• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬೇರೆ ಪಕ್ಷದಿಂದ ಬಂದು ಗುಂಪುಗಾರಿಕೆ ಮಾಡೋರು, ಪಕ್ಷ ಹಾಳು ಮಾಡೋರು ನಮಗೆ ಬೇಡ; ಕೈ ನಾಯಕರಿಗೆ ಡಿಕೆಶಿ ಪರೋಕ್ಷ ಟಾಂಗ್

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಬೇರೆ ಪಕ್ಷದಿಂದ ಬಂದು ಗುಂಪುಗಾರಿಕೆ ಮಾಡೋರು, ಪಕ್ಷ ಹಾಳು ಮಾಡೋರು ನಮಗೆ ಬೇಡ; ಕೈ ನಾಯಕರಿಗೆ ಡಿಕೆಶಿ ಪರೋಕ್ಷ ಟಾಂಗ್
0
SHARES
0
VIEWS
Share on FacebookShare on Twitter

ಬೆಂಗಳೂರು,ಜೂ.26: ಗುಂಪುಗಾರಿಕೆ ಮಾಡಿ ಪಕ್ಷವನ್ನು ಹಾಳು ಮಾಡುವವರು ನಮಗೆ ಬೇಡ. ವ್ಯಕ್ತಿ ಪೂಜೆ ಬಿಟ್ಟು, ಪಕ್ಷ ಪೂಜೆ ಮಾಡುವ, ಪಕ್ಷದ ಸಿದ್ಧಾಂತ ಮತ್ತು ನಾಯಕತ್ವ ನಂಬಿ ಬರುವವರನ್ನು ಮಾತ್ರ ಕಾಂಗ್ರೆಸ್ ಗೆ ಸೇರಿಸಿಕೊಳ್ಳಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಹಾಸನ ಜಿಲ್ಲೆ ಬೇಲೂರು ಪುರಸಭೆಗೆ ಆಯ್ಕೆ ಆಗಿರುವ ಕಾಂಗ್ರೆಸ್ ಸದಸ್ಯರನ್ನು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಅಭಿನಂದಿಸಿದ ಹಾಗೂ ಹಾಸನ ಜಿಲ್ಲೆಯ ಅನ್ಯಪಕ್ಷಗಳ ಮುಖಂಡರನ್ನು ಪಕ್ಷಕ್ಕೆ ಬರಮಾಡಿಕೊಂಡ ಸಂದರ್ಭ‌ ಮಾತನಾಡಿದ ಅವರು, ಜತೆಗೂಡುವುದು ಆರಂಭ, ಜತೆಗೂಡಿ ಯೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು ಎಂಬ ಮಾತಿಗೆ’ ಬೇಲೂರು ಪುರಸಭೆ ಫಲಿತಾಂಶವೇ ಸಾಕ್ಷಿ. ಇದನ್ನು ಕಾಂಗ್ರೆಸ್ ಪಕ್ಷದ ಎಲ್ಲರೂ ಅರಿತುಕೊಳ್ಳಬೇಕು. ಕಾಂಗ್ರೆಸ್ ಕಚೇರಿ ದೇವಾಲಯವಿದ್ದಂತೆ. ದೇವಾಲಯಕ್ಕೆ ನಾವು ಹೋಗಿ ಪೂಜೆ ಮಾಡುವುದು ಯಾಕೆ? ನಮಗೆ ನೆಮ್ಮದಿ ಸಿಗಲಿ, ಕಷ್ಟ ನಿವಾರಣೆಯಾಗಿ ಶ್ರೇಯಸ್ಸು ಸಿಗಲಿ ಅಂತಾ. ಭಕ್ತ ಹಾಗೂ ಭಗವಂತನಿಗೂ ಇರುವ ನಂಟಿನ ಸ್ಥಳ ದೇವಾಲಯ. ಯಾವುದೇ ಧರ್ಮವಾಗಿರಲಿ ದೇವರ ಮುಂದೆ ಪ್ರಾರ್ಥಿಸುತ್ತೇವೆ.

ಅದೇ ಕಾರಣಕ್ಕೆ ನಾನು ದೇವಾಲಯದಂತಿರುವ ನಮ್ಮ ಕಾಂಗ್ರೆಸ್ ಕಚೇರಿಯನ್ನು ಸ್ವಲ್ಪ ಬದಲಾವಣೆ ಮಾಡಿದ್ದೇನೆ. ಹಿಂದೆ ರುದ್ರೇಶ್ ಅವರು ಚುನಾವಣೆಯಲ್ಲಿ ಗೆದ್ದಿದ್ದರು. ಆದರೆ ಅವರು ಈಗ ನಮ್ಮ ಜತೆ ಇಲ್ಲ. ನಾವೇ ಹೆಣ್ಣುಮಗಳಿಗೆ ಒತ್ತಾಯ ಮಾಡಿ ಚುನಾವಣೆಗೆ ಸ್ಪರ್ಧಿಸುವಂತೆ ಮಾಡಿದ್ದೆವು. ಆದರೆ ಅವರು ಹೋರಾಡಿ ಸೋತಿದ್ದಾರೆ. ಅದಕ್ಕೆ ನಾವು ಸೇರಿದಂತೆ ನಾನಾ ಕಾರಣಗಳಿರಬಹುದು. ಮುಂದೆ ನಾವು ಕಾರ್ಯಕರ್ತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು.

ಎಷ್ಟು ಜನ ನನ್ನ ಸಂಪರ್ಕದಲ್ಲಿದ್ದಾರೆ ಎಂಬುದನ್ನು ಸದ್ಯಕ್ಕೆ ನಾನು ಹೇಳುವುದಿಲ್ಲ. ಯಾವುದೇ ಕಾರಣಕ್ಕೂ ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದು ಬಿಜೆಪಿ ಶಾಸಕರು, ಮಂತ್ರಿಗಳಿಗೆ ಮನವರಿಕೆಯಾಗಿದೆ. ಈ ಸಮಯದಲ್ಲಿ ಪಕ್ಷ ಸಂಘಟನೆ ಮಾಡಿ, ಪಕ್ಷವನ್ನು ಅಧಿಕಾರಕ್ಕೆ ತಂದು ಜನರಿಗೆ ಅನುಕೂಲ ಮಾಡಿಕೊಡಬೇಕು. ಜನರ ಹೃದಯ ಗೆಲ್ಲಲು ಬಿಜೆಪಿ ಅವರಿಗೆ ಎಂತಹ ಅವಕಾಶ ಸಿಕ್ಕಿತ್ತು. ಆದರೆ ಅವರು ಜನರ ಹೃದಯ ಗೆಲ್ಲಲಿಲ್ಲ. ಬದಲಿಗೆ ಜನರಿಗೆ ಬೂದಿ ಕೊಟ್ಟರು. ಆಸ್ಪತ್ರೆ ಬಿಲ್ ಕೊಡಲು ಶಕ್ತಿ ಇಲ್ಲದವರನ್ನು ಸ್ಮಶಾನಕ್ಕೆ ಕಳುಹಿಸಿದರು ಎಂದು ಬಿಜೆಪಿ‌ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಪಕ್ಷದ ಸಿದ್ದಾಂತ ಹಾಗೂ ನಾಯಕತ್ವ ನಂಬಿ ಬರುವವರ ಪಟ್ಟಿಯನ್ನು ನೀವೆಲ್ಲಾ ಸೇರಿ ಕೊಡಿ. ಅದಕ್ಕಾಗಿ ಸಮಿತಿ ಇದೆ, ಅದರ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಬೇರೆ ಪಕ್ಷದಿಂದ ಬಂದು ಗುಂಪುಗಾರಿಕೆ ಮಾಡುವವರು, ಪಕ್ಷ ಹಾಳು ಮಾಡುವವರು ನಮಗೆ ಬೇಡ. ವ್ಯಕ್ತಿ ಪೂಜೆ ಬಿಟ್ಟು, ಪಕ್ಷ ಪೂಜೆ ಮಾಡುವವರನ್ನು ಮಾತ್ರ ಸೇರಿಸಿಕೊಳ್ಳಿ. ಪದಾಧಿಕಾರಿಗಳ ಪೈಕಿ ಯಾರು ಕಾರ್ಯಪ್ರವೃತ್ತವಾಗಿಲ್ಲ, ಅವರನ್ನು ಬದಲಾಯಿಸುತ್ತೇವೆ. ಪ್ರತಿ ಪಂಚಾಯ್ತಿ ಮಟ್ಟದಲ್ಲಿ ಸಮಿತಿ ರಚಿಸಿ ವಿದ್ಯಾರ್ಥಿಗಳು, ಮಹಿಳೆಯರು, ಯುವಕರು, ಹಿಂದುಳಿದವರು ಎಲ್ಲರಿಗೂ ಪ್ರಾತಿನಿಧ್ಯ ನೀಡಬೇಕು. ಹೀಗಾಗಿ ಎಲ್ಲ ಘಟಕಗಳ ಸಮಿತಿ ಮಾಡಬೇಕಾಗುತ್ತದೆ ಎಂದ ಅವರು, ನಿಮ್ಮಲ್ಲಿ ಯಾವುದೇ ಕಾರಣಕ್ಕೂ ಗೊಂದಲ ಆಗಬಾರದು. ನೀವ್ಯಾರೂ ಅದಕ್ಕೆ ಅವಕಾಶ ಕೊಡಬಾರದು. ನಾವು ಒಂದು ಹಂತದವರೆಗೂ ನೋಡುತ್ತೇವೆ. ಇಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಫಾಲೋವರ್ ಆಗಬೇಕು. ರಾಹುಲ್ ಗಾಂಧಿ ಅವರು ಹೇಳಿದ ಮಾತಿನಂತೆ ಕಾಂಗ್ರೆಸ್ ಧ್ವಜವೇ ನಮ್ಮ ಧರ್ಮ ಎಂಬುದು ನಿಮ್ಮ ತಲೆಯಲ್ಲಿ ಇರಲಿ. ಗಾಂಧಿ ಕುಟುಂಬದಲ್ಲಿ ಮಾತ್ರ ಇಂತಹ ದೊಡ್ಡ ಹಾಗೂ ತ್ಯಾಗದ ತೀರ್ಮಾನ ಬರಲು ಸಾಧ್ಯ. ಆ ಪಕ್ಷ ಹಾಗೂ ನಾಯಕತ್ವದಲ್ಲಿ ಕೆಲಸ ಮಾಡುವಾಗ ನಾವು ಅದನ್ನೇ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು. ಪಕ್ಷದ  ಮೇಲೆ ನಂಬಿಕೆ ಇಟ್ಟು ಸೇರ್ಪಡೆಯಾಗುತ್ತಿರುವವರಿಗೆ ಅಭಿನಂದನೆಗಳು ಎಂದರು.

Related News

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.