದೇವೆ, ಸಾಕ್ಷ್ಯಗಳು ಇವೆ. ಚುನಾವಣಾ ಆಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಎನ್ಡಿ​ಟಿವಿ ಜತೆ ಮಾತನಾಡಿದ ಕಮಲ್ ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ: ಟ್ರಯಲ್ ಪ್ರಕ್ರಿಯೆ ಮುಗಿಸದ ವ್ಯಾಕ್ಸಿನ್‌ ಬಳಕೆಯೇ ಕಾರಣ ಎಂದ ಕಾಂಗ್ರೆಸ್‌

ಕೋವಿಡ್‌ ಟೆಸ್ಟ್‌ಗಳನ್ನು ಕಡಿಮೆ ಮಾಡಿ ತಮ್ಮ ಬೆನ್ನನ್ನು ತಾವೇ ತಟ್ಟಿಕೊಂಡು ಕುಳಿತಿದ್ದರ ಪರಿಣಾಮವಿದು. ಸಂಪೂರ್ಣ ಟ್ರಯಲ್ ಪ್ರಕ್ರಿಯೆ ಮುಗಿಸದ ವ್ಯಾಕ್ಸಿನ್‌ ಗಳ ಮಾರ್ಕೆಟಿಂಗ್ ಮಾಡುವುದರಲ್ಲಿ ಮುಳುಗಿದ್ದರ ಪರಿಣಾಮವಿದು. ‘ಸೋಂಕಿತ ಸರ್ಕಾರ’ ಕೊರೊನಾ ಹೆಸರಲ್ಲಿ ಭ್ರಷ್ಟಾಚಾರ ನಡೆಸಿದ್ದರ ಪರಿಣಾಮ ಇದು.

ಪಂಚರಾಜ್ಯಗಳ ಚುನಾವಣೆಗೆ ಇಂದು ಮತದಾನ: ಕೇರಳ, ತಮಿಳುನಾಡು, ಪುದುಚೇರಿ ಒಂದೇ ಹಂತದಲ್ಲಿ ಪೂರ್ಣ

ಕೇರಳದಲ್ಲಿ 140, ತಮಿಳನಾಡು 234, ಪುದುಚೇರಿಯ 30 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಅಸ್ಸಾಂನಲ್ಲಿ ಕೊನೆಯ ಹಂತದಲ್ಲಿ 40 ಕ್ಷೇತ್ರಗಳಲ್ಲಿ ಹಾಗೂ ಪಶ್ಚಿಮ ಬಂಗಾಳದಲ್ಲಿ ಮೂರನೆ ಹಂತದಲ್ಲಿ 31 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಉಸಿರಾಟದ ಸಮಸ್ಯೆ ಹಿನ್ನೆಲೆ: ರಮೇಶ್ ಜಾರಕಿಹೊಳಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ; ಸುಳ್ಳು ನೆಪ ಎಂದ ಸಂತ್ರಸ್ತೆ ಪರ ವಕೀಲ

ಸಣ್ಣ ಪ್ರಮಾಣದ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಮಾ.31ರಂದು ಆಸ್ಪತ್ರೆಗೆ ಆಗಮಿಸಿದ ಸಂದರ್ಭ ಅವರಿಗೆ ಆ್ಯಂಟಿಜನ್ ಪರೀಕ್ಷೆ ನಡೆಸಿದಾಗ ಸೋಂಕು ಇರುವುದು ದೃಢಪಟ್ಟಿತು. ಚಿಕಿತ್ಸೆ ನೀಡಿ ಅವರನ್ನು ಹೋಮ್ ಕ್ವಾರಂಟೈನಲ್ಲಿರಲು ಕಳುಹಿಸಲಾಗಿತ್ತು. ಆದರೆ, ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯ್ಲಲಿ ಭಾನುವಾರ ರಾತ್ರಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ. ರವೀಂದ್ರ ಆಂಟಿನ್ ತಿಳಿಸಿದ್ದಾರೆ.

ಕೊರೊನಾ ಗೆದ್ದ ಎಚ್.ಡಿ. ದೇವೇಗೌಡ ದಂಪತಿ: ಆಸ್ಪತ್ರೆಯಿಂದ ಮಾಜಿ ಪ್ರಧಾನಿ ಡಿಸ್ಚಾರ್ಜ್

ಕಳೆದ 2 ದಿನಗಳ ಹಿಂದೆ ಹೆಚ್.ಡಿ.ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮಗೂ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಹೀಗಾಗಿ, ನಗರ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಗೆ ದಾಖಲಾದ ನಂತರ ಕೊರನಾ ಪರೀಕ್ಷೆಗೆ ಒಳಪಡಿಸಿದಾಗ ದೇವೇಗೌಡರಿಗೆ ಕೊರೋನಾ ನೆಗೆಟಿವ್ ಎಂಬುದಾಗಿ ದೃಢಪಟ್ಟರೇ, ಚೆನ್ನಮ್ಮ ಅವರಿಗೆ ಪಾಸಿಟಿವ್ ಎಂಬುದಾಗಿ ತಿಳಿದು ಬಂದಿತ್ತು.

Submit Your Article