Karwar: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ದಿನೇ ದಿನೇ ಗೋವುಗಳ (Cow) ಮೇಲೆ ಹಲ್ಲೆಯಂತಹ ಹೇಯ ಕೃತ್ಯಗಳು ಬೆಳಕಿಗೆ ಬರುತ್ತಿದ್ದು, ಅದರ ನಡುವೆ ಇಂದು ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ಮಂಕಾಳ ವೈದ್ಯ (Mankal Vaidya) ಅವರು, ಗೋವು ಕಳ್ಳತನ (Cow Steal) ಹಾಗೂ ಅವುಗಳ ಮೇಲೆ ಹಲ್ಲೆ ಮಾಡುವವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇತ್ತೀಚೆಗೆ ಚಾಮರಾಜಪೇಟೆಯಲ್ಲಿ (Chamarajpet) ಹಸುವಿನ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಇದರ ನಡುವೆಯೆ ಹೊನ್ನಾವರದಲ್ಲಿ (Honnavar) ಗರ್ಭಿಣಿ ಹಸುವಿನ ಹೊಟ್ಟೆ ಸೀಳಿ ಹತ್ಯೆ ಮಾಡಲಾಗಿತ್ತು. ಈ ಎಲ್ಲಾ ಪ್ರಕರಣಗಳ ಬಳಿಕ ಮಂಕಾಳ ವೈದ್ಯ ಅವರು ಗೋವುಗಳ ಹಂತಕರ ವಿರುದ್ಧ ಕಿಡಿಕಾರಿದ್ದಾರೆ.

ನಾವು ಪೂಜೆ ಮಾಡುವ ಪ್ರಾಣಿ ಗೋವು. ಅದನ್ನು ನಾವು ಬಹಳ ಪ್ರೀತಿಯಿಂದ ಸಾಕುತ್ತೇವೆ. ಅದರ ಹಾಲನ್ನು ಕುಡಿದು ನಾವು ಬದುಕುತ್ತಿದ್ದೇವೆ. ಪೊಲೀಸ್ ಇಲಾಖೆಯವರಿಗೆ (Police department) ನೇರವಾಗಿ ಹೇಳಿದ್ದೇನೆ. ಅವರು, ಇವರು ಎಂದು ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ. ಅಷ್ಟಾಗಿಯೂ ಕ್ರೌರ್ಯ ಮುಂದುವರಿದರೆ, ಬಹುಶಃ ಹೇಳಿದರೆ ತಪ್ಪಾಗಬಹುದೇನೋ, ರಸ್ತೆಯಲ್ಲಿ ಸರ್ಕಲಲ್ಲಿ ನಿಲ್ಲಿಸಿ ಗುಂಡುಹಾರಿಸುವಂತೆ ಮಾಡುತ್ತೇನೆ ಎಂದು ಮಂಕಾಳ ವೈದ್ಯ (Mankala Vaidya) ಹೇಳಿದ್ದಾರೆ.
ಇನ್ನು ಈ ಕುರಿತಾಗಿ ಕಾರವಾರದಲ್ಲಿ ನಡೆದ ತ್ರೈಮಾಸಿಕ ಸಭೆಯಲ್ಲಿ ಆಕಳು ಕಳ್ಳರ ವಿರುದ್ಧ ಕಿಡಿಕಾರಿದರು. ಉತ್ತರಕನ್ನಡ (Uttara Kannada) ಸೇರಿದಂತೆ ಹಲವಾರು ಜಿಲ್ಲೆಯಲ್ಲಿ ಗೋ ಕಳ್ಳತನ ಹಲವು ವರ್ಷಗಳಿಂದ ನಡೆಯುತ್ತಿದೆ. ಗೋ ಕಳ್ಳತನ ಪ್ರಕರಣದಲ್ಲಿ ಪೊಲೀಸ್ ಇಲಾಖೆಯಿಂದ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದೇನೆ. ಗೋ ಕಳ್ಳತನ ಪ್ರಕರಣದಲ್ಲಿ ಹಲವು ಆರೋಪಿಗಳನ್ನ ಬಂಧಿಸಲಾಗಿದೆ. ಮುಂದೆಯೂ ಪೊಲೀಸ್ ಇಲಾಖೆ (Police department) ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರೆ ನೀಡಿದ್ದಾರೆ.