ಮುಂದಿನ 5 ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹವಾಮಾನ ಇಲಾಖೆ (Weather forecast alerts coastal regions)ಎಚ್ಚರಿಕೆ ಗಂಟೆಯನ್ನು ಭಾರಿಸಿದೆ.
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ದಿನಾಂಕ 7 ರಿಂದ ಕೇರಳ ಲಕ್ಷದ್ವೀಪ ಕರಾವಳಿಯಲ್ಲಿ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ(Weather forecast alerts coastal regions).

ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ದಕ್ಷಿಣ ದಕ್ಷಿಣ ಕನ್ನಡ ಜಿಲ್ಲೆಯ ಮೀನುಗಾರರನ್ನು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಸಿದೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು, ಪಿಯುಸಿ, ಪ್ರಥಮ ದರ್ಜೆ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. https://vijayatimes.com/state-bjp-tweets-against-siddaramaiah/
ಅಂತೆಯೇ ಕೊಡಗು ಜಿಲ್ಲೆಯಲ್ಲಿ ಕೂಡ ಮಳೆ ಹೆಚ್ಚಾಗಿರುವ ಕಾರಣ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.