Visit Channel

ಕುರ್ಚಿ ರಕ್ಷಣೆ ಕಸರತ್ತು ಮುಗಿದಿದ್ದರೆ ಕೊರೊನಾ ಲಸಿಕೆ ಪೂರೈಕೆಯತ್ತ ಗಮನವಹಿಸಿ: ಸಿಎಮ್ ಸಿದ್ದರಾಮಯ್ಯ ಆಗ್ರಹ

siddaramaiah-dh-file-992572-1622560642

ಬೆಂಗಳೂರು,ಜೂ.26: ಲಸಿಕೋತ್ಸವ ಮುಗಿದ ಕೂಡಲೇ ಗ್ರಾಮೀಣ ಪ್ರದೇಶಗಳಲ್ಲಿ ಲಸಿಕೆ ಇಲ್ಲದೆ ಹಾಹಾಕಾರ ಎದುರಾಗಿದ್ದು, ಮುಖ್ಯಮಂತ್ರಿಗಳೇ ನಿಮ್ಮ ಕುರ್ಚಿ ರಕ್ಷಣೆಯ ಕಸರತ್ತು ಮುಗಿದಿದ್ದರೆ ಸ್ವಲ್ಪ ಈ ಕಡೆ ಗಮನವಹಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಕೇಂದ್ರ ಸರ್ಕಾರದ ಲಸಿಕೋತ್ಸವ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಪ್ರಚಾರ ವೈಭವದ ಲಸಿಕೋತ್ಸವ ಮುಗಿದ ನಂತರದ ದಿನಗಳಲ್ಲಿ ಲಸಿಕೆ ಪಡೆದವರ ಸಂಖ್ಯೆ ಕುಸಿಯುತ್ತಾ ಈಗ ಅರ್ಧಕ್ಕಿಳಿದಿದೆ. ಹಲವು ಜಿಲ್ಲೆಗಳ ಗ್ರಾಮೀಣ ಪ್ರದೇಶಗಳಲ್ಲಿ ಲಸಿಕೆ ಪೂರೈಕೆ ಇಲ್ಲದೆ ಹಾಹಾಕಾರ ಎದ್ದಿದೆ.

ಮುಖ್ಯಮಂತ್ರಿಗಳೇ ನಿಮ್ಮ ಕುರ್ಚಿ ರಕ್ಷಣೆಯ ಕಸರತ್ತು ಮುಗಿದಿದ್ದರೆ ಸ್ವಲ್ಪ ಈ ಕಡೆ ಗಮನಹರಿಸಿ ಎಂದು ಆಗ್ರಹಿಸಿದ್ದಾರೆ.

ಜೂನ್ 21ರಂದು ರಾಜ್ಯದಲ್ಲಿ ನೀಡಿರುವ ಕೊರೊನಾ ಲಸಿಕೆ ಸಂಖ್ಯೆ 5,78,841 ಈ ಸಂಖ್ಯೆ ಕಡಿಮೆಯಾಗುತ್ತಾ ಬಂದು ಜೂನ್ 24ರಂದು 2,89,581ಕ್ಕೆ ಇಳಿದಿದೆ. ಜಿಲ್ಲೆಗಳಿಂದ ಲಭ್ಯವಾಗುತ್ತಿರುವ ಮಾಹಿತಿ ಪ್ರಕಾರ ಕೆಲವು ತಾಲೂಕು ಮತ್ತು ಹೋಬಳಿ ಕೇಂದ್ರಗಳಿಗೆ ಕಳೆದೆರಡು ದಿನಗಳಿಂದ ಲಸಿಕೆ ಪೂರೈಕೆಯಾಗಿಲ್ಲ.

ಸದ್ಯ ಕೊರೊನಾಗೆ ಲಸಿಕೆಯೇ ಸಂಜೀವಿನಿ. ಲಸಿಕೆ ನೀಡುವ ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರವೇ ಜವಾಬ್ದಾರಿ ವಹಿಸಿಕೊಂಡು, ಈಗ ಅದು ಕೂಡ ವಿಫಲವಾಗಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರ ಲಸಿಕೋತ್ಸವದ ಪ್ರಚಾರ ವೈಭವ ಮಾತ್ರ ನಿಂತಿಲ್ಲ. ಅವರನ್ನು ಪ್ರಶ್ನಿಸುವ ಧೈರ್ಯ ರಾಜ್ಯದ ಬಿಜೆಪಿ ಸರ್ಕಾರಕ್ಕೂ ಇಲ್ಲ ಎಂದು ಲೇವಡಿ ಮಾಡಿದ್ದಾರೆ.

ಕಾರ್ಯಕ್ರಮಗಳ ಘೋಷಣೆ, ಜನತೆಗೆ ಬೋದನೆಗಾಗಿ ಮಾತ್ರ ಟಿವಿ ಪರದೆ ಮೇಲೆ ಕಾಣಿಸಿಕೊಳ್ಳುವ ಪ್ರಧಾನಿ ಮೋದಿ ಅವರು ತಕ್ಷಣ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿ, ಲಸಿಕೆ ನೀಡಿಕೆಯ ಕಾರ್ಯಕ್ರಮದ ಪರಿಶೀಲನೆ ನಡೆಸಬೇಕು ಎಂದು ಆಗ್ರಹಿಸಿರುವ ಅವರು, ಮುಖ್ಯಮಂತ್ರಿಗಳು ತಕ್ಷಣ ಜಿಲ್ಲಾಧಿಕಾರಿಗಳ ಸಭೆ ಕರೆದು ಲಸಿಕೆ ನೀಡಿಕೆಯಲ್ಲಿನ ಸಮಸ್ಯೆ ಬಗ್ಗೆ ಚರ್ಚಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರನ್ನು ಜಿಲ್ಲೆಗಳಿಗೆ ಕಳಿಸಿ ಅಲ್ಲಿಂದ ಮಾಹಿತಿ ಪಡೆದುಕೊಳ್ಳಬೇಕು. ಲಸಿಕೆ ಕೊರತೆಗೆ ಕಾರಣ ಪೂರೈಕೆಯಲ್ಲಿನ ಸಮಸ್ಯೆಯೇ ಇಲ್ಲವೇ ವಿತರಣೆಯಲ್ಲಿನ ಅವ್ಯವಸ್ಥೆಯೇ ಎನ್ನುವುದನ್ನು ಪರಿಶೀಲಿಸಬೇಕು ಎಂದು ಆಗ್ರಹಿಸಿದ್ದಾರೆ.

Latest News

Russia
ದೇಶ-ವಿದೇಶ

ಜನಸಂಖ್ಯೆ ಹೆಚ್ಚಳಕ್ಕೆ 10 ಮಕ್ಕಳಿಗೆ ಜನ್ಮ ನೀಡಿದ್ರೆ 13 ಲಕ್ಷ ಬಹುಮಾನ : ರಷ್ಯಾ ಅಧ್ಯಕ್ಷ ಪುಟಿನ್‌ ಘೋಷಣೆ

ರಷ್ಯಾದ ರಾಜಕೀಯ(Russia Politics) ಮತ್ತು ಭದ್ರತಾ ತಜ್ಞ ಡಾ ಜೆನ್ನಿ ಮ್ಯಾಥರ್ಸ್, ಟೈಮ್ಸ್ ರೇಡಿಯೊದಲ್ಲಿ ಈ ಕುರಿತು ಮಾತನಾಡಿ, “ಮದರ್ ಹೀರೋಯಿನ್” ಎಂದು ಕರೆಯಲ್ಪಡುವ ಬಹುಮಾನ ಯೋಜನೆ

Dakshina Kannada
ರಾಜ್ಯ

ವಿಜಯಟೈಮ್ಸ್ ಇಂಪ್ಯಾಕ್ಟ್ ; ಬಂಟ್ವಾಳ ಸೇತುವೆಯ ದುಸ್ಥಿತಿ ನೋಡಲು ದಿಢೀರನೇ ಬಂದ ಅಧಿಕಾರಿಗಳು!

ಕಳಪೆ ಕಾಮಗಾರಿ ದುರಂತದ ಬಗ್ಗೆ ವಿಜಯಟೈಮ್ಸ್ ತಂಡ ಮಾಡಿದ್ದ ವರದಿಗೆ ಅಧಿಕಾರಿಗಳು ಈಗ ದಿಢೀರ್ ಎಚ್ಚೆತ್ತುಕೊಂಡಿದ್ದಾರೆ.

IT Minister
ದೇಶ-ವಿದೇಶ

5G ಬಿಡುಗಡೆಗೆ ತಯಾರಿ ಮಾಡಿಕೊಳ್ಳಿ : ಟೆಲಿಕಾಂ ಕಂಪನಿಗಳಿಗೆ ಐಟಿ ಸಚಿವ ಅಶ್ವಿನಿ ವೈಷ್ಣವ್ ಸೂಚನೆ

ಇನ್ನು ಏರ್ಟೆಲ್(Airtel) ಮತ್ತು ಜಿಯೋ(Jio) ಈ ತಿಂಗಳ ಕೊನೆಯಲ್ಲಿ ತಮ್ಮ 5G ಸೇವೆಗಳ ಮೊದಲ ಹಂತವನ್ನು ಬಿಡುಗಡೆಗೊಳಿಸುವ ನಿರೀಕ್ಷೆಯಿದೆ.