Visit Channel

ಜಲಶಕ್ತಿ ಅಭಿಯಾನ್: ಕ್ಯಾಚ್ ದಿ ರೈನ್ ಅಭಿಯಾನ: ಪ್ರಧಾನಿ ಚಾಲನೆ

narendra-modi16-1200

ನವದೆಹಲಿ, ಮಾ. 22: ವರ್ಷದಿಂದ ವರ್ಷಕ್ಕೆ ಕಡಿಮೆ ಆಗುತ್ತಿರುವ ಮಳೆ ಮತ್ತು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನೀರಿನ ಬಳಕೆಯನ್ನು ಮನಗೊಂಡು ಕೇಂದ್ರ ಸರ್ಕಾರ ವಿಶ್ವ ಜಲ ದಿನವಾದ ಇಂದು ‘ಜಲಶಕ್ತಿ ಅಭಿಯಾನ್: ಕ್ಯಾಚ್ ದಿ ರೈನ್’ ಅಭಿಯಾನ ಆರಂಭಿಸಿದೆ. ಈ ಅಭಿಯಾನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಇದೇ ವೇಳೆ ಪ್ರಧಾನ ಮಂತ್ರಿಗಳ ಸಮಕ್ಷಮದಲ್ಲಿ ಅಂತರ್ ನದಿ ಜೋಡಣೆಯ ರಾಷ್ಟ್ರೀಯ ಸಂಭಾವ್ಯ ಮಹಾಯೋಜನೆಯ ಮೊದಲ ಯೋಜನೆಯಾದ ಕೆನ್ ಬೆಟ್ವಾ ನದಿ ಜೋಡಣಾ ಯೋಜನೆಯ ಅನುಷ್ಠಾನದ ಐತಿಹಾಸಿಕ ಒಪ್ಪಂದಕ್ಕೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಹಾಗೂ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸಹಿ ಹಾಕಿದರು.

ಜಲಶಕ್ತಿ ಅಭಿಯಾನ್: ಕ್ಯಾಚ್ ದಿ ರೈನ್ ಎಂದರೇನು?
“ಮಳೆ ನೀರನ್ನು ಸಂಗ್ರಹಿಸಿ, ಅದು ಯಾವಾಗ? ಎಲ್ಲಿ ಬೀಳುತ್ತದೋ, ಅಲ್ಲೇ, ಅವಾಗಲೇ ಸಂಗ್ರಹಿಸಿ” (catch the rain, where it falls, when it falls) ಎಂಬ ಘೋಷ ವಾಕ್ಯದೊಂದಿಗೆ ದೇಶಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳೆರಡೂ ಕಡೆ ಅಭಿಯಾನ ನಡೆಸಲಾಗುವುದು. ಮುಂಗಾರು ಪೂರ್ವ ಅವಧಿ ಮತ್ತು ಮುಂಗಾರು ಮಳೆ ಅವಧಿ ಸೇರಿ 2021ರ ಮಾರ್ಚ್ 22ರಿಂದ 2021ರ ನವೆಂಬರ್ 30ರವರೆಗೆ ಈ ಅಭಿಯಾನ ನಡೆಯಲಿದೆ. ಈ ಅಭಿಯಾನದಲ್ಲಿ ಸೂಕ್ತ ರೀತಿಯಲ್ಲಿ ಮಳೆ ನೀರು ಸಂಗ್ರಹ ಮಾಡುವುದನ್ನು ಖಾತ್ರಿಪಡಿಸಿಕೊಳ್ಳಲು, ಹವಾಮಾನ ಮತ್ತು ಮಣ್ಣಿನ ಸ್ಥಿತಿಗತಿ ಆಧರಿಸಿ ಅದಕ್ಕೆ ಅನುಗುಣವಾಗಿ ಮಳೆ ನೀರು ಕೊಯ್ಲು ವ್ಯವಸ್ಥೆಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ಎಲ್ಲ ಭಾಗಿದಾರರನ್ನು ಒಗ್ಗೂಡಿಸಲಾಗುವುದು. ಕಾರ್ಯಕ್ರಮದ ನಂತರ ಪ್ರತಿಯೊಂದು ಜಿಲ್ಲೆಯಲ್ಲೂ (ವಿಧಾನಸಭೆ ಚುನಾವಣೆ ನಡೆಯುತ್ತಿರುವ ರಾಜ್ಯಗಳನ್ನು ಹೊರತುಪಡಿಸಿ) ಗ್ರಾಮ ಸಭೆಗಳು ನಡೆಯಲಿದ್ದು, ಅಲ್ಲಿ ನೀರು ಮತ್ತು ಜಲಸಂರಕ್ಷಣೆ ಕುರಿತಂತೆ ಚರ್ಚೆ ನಡೆಸಲಾಗುವುದು. ಗ್ರಾಮ ಸಭೆಗಳು, ನೀರಿನ ಸಂರಕ್ಷಣೆಗೆ ‘ಜಲ ಶಪಥ’ವನ್ನು ಕೈಗೊಳ್ಳಲಿವೆ.

ಏನಿದು ಕೆನ್ ಬೆಟ್ವಾ ಜೋಡಣಾ ಯೋಜನೆ?

ಅಂತರ ನದಿ ಜೋಡಣೆಗಳ ಮೂಲಕ ಹೆಚ್ಚಿನ ನೀರಿರುವ ಪ್ರದೇಶಗಳಿಂದ ಬರಪೀಡಿತ ಮತ್ತು ನೀರಿನ ಕೊರತೆ ಎದುರಿಸುತ್ತಿರುವ ಪ್ರದೇಶಗಳಿಗೆ ನೀರು ಒದಗಿಸುವ ಮಹತ್ವಾಕಾಂಕ್ಷೆಯ ದೃಷ್ಟಿಯಿಂದ ಈ ಒಪ್ಪಂದವು ಅಂತರರಾಜ್ಯ ಸಹಕಾರ ಆರಂಭಕ್ಕೆ ನಾಂದಿ ಹಾಡಲಿದೆ. ಈ ಯೋಜನೆಯಲ್ಲಿ ದೌದಾನ್ ಅಣೆಕಟ್ಟೆ ನಿರ್ಮಾಣದ ಮೂಲಕ ಕೆನ್ ನಿಂದ ಬೆಟ್ವಾ ನದಿಗೆ ನೀರು ಹರಿಸಲಾಗುವುದು. ಇದು ಬಹು ಉದ್ದೇಶದ ಯೋಜನೆ ಆಗಿದ್ದು, ವಾರ್ಷಿಕ 10.62 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಕರ್ಯ ಲಭ್ಯವಾಗಲಿದೆ.‌ 62 ಲಕ್ಷ ಜನರಿಗೆ ಕುಡಿಯುವ ನೀರು ಪೂರೈಕೆಯಾಗಲಿದೆ ಮತ್ತು 103 ಮೆಗಾವ್ಯಾಟ್ ಜಲ ವಿದ್ಯುತ್ ಉತ್ಪಾದನೆಯಾಗಲಿದೆ. ಬುಂಡೇಲ್ ಖಂಡದ ನೀರಿನ ಕೊರತೆ ಎದುರಿಸುತ್ತಿರುವ ಪ್ರದೇಶಗಳಲ್ಲಿ ಅದರಲ್ಲೂ ವಿಶೇಷವಾಗಿ ಮಧ್ಯಪ್ರದೇಶದ ಪನ್ನಾ, ಟಿಕಮ್ ಗರ್, ಛಾತ್ರಾಪುರ್, ಸಾಗರ್, ದಮೋಹ್, ದತಿಯಾ ವಿದಿಶಾ, ಶಿವಪುರಿ ಮತ್ತು ಉತ್ತರ ಪ್ರದೇಶದ ಬಂಡ, ಮಹೋಬಾ, ಝಾನ್ಸಿ ಮತ್ತು ಲಲಿತ್ ಪುರ್ ಗೆ ನೀರು ಒದಗಿಸಲಿದೆ.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.