ಪಶ್ಚಿಮ ಬಂಗಾಳ ಚುನಾವಣೆ: ಬಿಜೆಪಿ- ಟಿಎಂಸಿ ಕಾರ್ಯಕರ್ತರ ಹೊಡೆದಾಟ; ಒಟ್ಟು ಐವರು ಸಾವು

ಕೋಲ್ಕತ್ತಾ, ಏ. 10: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ನಾಲ್ಕನೇ ಹಂತದ ಮತದಾನದ ವೇಳೆ ಒಟ್ಟು ಐವರು ಮೃತಪಟ್ಟಿದ್ದಾರೆ. ಕೂಚ್ ಬೆಹರ್ ಜಿಲ್ಲೆಯಲ್ಲಿ ಶನಿವಾರ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ನಡೆದ ಹೊಡೆದಾಟದಲ್ಲಿ ನಾಲ್ವರು ಗುಂಡಿಗೆ ಬಲಿಯಾಗಿದ್ದಾರೆ. ಇನ್ನು ಮತದಾನ ಬೂತ್ ಹೊರಗೆ ಓರ್ವ ಮತದಾರ ಗುಂಡಿಗೆ ಬಲಿಯಾಗಿದ್ದಾರೆ ಎಂದು ವರದಿ ಆಗಿದೆ.

ಟಿಎಂಸಿ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಹೊಡೆದಾಟ ಏರ್ಪಟ್ಟ ನಂತರ ಈ ಘಟನೆ ಸಂಭವಿಸಿದೆ. ಇನ್ನು ಈ ಕೃತ್ಯಕ್ಕೆ ಯಾರು ಕಾರಣ ಎಂಬುದನ್ನು ಪತ್ತೆ ಹಚ್ಚಬೇಕಿದೆ. ದುಷ್ಕರ್ಮಿಗಳು ತಪ್ಪಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಘಟನೆಯಿಂದ ಸ್ಥಳದಲ್ಲಿ ಹಿಂಸಾಚಾರಕ್ಕೆ ಕಾರಣವಾಗಿದೆ. ಬಾಂಬ್​ಗಳನ್ನು ಎಸೆಯಲಾಗಿದೆ. ಪರಿಸ್ಥಿತಿಯನ್ನು ಹತೋಟಿಗೆ ತರುವುದಕ್ಕೆ ಕೇಂದ್ರ ಪಡೆಗಳನ್ನು ಬಳಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಒಟ್ಟು 44 ಕ್ಷೇತ್ರಗಳಿಗೆ ಕೋವಿಡ್- 19 ಪ್ರೊಟೊಕಾಲ್ ಪಾಲನೆಯೊಂದಿಗೆ ಮತದಾನ ನಡೆಯುತ್ತಿದ್ದು, ಅದರಲ್ಲಿ ಹೌರಾದ 9, ದಕ್ಷಿಣ ಪರಗಣದ 11, ಅಲಿಪುರ್​ದುರ್ 5, ಕೂಚ್​​ಬೆಹರ್​ನ 9 ಮತ್ತು ಹೂಗ್ಲಿಯ 10 ಸ್ಥಾನಗಳಲ್ಲಿ ಮತದಾನ ನಡೆಯುತ್ತಿದೆ.

Exit mobile version