ರಾಜ್ಯದಲ್ಲಿ ಮೂರು ದಿನಗಳ ಕಾಲ ಮಳೆ ಸುರಿಯಲಿದೆ ಎಂಬ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ತಮಿಳುನಾಡು ಕರಾವಳಿ ಪ್ರದೇಶಗಳಲ್ಲಿ ಉದ್ಬವಗೊಂಡಿರುವ ವಾಯುಭಾರ ಕುಸಿತದ ಹಿನ್ನಲೆ ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಒಟ್ಟು 8 ಜಿಲ್ಲೆಯಲ್ಲಿ ಭಾರಿ ಮಳೆ ಸಂಭವಿಸಲಿದೆ ಎಂದು ವರದಿಯಲ್ಲಿ ತಿಳಿಸಿದೆ.

ಸುಳಿಗಾಳಿ ಅಪ್ಪಳಿಸುವ ಕಾರಣ ಏಪ್ರಿಲ್ 4,5 ಮತ್ತು 6 ರಂದು ಮಳೆ ಸುರಿಯುವ ಸಾಧ್ಯತೆ ಇದ್ದು, ಬೆಂಗಳೂರು, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಚಾಮರಾಜನಗರ ಮತ್ತು ಮೈಸೂರಿನಲ್ಲಿ ಗುಡುಗು ಸಹಿತ ಮಳೆ ಸುರಿಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಳನಾಡಿನ ಪ್ರದೇಶಗಳಲ್ಲಿ ಮಳೆ ಸಂಭವಿಸಲಿದೆ.

ಏಪ್ರಿಲ್ 04 ರಂದು ಕರಾವಳಿ ಪ್ರದೇಶಗಳಾದ ಉಡುಪಿ, ಮಂಗಳೂರು ಮತ್ತು ದಕ್ಷಿಣ ಕನ್ನಡ ಭಾಗದಲ್ಲಿ ಪ್ರಾರಂಭವಾಗಲಿದ್ದು, ಮೂರು ದಿನ ಮಳೆ ಆರ್ಭಟಕ್ಕೆ ಮೈಸೂರು, ಹಾಸನ, ಸಕಲೇಶಪುರ, ಕೊಡಗು, ರಾಮನಗರ, ಶಿವಮೊಗ್ಗ, ಮಂಡ್ಯ, ಕೋಲಾರದಲ್ಲಿ ಧಾರಕಾರ ಮಳೆ ಸುರಿಯಲಿದೆ ಎಂಬ ಮುನ್ಸೂಚನೆಯನ್ನು ಹವಮಾನ ಇಲಾಖೆ ಸೂಚಿಸಿದೆ.