ಬೆಂಗಳೂರು ಜ 7 : ನಗರದಲ್ಲಿ ವೀಕೆಂಡ್ ಕರ್ಫ್ಯೂ ಇರುವ ಕಾರಣ ಜನವರಿ 7,8 ಹಾಗೂ 14, 15ರಂದು ಸಾಮಾನ್ಯ ಜನರಿಗೆ ಬಿಎಂಟಿಸಿ ಸೇವೆ ಲಭ್ಯವಿರುವುದಿಲ್ಲ ಎಂದು ಬಿಎಂಟಿಸಿ ಸ್ಪಷ್ಟಪಡಿಸಿದೆ. ಆದರೆ ಅಗತ್ಯ ಸೇವೆಗಳನ್ನು ಒದಗಿಸುವ ಸಿಬ್ಬಂದಿ ಕಚೇರಿಗೆ ಹೋಗಲು ಶೇ 10ರಷ್ಟು ಬಸ್‌ಗಳನ್ನು ಮಾತ್ರ ಓಡಿಸಲಾಗುತ್ತದೆ. ಕಂಟೈನ್‌ಮೆಂಟ್ ಝೋನ್‌ಗಳಲ್ಲಿ ಬಸ್ ಸಂಚಾರ ಇರುವುದಿಲ್ಲ. ಅಗತ್ಯ ಸೇವೆಗಳಿಗಾಗಿ ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆ ತನಕ ಮಾತ್ರ ಬಸ್ ಸಂಚಾರ ಇರುತ್ತದೆ. ಎಂದು ಬಿಎಂಟಿಸಿ ತಿಳಿಸಿದೆ.
ಯಾರಿಗೆ ಬಸ್‌ನಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ ಎಂದು ನೋಡುವುದಾದರೆ,
- ಆಸ್ಪತ್ರೆಗೆ ತೆರಳುವ ರೋಗಿಗಳು ಮತ್ತು ಅವರನ್ನು ಚಿಕಿತ್ಸೆ, ಪರೀಕ್ಷೆಗೆ ಕರೆದುಕೊಂಡು ಹೋಗವವರು ಸಂಚಾರ ನಡೆಸಬಹುದು.
- ಸರ್ಕಾರಿ/ ಖಾಸಗಿ ಬ್ಯಾಂಕ್, ವಿಮೆ ಕಂಪನಿಗಳ ಸಿಬ್ಭಂದಿಗಳು, ಅಧಿಕಾರಿಗಳು. ಮುದ್ರಣ ಮತ್ತು ದೃಶ್ಯ ಮಾಧ್ಯಮದಲ್ಲಿ ಕೆಲಸ ಮಾಡುವವರು ಸಂಚರಿಸಬಹುದು.
- ದೂರದ ಊರುಗಳಿಗೆ ಪ್ರಯಾಣ ಮಾಡುವ ಬಸ್, ವಿಮಾನ, ರೈಲು ಪ್ರಯಾಣಿಕರು. (ಟಿಕೆಟ್ ತೋರಿಸಿ ಪ್ರಯಾಣ ಮಾಡಬೇಕು).
- ಪರೀಕ್ಷೆ ಬರೆಯಲು ಹೋಗುವ ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ ಪ್ರಯಾಣಿಸಬಹುದು.
- ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ಯೋಗಿಗಳು. ಬೋರ್ಡ್/ ಕಾರ್ಪೊರೇಷನ್‌ನ ಸಿಬ್ಬಂದಿಗಳು. ಪೊಲೀಸ್, ಹೋಂ ಗಾರ್ಡ್, ಸಿವಿಲ್ ಡಿಫೆನ್ಸ್, ಅಗ್ನಿ ಶಾಮಕ & ತುರ್ತು ಸೇವೆಗಳ ಸಿಬ್ಬಂದಿ ಬಸ್‌ನಲ್ಲಿ ಸಂಚಾರ ನಡೆಸಬಹುದಾಗಿದೆ.
- ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯರು, ಸಿಬ್ಬಂದಿ, ಲ್ಯಾಬ್ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಇತರ ಸಿಬ್ಬಂದಿಗಳು. ಪ್ರಯಾಣಿಸಬಹುದಾಗಿದೆ.