Visit Channel

ಸುವೇಂದು ಅಧಿಕಾರಿಯ ಅಂಗರಕ್ಷಕನ ಸಾವಿನ ತನಿಖೆ ಕೈಗೆತ್ತಿಕೊಂಡ ಪಶ್ಚಿಮ ಬಂಗಾಳ ಸಿಐಡಿ

suvendu-adhikari1626072990

ಕೋಲ್ಕತ್ತ, ಜು. 12: ನಂದಿಗ್ರಾಮದ ಬಿಜೆಪಿ ಶಾಸಕ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿಯವರ ಅಂಗರಕ್ಷನ ಸಾವಿನ ತನಿಖೆಯನ್ನು ಪಶ್ಚಿಮ ಬಂಗಾಳ ಅಪರಾಧ ತನಿಖಾ ಇಲಾಖೆ (ಸಿಐಡಿ) ಸೋಮವಾರ ಕೈಗೆತ್ತಿಕೊಂಡಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಸುವೇಂದು ಅಧಿಕಾರಿಯ ಅಂಗರಕ್ಷಕ ಸುಬ್ರತಾ ಚಕ್ರವರ್ತಿ ಅವರ ಸಾವಿನ ಬಗ್ಗೆ ನಾವು ತನಿಖೆ ನಡೆಸಲಿದ್ದೇವೆ. ಅವರ ಪತ್ನಿ ಪೊಲೀಸರಿಗೆ ದೂರು ನೀಡಿದ ಆಧಾರದ ಮೇಲೆ ತನಿಖೆ ಕೈಗೊಂಡಿರುವುದಾಗಿ ಸಿಐಡಿ ಅಧಿಕಾರಿ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಟಿಎಂಸಿ ಸಂಸದರಾಗಿದ್ದಾಗಿನಿಂದ ಸುವೇಂದು ಅಧಿಕಾರಿಯ ಭದ್ರತಾ ತಂಡದ ಭಾಗವಾಗಿದ್ದ 40 ವರ್ಷದ ಚಕ್ರವರ್ತಿ ಅವರು ರಾಜ್ಯ ಸಶಸ್ತ್ರ ಪೊಲೀಸ್ ಸಿಬ್ಬಂದಿಯಾಗಿದ್ದರು. 2015 ರಲ್ಲಿ ಸುವೇಂದು ರಾಜ್ಯ ಸಚಿವರಾದ ನಂತರವೂ ತಂಡದಲ್ಲಿ ಮುಂದುವರಿದಿದ್ದರು.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.