ನವದೆಹಲಿ : ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ(Vidhansabha Election) ಕಾಂಗ್ರೆಸ್ ಪಕ್ಷಕ್ಕೆ(Congress Party) ಸ್ಪಷ್ಟ ಬಹುಮತ ದೊರೆಯಲಿದೆ. ೧೫೦ ಸ್ಥಾನಗಳನ್ನು ಪಡೆಯುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡೋದು ಶತಸಿದ್ದ ಎಂದು ವಿಪಕ್ಷ ನಾಯಕ(Opposition Leader) ಸಿದ್ದರಾಮಯ್ಯ(Siddaramaiah) ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನವದೆಹಲಿಯಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ೧೫೦ ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಕಾಂಗ್ರೆಸ್ ಪಕ್ಷ ಹೊಂದಿದೆ. ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡುತ್ತೆ ಎಂದು ಈಗಾಗಲೇ ಕೆಲ ಸಮೀಕ್ಷೆಗಳು ಹೇಳಿವೆ. ಇನ್ನು ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಬರುವವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಈಗಾಗಲೇ ಅನೇಕ ಬಿಜೆಪಿ(BJP) ಮತ್ತು ಜೆಡಿಎಸ್ ಶಾಸಕರು(JDS MLA) ನಮ್ಮ ಸಂಪರ್ಕದಲ್ಲಿದ್ದಾರೆ.
ಆದರೆ ಎಷ್ಟು ಜನ ಶಾಸಕರು ಸಂಪರ್ಕದಲ್ಲಿದ್ದಾರೆಂದು ಈಗಲೇ ಹೇಳಲು ಸಾಧ್ಯವಿಲ್ಲ. ಚುನಾವಣೆ ಇನ್ನೂ ದೂರವಿದ್ದು, ಮುಂದಿನ ದಿನಗಳಲ್ಲಿ ನಿಮಗೆ ಎಲ್ಲವೂ ತಿಳಿಯಲಿದೆ ಎಂದರು. ಇದೇ ವೇಳೆ ಜಿಎಸ್ಟಿ ಹೆಚ್ಚಳದ ಕುರಿತು ಮಾತನಾಡಿದ ಅವರು, ಜಿಎಸ್ಟಿಯಿಂದ ಜನಸಾಮಾನ್ಯರ ಮೇಲೆ ಹೆಚ್ಚುವರಿ ಟ್ಯಾಕ್ಸ್(Tax) ಬರೆ ಎಳೆಯಲಾಗುತ್ತಿದೆ. ಅಗತ್ಯ ವಸ್ತುಗಳ ಮೇಲೆ ಶೇ.೫ ರಷ್ಟು ಜಿಎಸ್ಟಿ ಏರಿಕೆ ಮಾಡಲಾಗಿದೆ. ಕೃಷಿ ಉಪಕರಣಗಳ ಮೇಲೆ ಶೇ.೧೨ ರಿಂದ ಶೇ.೧೮ಕ್ಕೆ ಜಿಎಸ್ಟಿ ಏರಿಕೆ ಮಾಡಲಾಗಿದೆ.

ಇದು ಅವೈಜ್ಞಾನಿಕವಾಗಿ ರೂಪಿಸಿರುವ ಕ್ರಮವಾಗಿದೆ ಎಂದು ಕಿಡಿಕಾರಿದರು. ಇಲ್ಲಿಯವರೆಗೆ ಜಿಎಸ್ಟಿ ನಷ್ಟವನ್ನು ಕೇಂದ್ರ ಸರ್ಕಾರ(Central Government) ರಾಜ್ಯಗಳಿಗೆ ನೀಡುತ್ತಿತ್ತು. ಇಂದಿನಿಂದ ನಷ್ಟವನ್ನು ರಾಜ್ಯಗಳೇ ತುಂಬಿಕೊಳ್ಳಬೇಕು. ಇದರಿಂದ ಕರ್ನಾಟಕ ರಾಜ್ಯಕ್ಕೆ ಸುಮಾರು ೨೦ ಸಾವಿರ ಕೋಟಿ ರೂ. ನಷ್ಟವಾಗಲಿದೆ. ಹೀಗಾಗಿ ಕೇಂದ್ರ ಸರ್ಕಾರ ಇನ್ನೂ ೫ ವರ್ಷ ರಾಜ್ಯಗಳಿಗೆ ಜಿಎಸ್ಟಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.